Kannada News Now

1.8M Followers

BREAKING NEWS : ಮೆಡಿಕಲ್ ಕಾಲೇಜುಗಳು ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ಪಡೆಯುವಂತಿಲ್ಲ : ಹೈಕೋರ್ಟ್ ಆದೇಶ

16 Nov 2022.7:53 PM

ಬೆಂಗಳೂರು : ಮೆಡಿಕಲ್ ಕಾಲೇಜುಗಳು ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ಪಡೆಯುವಂತಿಲ್ಲ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.

ಮೆಡಿಕಲ್ ಕಾಲೇಜುಗಳು ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ಪಡೆಯುವಂತಿಲ್ಲ, ಹೆಚ್ಚುವರಿ ಶುಲ್ಕ ಸಂಗ್ರಹಿಸದಂತೆ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ತಾಕೀತು ಮಾಡಿದೆ.

ಹಿರಿಯ ನ್ಯಾಯಮೂರ್ತಿ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರನ್ನು ಒಳಗೊಂಡ ವಿಭಾಗೀಯಪೀಠ ಆದೇಶ ಹೊರಡಿಸಿದೆ.

2017-18ರಲ್ಲಿ ಎಂಬಿಬಿಎಸ್ ಕೋರ್ಸ್ಗೆ ಸೇರಿದ್ದ ಅರ್ಜಿದಾರ ವಿದ್ಯಾರ್ಥಿಗಳು, 2017-2021ರ ಅವಧಿಯಲ್ಲಿ ಸಂಗ್ರಹಿಸಿದ ಹೆಚ್ಚುವರಿ ಶುಲ್ಕವನ್ನು ಮರುಪಾವತಿಸಲು ಕಾಲೇಜಿಗೆ ನಿರ್ದೇಶನವನ್ನು ಕೋರಿ ಅರ್ಜಿ ಸಲ್ಲಿಸಿದ್ದರು.ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳಿಂದ ಪಡೆದಿದ್ದ ಹೆಚ್ಚುವರಿ ಶುಲ್ಕವನ್ನು ವಾಪಸ್ ನೀಡುವಂತೆ ಸೂಚನೆ ನೀಡಿದೆ.

BREAKING NEWS : 750 ಕೋಟಿ ವಂಚನೆ ; 'ರೊಟೊಮ್ಯಾಕ್ ಗ್ಲೋಬಲ್' ಮೇಲೆ ಸಿಬಿಐ ದಾಳಿ, ನಿರ್ದೇಶಕರ ವಿರುದ್ಧ ಪ್ರಕರಣ ದಾಖಲು

ವಿಧಾನಸಭೆ ಚುನಾವಣೆ 2023 : ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಸಿದ ನಟ, ನಿರ್ದೇಶಕ ಎಸ್.ನಾರಾಯಣ್


Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags