Kannada News Now

1.8M Followers

BIG BREAKING NEWS : ಜಿಯೋ ಗ್ರಾಹಕರಿಗೆ ಗುಡ್‌ ನ್ಯೂಸ್‌ : 'ಜಿಯೋ 5G ಸೇವೆ' ಘೋಷಿಸಿದ ಮುಕೇಶ್ ಅಂಬಾನಿ |Reliance AGM 2022

29 Aug 2022.2:29 PM

ವದೆಹಲಿ : ಮಾರುಕಟ್ಟೆ-ಬಂಡವಾಳೀಕರಣದ ದೃಷ್ಟಿಯಿಂದ ಭಾರತದ ಅತಿದೊಡ್ಡ ಕಂಪನಿಯಾದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL)ನ 45 ನೇ ವಾರ್ಷಿಕ ಸಾಮಾನ್ಯ ಸಭೆ (AGM) ಪ್ರಾರಂಭವಾಗಿದ್ದು, ಆರ್‌ಐಎಲ್‌ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಮುಖ್ಯ ಭಾಷಣ ಮಾಡುತ್ತಿದ್ದಾರೆ.

ಇನ್ನು ಇದೇ ವೇಳೆ ಜಿಯೋ 5 ಜಿ ಸೇವೆಗಳನ್ನ ಘೋಷಿಸಿದ ಅಂಬಾನಿ, 2022ರ ದೀಪಾವಳಿಯಲ್ಲಿ, ಜಿಯೋ 5ಜಿ ಅನ್ನು ಭಾರತದ ಮೆಟ್ರೋ ನಗರಗಳಲ್ಲಿ ಪ್ರಾರಂಭಿಸಲಾಗುವುದು. '5ಜಿಯನ್ನ ಬಳಸಿಕೊಂಡು, ನಾವು ಉನ್ನತ ಗುಣಮಟ್ಟದ, ಹೆಚ್ಚು ಕೈಗೆಟುಕುವ ಸ್ಥಿರ ಬ್ರಾಡ್ಬ್ಯಾಂಡ್ ಸೇವೆಗಳ ರೋಲ್-ಔಟ್ʼನ್ನ ತ್ವರಿತಗೊಳಿಸಬಹುದು' ಎಂದು ಮುಕೇಶ್ ಅಂಬಾನಿ ಹೇಳಿದರು. 'ಜಿಯೋ 5 ಜಿ ವಿಶ್ವದ ಅತ್ಯಂತ ಸುಧಾರಿತ 5 ಜಿ ಆಗಿದೆ' ಎಂದರು.

ನಮ್ಮ ಕಂಪನಿಯು ವಾರ್ಷಿಕ ಆದಾಯದಲ್ಲಿ 100 ಬಿಲಿಯನ್ ಡಾಲರ್ ದಾಟಿದ ಭಾರತದ ಮೊದಲ ಕಾರ್ಪೊರೇಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಿಲಯನ್ಸ್‌ನ ಏಕೀಕೃತ ಆದಾಯವು ಶೇಕಡಾ 47 ರಷ್ಟು ಏರಿಕೆಯಾಗಿ 7.93 ಲಕ್ಷ ಕೋಟಿ ರೂ.ಗೆ ಅಥವಾ 104.6 ಬಿಲಿಯನ್ ಡಾಲರ್‌ಗೆ ತಲುಪಿದೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags