TV9 ಕನ್ನಡ

372k Followers

WhatsApp: ವಾಟ್ಸ್​ಆಯಪ್​ನಿಂದ ಶಾಕಿಂಗ್ ನ್ಯೂಸ್: ಇನ್ನುಂದೆ ಇರಲ್ಲ ಈ ಫೀಚರ್

19 Aug 2022.12:49 PM

WhatsApp New Feature: ಇದೀಗ ಮೆಸೇಜಿಂಗ್ ಅಪ್ಲಿಕೇಷನ್ ಪ್ರೈವಸಿಗೆ ಸಂಬಂಧಿಸಿದಂತೆ ಮಹತ್ವದ ಬದಲಾವಣೆಗೆ ಸಜ್ಜಾಗಿದೆ. ಇನ್ನುಂದೆ ವಾಟ್ಸ್​ಆಯಪ್​ನಲ್ಲಿ ನಿಮಗೆ ಸ್ಕ್ರೀನ್ ಶಾಟ್ ತೆಗೆಯಲು ಸಾಧ್ಯವಿಲ್ಲ. ಸದ್ಯದಲ್ಲೇ ಈ ಆಯ್ಕೆಯನ್ನು ನಿರ್ಬಂಧಿಸಲಿದೆ.

ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆಯಪ್ (WhatsApp) ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಆಕರ್ಷಕ ಆಯ್ಕೆಗಳನ್ನು ನೀಡುತ್ತಿದೆ . ಅತ್ಯಂತ ಸುಲಭವಾಗಿ ಕಾರ್ಯನಿರ್ವಹಿಸುವಂತಹ ಆಯ್ಕೆಯನ್ನು ಒಂದರ ಹಿಂದೆ ಒಂದರಂತೆ ವಾಟ್ಸ್​ಆಯಪ್ ನೀಡುತ್ತಿದೆ . ಈ ವರ್ಷವಂತು ಅನೇಕ ವಿನೂತನ ಅಪ್ಡೇಟ್​ಗಳನ್ನು (Update) ನೀಡಿ ಬಳಕೆದಾರರನ್ನು ಮತ್ತಷ್ಟು ಖುಷಿ ಪಡಿಸುತ್ತಿದೆ . ಹೊಸ ಹೊಸ ಅಪ್ಡೇಟ್​ಗಳ ಜೊತೆಗೆ ಬಳಕೆದಾರರ ಪ್ರೈವಸಿ ಮೇಲೂ ವಾಟ್ಸ್​ಆಯಪ್ ಕಣ್ಣಿಟ್ಟಿದೆ . ಇದೀಗ ಮೆಸೇಜಿಂಗ್ ಅಪ್ಲಿಕೇಷನ್ ಪ್ರೈವಸಿಗೆ ಸಂಬಂಧಿಸಿದಂತೆ ಮಹತ್ವದ ಬದಲಾವಣೆಗೆ ಸಜ್ಜಾಗಿದೆ . ಇನ್ನುಂದೆ ವಾಟ್ಸ್​ಆಯಪ್​ನಲ್ಲಿ ನಿಮಗೆ ಸ್ಕ್ರೀನ್ ಶಾಟ್ (Screenshot) ತೆಗೆಯಲು ಸಾಧ್ಯವಿಲ್ಲ . ಸದ್ಯದಲ್ಲೇ ಈ ಆಯ್ಕೆಯನ್ನು ನಿರ್ಬಂಧಿಸಲಿದೆ .

ಈ ವರ್ಷದ ಆರಂಭದಲ್ಲಿ ವಾಟ್ಸ್​ಆಯಪ್ ವೀವ್ ಒನ್ಸ್ ಎಂಬ ಫೀಚರ್ ಪರಿಚಿಸಿತ್ತು. ಇದರ ಮೂಲಕ ಫೋಟೋ ಅಥವಾ ವಿಡಿಯೋವನ್ನು ಓಪನ್ ಮಾಡಿ ನೋಡಿದ ತಕ್ಷಣ ಅದು ಮಾಯವಾಗುವುದು ಮಾತ್ರವಲ್ಲದೆ, ಇವು ಫೋನ್ ಮೆಮೊರಿಯಲ್ಲಿ ಎಲ್ಲಿಯೂ ಸ್ಟೋರ್ ಕೂಡ ಆಗದಿರುವುದು ವಿಶೇಷವಾಗಿದೆ. ಹಂಚಿಕೊಳ್ಳಲು, ಫಾರ್ವರ್ಡ್ ಮಾಡಲು, ನಕಲಿಸಲು, ಉಳಿಸಲು ಸಾಧ್ಯವಿಲ್ಲ. ಆದರೆ, ಇದನ್ನು ಸ್ಕ್ರೀನ್ ಶಾಟ್ ತೆಗೆಯುವಂತಹ ಆಯ್ಕೆ ಇತ್ತು. ಇದೊಂದು ಕಾರಣದಿಂದ ಅನೇಕರು ಈ ಆಯ್ಕೆಯಿಂದ ಬೇಸರಗೊಂಡಿದ್ದರು. ಇದೀಗ ವಾಟ್ಸ್​ಆಯಪ್ ತನ್ನ ವೀವ್ ಒನ್ಸ್ ಫೀಚರ್​ನಲ್ಲಿ ಸ್ಕ್ರೀನ್ ಶಾಟ್ ತೆಗೆಯುವ ಆಯ್ಕೆಯನ್ನು ಬ್ಲಾಕ್ ಮಾಡಲು ಮುಂದಾಗಿದೆ.

WABetaInfo ಈ ಕುರಿತು ಟ್ವೀಟ್ ಮಾಡಿದ್ದು, 'ವಾಟ್ಸ್​ಆಯಪ್ ಆಂಡ್ರಾಯ್ಡ್ ಬೀಟಾದಲ್ಲಿ ಸ್ಕ್ರೀನ್‌ಶಾಟ್ ನಿರ್ಬಂಧಿಸುವ ಕಾರ್ಯ ಪ್ರಗತಿಯಲ್ಲಿದೆ. ಆಂಡ್ರಾಯ್ಡ್​ಗಾಗಿ ವಾಟ್ಸ್​ಆಯಪ್ ಬೀಟಾದ ಭವಿಷ್ಯದ ನವೀಕರಣಕ್ಕೆ ಧನ್ಯವಾದಗಳು,' ಎಂದು ಬರೆದುಕೊಂಡಿದೆ.

ವಾಟ್ಸ್​ಆಯಪ್​ನಲ್ಲಿ ನೀವು ಡಿಲೀಟ್ ಮಾಡಿದ ಮೆಸೇಜ್ (Message) ಅನ್ನು ರಿಕವರಿ ಮಾಡಬಹುದಂತೆ. ಈ ಬಗ್ಗೆ ವಾಟ್ಸ್​ಆಯಪ್ ​ಬೇಟಾಇನ್​ಫೊ ವರದಿ ಮಾಡಿದ್ದು, ಆಂಡ್ರಾಯ್ಡ್ ಬೇಟಾ ವರ್ಷನ್​ನಲ್ಲಿ ಇದನ್ನು ಪರೀಕ್ಷಿಸಲಾಗುತ್ತಿದೆ. ಈಗ ನೀವು ಯಾರಿಗಾದರು ಮೆಸೇಜ್ ಕಳುಹಿಸಿದ್ದನ್ನು ತಪ್ಪಿ ಡಿಲೀಟ್ ಮಾಡಿದ್ದರೆ ಆ ಮೆಸೇಜ್ ಅನ್ನು ಮರಳಿ ಪಡೆಯುವ ಆಯ್ಕೆ ಇದಾಗಿದೆ. ಆದರೆ, ಇದು ಎಷ್ಟು ಸಮಯದ ಒಳಗೆ ರಿಕವರಿ ಮಾಡಬಹುದು ಎಂಬ ಬಗ್ಗೆ ಇನ್ನೂ ತಿಳಿದುಬಂದಿಲ್ಲ. ಸದ್ಯದಲ್ಲೇ ಈ ಆಯ್ಕೆ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಸಿಗಲಿದೆಯಂತೆ.

ಇನ್ನು ಪ್ರೊಫೈಲ್ ಫೋಟೋದಲ್ಲಿ ಅವತಾರ್ (Avatar) ಎಂಬ ಆಯ್ಕೆಯನ್ನು ವಾಟ್ಸ್​ಆಯಪ್ ಅಭಿವೃದ್ದಿ ಪಡಿಸುತ್ತಿರುವ ಬಗ್ಗೆ ವಾಟ್ಸ್​ಆಯಪ್ ಬೇಟಾಇನ್​ಫೋ ವರದಿ ಮಾಡಿದೆ. ಈ ಅವತಾರ್ ಫೀಚರ್ ಅನ್ನು ಬಳಸಿ ನಿಮ್ಮ ಪ್ರೊಫೈಲ್ ಫೋಟೋವನ್ನು ಇನ್ನಷ್ಟು ಸುಂದರವಾಗಿ ಕಾಣುವಂತೆ ಮಾಡಬಹುದು. ಅಂದರೆ, ಇಲ್ಲಿ ನಿಮಗೆ ಬ್ಯಾಕ್​ಗ್ರೌಂಡ್ ಕಲರ್ ಆಯ್ಕೆ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಸದ್ಯಕ್ಕೆ ಪರೀಕ್ಷಾ ಹಂತದಲ್ಲಿರುವ ಈ ಫೀಚರ್ ಕೆಲವೇ ದಿನಗಳಲ್ಲಿ ಆಂಡ್ರಾಯ್ಡ್, ಐಒಎಸ್ ಹಾಗೂ ಡೆಸ್ಕ್ ಟಾಪ್ ಬಳಕೆದಾರರಿಗೆ ಸಿಗಲಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: TV9 Kannada

#Hashtags