News18 ಕನ್ನಡ

398k Followers

NIA Recruitment 2022: ರಾಷ್ಟ್ರೀಯ ತನಿಖಾ ದಳದಲ್ಲಿ ಡಿಗ್ರಿ ಪಾಸಾದವರಿಗೆ ಬಂಪರ್ ಉದ್ಯೋಗ- ತಿಂಗಳಿಗೆ 2 ಲಕ್ಷ ಸಂಬಳ

25 Nov 2022.11:31 AM

Central Government Job: ಕೇಂದ್ರ ಸರ್ಕಾರದ ಉದ್ಯೋಗ ಅರಸುತ್ತಿರುವವರಿಗೆ ಇಲ್ಲೊಂದು ಗುಡ್​ನ್ಯೂಸ್(Good News) ಇದೆ. ರಾಷ್ಟ್ರೀಯ ತನಿಖಾ ದಳ(National Investigation Agency)ದಲ್ಲಿ ಒಟ್ಟು 49 ಹುದ್ದೆಗಳು ಖಾಲಿ ಇದ್ದು, ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಡೆಪ್ಯುಟಿ ಸೂಪರಿಂಟೆಂಡೆಂಟ್ ಪೊಲೀಸ್, ಹೆಚ್ಚುವರಿ ಸೂಪರಿಂಟೆಂಡೆಂಟ್ ಪೊಲೀಸ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ನೌಕರಿ ಹುಡುಕುತ್ತಿದ್ದರೆ ಈಗಲೇ ಅಪ್ಲೈ(apply) ಮಾಡಿ. ಅರ್ಜಿ ಸಲ್ಲಿಸಲು ಜನವರಿ 14, 2023 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆಫ್​ಲೈನ್(Offline) ಮೂಲಕ ಅರ್ಜಿ ಹಾಕಿ.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆರಾಷ್ಟ್ರೀಯ ತನಿಖಾ ದಳ
ಹುದ್ದೆಯ ಹೆಸರುಡೆಪ್ಯುಟಿ ಸೂಪರಿಂಟೆಂಡೆಂಟ್ ಪೊಲೀಸ್, ಹೆಚ್ಚುವರಿ ಸೂಪರಿಂಟೆಂಡೆಂಟ್ ಪೊಲೀಸ್
ಒಟ್ಟು ಹುದ್ದೆ49
ಉದ್ಯೋಗದ ಸ್ಥಳಪ್ಯಾನ್ ಇಂಡಿಯಾ
ವೇತನಮಾಸಿಕ ₹ 56,100-2,08,700


ಪೋಸ್ಟ್​ ಆಧಾರಿತ ಎಷ್ಟೆಷ್ಟು ಹುದ್ದೆಗಳಿವೆ?
ಡೆಪ್ಯುಟಿ ಸೂಪರಿಂಟೆಂಡೆಂಟ್ ಪೊಲೀಸ್- 38
ಹೆಚ್ಚುವರಿ ಸೂಪರಿಂಟೆಂಡೆಂಟ್ ಪೊಲೀಸ್- 11

ಅಭ್ಯರ್ಥಿಗಳ ವಿದ್ಯಾರ್ಹತೆ ಏನಿರಬೇಕು?
ರಾಷ್ಟ್ರೀಯ ತನಿಖಾ ದಳ ನೇಮಕಾತಿ ಅಧಿಸೂಚನೆ ಪ್ರಕಾರ,ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.

Karnataka Jobs: ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ 27 ಹುದ್ದೆಗಳಿಗೆ ಅರ್ಜಿ ಆಹ್ವಾನ- ಈಗಲೇ Apply ಮಾಡಿ

ಅಭ್ಯರ್ಥಿಗಳ ವಯಸ್ಸು ಎಷ್ಟಿರಬೇಕು?
ರಾಷ್ಟ್ರೀಯ ತನಿಖಾ ದಳ ನೇಮಕಾತಿ ಅಧಿಸೂಚನೆ ಪ್ರಕಾರ,ಅಭ್ಯರ್ಥಿಗಳ ವಯಸ್ಸು ಜನವರಿ 14, 2023ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ನಿಯಮಾನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಸಂಬಳ ಎಷ್ಟು ಕೊಡಲಾಗುತ್ತೆ?
ಡೆಪ್ಯುಟಿ ಸೂಪರಿಂಟೆಂಡೆಂಟ್ ಪೊಲೀಸ್- ಮಾಸಿಕ ₹ 56,100-1,77,500
ಹೆಚ್ಚುವರಿ ಸೂಪರಿಂಟೆಂಡೆಂಟ್ ಪೊಲೀಸ್- ಮಾಸಿಕ ₹ 67,700-2,08,700

ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತೆ?
ಲಿಖಿತ ಪರೀಕ್ಷೆ
ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14/11/2022
ಅರ್ಜಿ ಹಾಕಲು ಕೊನೆ ದಿನ: 14/01/2023

Railway Jobs: SSLC, PUC ಪಾಸಾದವ್ರಿಗೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗ- ಹುಬ್ಬಳ್ಳಿಯಲ್ಲಿ ಕೆಲಸ

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳಾದ ಐಡಿ ಪ್ರೂಫ್, ಶೈಕ್ಷಣಿಕ ದಾಖಲೆಗಳು, ಇತ್ತೀಚಿನ ಪಾಸ್​​ಪೋರ್ಟ್​ ಸೈಜ್ ಫೋಟೋ, ಅನುಭವ ಪ್ರತಿಯೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಜನವರಿ 14, 2023 ರೊಳಗೆ ಪೋಸ್ಟ್ ಮುಖಾಂತರ ಕಳುಹಿಸಬೇಕು.

ರಾಷ್ಟ್ರೀಯ ತನಿಖಾ ದಳ(NIA)
NIA ಮುಖ್ಯ ಕಚೇರಿ
ಸಿಜಿಒ ಕಾಂಪ್ಲೆಕ್ಸ್​
ಲೋಧಿ ರಸ್ತೆ
ನವದೆಹಲಿ-110003
Disclaimer

Disclaimer

This story is auto-aggregated by a computer program and has not been created or edited by Dailyhunt Publisher: News18 Kannada

#Hashtags