Suvarna News

1.4M Followers

SSLC ಪರೀಕ್ಷೆ ರದ್ದತಿಗೆ ಪಿಐಎಲ್: ಹೈಕೋರ್ಟ್ ಕೋರ್ಟ್ ಹೇಳಿದಿಷ್ಟು..?

27 May 2020.7:18 PM

ಬೆಂಗಳೂರು, (ಮೇ.27): ಕೊರೋನಾ ಭೀತಿ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ ಪರೀಕ್ಷೆ ನಡೆಸದಂತೆ ಸಲ್ಲಿಸಿದ್ದ ಪಿಐಎಲ್‌ ಅನ್ನು ಕರ್ನಾಟಕ ಹೈಕೋರ್ಟ್ ಇಂದು (ಬುಧವಾರ) ಇತ್ಯಾರ್ಥಸೊಳಿಸಿದೆ.

ಕೊರೋನಾ ಹೆಚ್ಚಾಗುತ್ತಿರುವುದರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಮಾಡುವಂತೆ ವಕೀಲ ಲೋಕೆಶ್ ಎಂಬುವವರು ಪಿಐಎಲ್‌ ಸಲ್ಲಿಸಿದ್ದರು.ಈ ಅರ್ಜಿಯನ್ನು ಇಂದು (ಬುಧವಾರ) ವಿಚಾರಣೆ ನಡೆಸಿದ ಕೋರ್ಟ್, ಯಾವುದೇ ವಿದ್ಯಾರ್ಥಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ತೆಗೆದುಕೊಂಡು ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಕರ್ನಾಟಕ SSLC ಪರೀಕ್ಷೆ ವೇಳಾಪಟ್ಟಿ ಪ್ರಕಟ

ಈ ಮೊದಲು ಹೈಕೋರ್ಟ್, ರಾಜ್ಯ ಸರ್ಕಾರದಿಂದ ಪರೀಕ್ಷೆ ನಡೆಸಲು ಮಾಡಿಕೊಂಡಿರುವ ವ್ಯವಸ್ಥೆ ಬಗ್ಗೆ ಮಾಹಿತಿ ಕೇಳಿತ್ತು. ಅದರಂತೆ ಸರ್ಕಾರ 6 ಪುಟಗಳ ಪರೀಕ್ಷೆಯ ಮಾರ್ಗಸೂಚಿಗಳನ್ನು ಸಲ್ಲಿಸಿತ್ತು.

ಈ ಮಾರ್ಗಸೂಚಿಯನ್ನು ಗಮನಿಸಿ ಪುರಸ್ಕರಿಸಿರುವ ಕೋರ್ಟ್, ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಪರೀಕ್ಷೆ ನಡೆಸಬೇಕು. ಯಾವುದೇ ವಿದ್ಯಾರ್ಥಿಗೆ ಇದರಿಂದ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳಬೇಕೆಂದು ಖಡಕ್ ಸೂಚನೆ ನೀಡಿದೆ.

SSLC ಪರೀಕ್ಷೆ ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಪಿಐಎಲ್‌

ಒಂದೆಡೆ ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಿತ್ತಿದ್ರೆ, ಮತ್ತೊದೆಡೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಇದೇ ಜೂನ್ 25ರಿಂದ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇದರಿಂದ ಲೋಕೆಶ್, ಕರ್ನಾಟಕ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದರು.

ಇದೀಗ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಇದ್ದ ಗೊಂದಲ ನಿವಾರಣೆಯಾದಂತಾಗಿದೆ.ಇನ್ನು ಕೆಲ ಸಂಘಟನೆಗಳು, ಹಿರಿಯರು ಸಹ 10ನೇ ತರಗತಿ ಪರೀಕ್ಷೆಗಳನ್ನು ನಡೆಸದಂತೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Asianet News Kannada

#Hashtags