Kannada News Now

1.8M Followers

BIGG NEWS: ಇನ್ಮುಂದೆ ಶಾಲಾ-ಕಾಲೇಜಗಳಲ್ಲಿ 10 ನಿಮಿಷ ಧ್ಯಾನ: ಶಿಕ್ಷಣ ಇಲಾಖೆ ನಿರ್ಧಾರ

03 Nov 2022.11:59 AM

ಬೆಂಗಳೂರು: ಇನ್ಮುಂದೆ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸಲು, ಆರೋಗ್ಯ ವೃದ್ಧಿ, ಒತ್ತಡ ಮುಕ್ತವಾಗಿಸಲು ಶಿಕ್ಷಣ ಇಲಾಖೆ ಧ್ಯಾನಕ್ಕೆ ಮುಂದಾಗಿದೆ. 10 ನಿಮಿಷ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

BIG BREAKING NEWS:ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ & ನಟ ಶಶಿಕುಮಾರ್‌ ಬಿಜೆಪಿ ಸೇರ್ಪಡೆ

ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಧ್ಯಾನ ಮಾಡುವ ಸಂಬಂಧ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ. ನಿತ್ಯ ಶಾಲಾ-ಕಾಲೇಜುಗಳಲ್ಲಿ 10 ನಿಮಿಷ ವಿದ್ಯಾರ್ಥಿಗಳು ಕಡ್ಡಾಯವಾಗಿ ಧ್ಯಾನ ಮಾಡಬೇಕು. ಇದಕ್ಕಾಗಿ ಸಮಯ ನಿಗದಿ ಮಾಡುವಂತೆ ಸೂಚನೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದವರು ಶಾಲಾ-ಕಾಲೇಜುಗಳಲ್ಲಿ ಧ್ಯಾನ ಮಾಡಿಸುವಂತೆ ಬಿ.ಸಿ. ನಾಗೇಶ್ ಅವರಿಗೆ ಪತ್ರ ಬರೆದಿದ್ದರು. ಮಕ್ಕಳ ಏಕಾಗ್ರತೆ, ಆರೋಗ್ಯ ವೃದ್ಧಿ, ಒತ್ತಡ ನಿವಾರಣೆ ದೃಷ್ಟಿಯಿಂದ ಸಚಿವರು ಧ್ಯಾನ ಮಾಡಿಸುವ ಮನವಿಗೆ ಸ್ಪಂದನೆ ನೀಡಿದ್ದಾರೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags