ಕನ್ನಡ ಪ್ರಭ

1.2M Followers

ಪಂಜಾಬ್ ಸರ್ಕಾರಿ ನೌಕರರಿಗೆ ಮಾನ್ ದೀಪಾವಳಿ ಬಂಪರ್ ಗಿಫ್ಟ್: ಹಳೆ ಪಿಂಚಣಿ ಯೋಜನೆ ಜಾರಿ

21 Oct 2022.8:00 PM

ಗವಂತ್ ಮಾನ್ ನೇತೃತ್ವದ ಆಪ್ ಸರ್ಕಾರ ಪಂಜಾಬ್ ಸರ್ಕಾರಿ ನೌಕರರಿಗೆ ದೀಪಾವಳಿ ಬಂಪರ್ ಗಿಫ್ಟ್ ನೀಡಿದ್ದು, ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ ಮರು ಜಾರಿ ಮಾಡಲು ಶುಕ್ರವಾರ ನಿರ್ಧರಿಸಿದೆ. ಚಂಡೀಗಢ: ಭಗವಂತ್ ಮಾನ್ ನೇತೃತ್ವದ ಆಪ್ ಸರ್ಕಾರ ಪಂಜಾಬ್ ಸರ್ಕಾರಿ ನೌಕರರಿಗೆ ದೀಪಾವಳಿ ಬಂಪರ್ ಗಿಫ್ಟ್ ನೀಡಿದ್ದು, ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ ಮರು ಜಾರಿ ಮಾಡಲು ಶುಕ್ರವಾರ ನಿರ್ಧರಿಸಿದೆ. ಇದನ್ನು ದೀಪಾವಳಿ ಉಡುಗೊರೆ ಎಂದು ಬಣ್ಣಿಸಿದ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರು, ‘ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರಿಂದ ಲಕ್ಷಾಂತರ ಉದ್ಯೋಗಿಗಳಿಗೆ ಅನುಕೂಲವಾಗಲಿದೆ. ಜೊತೆಗೆ ಉದ್ಯೋಗಿಗಳಿಗೆ ಶೇಕಡಾ 6ರಷ್ಟು ತುಟ್ಟಿಭತ್ಯೆ ಸಹ ನೀಡಲಾಗುತ್ತದೆ’ ಎಂದು ಅವರು ತಿಳಿಸಿದ್ದಾರೆ. ಇದನ್ನು ಓದಿ: ಲಂಚ ಪ್ರಕರಣ: ಪಂಜಾಬ್ ಮಾಜಿ ಸಚಿವ ಸುಂದರ್ ಶಾಮ್ ಅರೋರಾರನ್ನು ಬಂಧಿಸಿದ ರಾಜ್ಯದ ವಿಜಿಲೆನ್ಸ್ ಬ್ಯೂರೊ ಹಳೆಯ ಪಿಂಚಣಿ ಯೋಜನೆಗೆ ಸೇರಲು ನೌಕರರಿಗೆ ಆಯ್ಕೆಯನ್ನು ನೀಡಲಾಗುವುದು ಎಂದು ಪಂಜಾಬ್ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಹೇಳಿದ್ದಾರೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದರೆ ಇಲ್ಲಿಯೂ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರುಜಾರಿ ಮಾಡುವುದಾಗಿ ಆಪ್ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Prabha

#Hashtags