Kannada News Now

1.8M Followers

BIGG NEWS : ರಾಜ್ಯದ ಶಾಲೆಗಳಲ್ಲಿ 'ಮೊಬೈಲ್ ಲೆಸ್ ಡೇ' ನಿಯಮ ಜಾರಿಗೆ ಶಿಕ್ಷಣ ಇಲಾಖೆ ಚಿಂತನೆ

24 Nov 2022.12:48 PM

ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ ಮಾಡುವ ತೀರ್ಮಾನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ಹೌದು, ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಶಾಲೆಗಳಲ್ಲಿ 'ಮೊಬೈಲ್ ಲೆಸ್ ಡೇ' ನಿಯಮ ಜಾರಿಗೆ ತರಲು ಶಿಕ್ಷಣ ಇಲಾಖೆ ಚಿಂತಿಸಿದೆ.

ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾಹಿತಿ ನೀಡಿದ್ದು, ಮೊಬೈಲ್ ಬಳಕೆಯಿಂದ ಮಕ್ಕಳಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಗಳಾಗುತ್ತಿದೆ. ಆದ್ದರಿಂದ ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧ ನಿಯಮ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದಿದ್ದಾರೆ. ಬ್ಯಾಗ್ ಲೆಸ್ ಡೇ ಬಳಿಕ 'ಮೊಬೈಲ್ ಲೆಸ್ ಡೇ' ಪ್ರಯತ್ನ ಜಾರಿಗೆ ತರಲಾಗುತ್ತಿದೆ. ಪೋಷಕರ ಅಭಿಪ್ರಾಯದ ಮೇರೆಗೆ ಸರ್ಕಾರ ಈ ಬಗ್ಗೆ ಚಿಂತನೆ ನಡೆಸಿದೆ ಎನ್ನಲಾಗಿದೆ. ಕೊರೊನಾ ಹಿನ್ನೆಲೆ ಶಾಲೆಗಳಲ್ಲಿ ಆನ್ ಲೈನ್ ಕ್ಲಾಸ್ ನಡೆಸಲಾಗಿತ್ತು, ಇದಕ್ಕಾಗಿ ಮಕ್ಕಳು ವಿಪರೀತವಾಗಿ ಮೊಬೈಲ್ ಬಳಕೆ ಮಾಡಿದ್ದರು. ಆದರೆ ಬರು ಬರುತ್ತಾ ಮಕ್ಕಳಲ್ಲಿ ಮೊಬೈಲ್ ಗೀಳು ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಚಿಂತನೆ ನಡೆಸಿದೆ ಎನ್ನಲಾಗಿದೆ.

ಮಗುವಿನ ಭಾವನಾತ್ಮಕ ನಡವಳಿಕೆಯು ಅನೇಕ ವಿಧಗಳಲ್ಲಿ ಪರಿಣಾಮ ಬೀರುತ್ತದೆ. ಡಿಜಿಟಲ್ ಮಾಧ್ಯಮವು ಮಗುವಿನ ಕಲ್ಪನೆ ಮತ್ತು ಪ್ರೇರಣೆ ಮಟ್ಟವನ್ನು ಪರಿಣಾಮ ಬೀರುತ್ತದೆ. ಮಕ್ಕಳಲ್ಲಿ ಕಿರಿಕಿರಿ , ಹತಾಶೆ, ಆತಂಕ ಮತ್ತು ಹಠಾತ್ ಅಸ್ವಸ್ಥತೆಗಳು ಕಾಣಿಸಿಕೊಳ್ಳುತ್ತವೆ

ಬ್ಯಾಗ್ ಲೆಸ್ ಡೇ

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ರಾಜ್ಯ ಸರ್ಕಾರ ಶನಿವಾರ ಬ್ಯಾಗ್ ಹೊರೆಯಿಂದ ಮುಕ್ತಿ ನೀಡುವ ಚಿಂತನೆ ನಡೆಸಿದೆ.

ಹೌದು, ಪ್ರತಿನಿತ್ಯ ಪುಸ್ತಕದ ಭಾರ ಹೊತ್ತು ಶಾಲೆಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇನ್ನು ಮುಂದೆ ಶನಿವಾರ ಬ್ಯಾಗ್ ಬೆನ್ನಿಗೇರಿಸಿ ಮಕ್ಕಳು ಶಾಲೆಗೆ ಹೋಗಬೇಕಾದ ಅಗತ್ಯ ಇಲ್ಲ . ರಾಜ್ಯದಲ್ಲಿ ಶನಿವಾರ ಬ್ಯಾಗ್ ಲೆಸ್ ಡೇ ಆಚರಿಸಲು ಸರ್ಕಾರ ಚಿಂತನೆ ನಡೆದಿದೆ.

ಶನಿವಾರ ಪಾಠದ ಬದಲಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊ಼ಡಗಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಶಿಕ್ಷಣ ಸಚಿವ ನಾಗೇಶ್ ಅವರು ಈ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಿದ್ದು, ಶೀಘ್ರದಲ್ಲೇಯೇ ಈ ಸಂಬಂಧ ಅಂತಿಮ ಆದೇಶ ಹೊರ ಬೀಳುವ ನಿರೀಕ್ಷೆಯಿದೆ. ವಾರದ ಒಂದು ದಿನ ಮಕ್ಕಳಿಗೆ ಬ್ಯಾಗ್ ಹೊರೆಯಿಂದ ಮುಕ್ತಿ ಸಿಕ್ಕರೆ ಒಳ್ಳೆಯದು ಅಲ್ಲವಾ..?.

BREAKING NEWS : ಮಂಗಳೂರು ಸ್ಪೋಟ ಪ್ರಕರಣ : ಉಗ್ರರಿಂದ ಎಡಿಜಿಪಿ 'ಅಲೋಕ್ ಕುಮಾರ್' ಗೆ ಎಚ್ಚರಿಕೆ ಸಂದೇಶ..!

BREAKING NEWS : ಶಾರೀಕ್ ಬೆನ್ನಿಗೆ ನಿಂತ 'ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್': ಇನ್ನೊಂದು ದಾಳಿಯ ಬೆದರಿಕೆ


Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags