ಕನ್ನಡದುನಿಯಾ

1.6M Followers

ಶಿಕ್ಷಣ ಇಲಾಖೆಯಲ್ಲಿ ಮೇಜರ್ ಸರ್ಜರಿ: 5 ವರ್ಷಕ್ಕಿಂತ ಹೆಚ್ಚು ಕಾಲ ಒಂದೇ ಕಡೆ ಇರುವವರ ವರ್ಗಾವಣೆ

24 Nov 2022.06:15 AM

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಐದು ವರ್ಷಕ್ಕಿಂತ ಹೆಚ್ಚು ಅವಧಿ ಒಂದೇ ಕಡೆ ಇರುವ ಬೋಧಕೇತರ ಸಿಬ್ಬಂದಿ ವರ್ಗಾವಣೆ ಮಾಡಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ, ಆಕ್ರಮ ನೇಮಕಾತಿ ಮೊದಲಾದ ಹಗರಣಗಳಲ್ಲಿ ಸಿಬ್ಬಂದಿ ಪಾಲ್ಗೊಂಡ ಹಿನ್ನೆಲೆಯಲ್ಲಿ ಐದು ವರ್ಷಕ್ಕಿಂತ ಹೆಚ್ಚು ಸಮಯ ಒಂದೇ ಕಡೆ ಇರುವ ಬೋಧಕೇತರ ಸಿಬ್ಬಂದಿ ವರ್ಗಾವಣೆ ಮಾಡಲಾಗುವುದು.

ಹೀಗೆ 5 ವರ್ಷಕ್ಕಿಂತ ಗೆಚ್ಚು ಸಮಯದಿಂದ ಇರುವ ಸಿಬ್ಬಂದಿಯ ಮಾಹಿತಿ ನೀಡಲು ಶಿಕ್ಷಣ ಇಲಾಖೆ ಎಲ್ಲಾ ಅಧೀನ ಕಚೇರಿಗಳಿಗೆ ನಿರ್ದೇಶನ ನೀಡಿದೆ.

ಐದು ವರ್ಷಕ್ಕಿಂತ ಹೆಚ್ಚು ಸಮಯ ಒಂದೇ ಕಡೆ ಇರುವ ಶಿಕ್ಷಣ ಇಲಾಖೆಯ ಅಧೀಕ್ಷಕರು, ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು, ಶೀಘ್ರ ಲಿಪಿಕಾರರು, ಬೆರಳಚ್ಚುಗಾರರು, ಗ್ರೂಪ್ ಡಿ ನೌಕರರನ್ನು ವರ್ಗಾವಣೆ ಮಾಡಲಾಗುವುದು ಎಂದು ಹೇಳಲಾಗಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Dunia

#Hashtags