News18 ಕನ್ನಡ

400k Followers

Chikkamagaluru ZP Recruitment: ತಿಂಗಳಿಗೆ 24,000 ಸಂಬಳ, ಸರ್ಕಾರಿ ನೌಕರಿ ಬೇಕು ಅಂದ್ರೆ ಇವತ್ತೇ ಅಪ್ಲೈ ಮಾಡಿ

18 Nov 2022.3:59 PM

Chikkamagaluru Zilla Panchayat Recruitment 2022: ಚಿಕ್ಕಮಗಳೂರು ಜಿಲ್ಲಾ ಪಂಚಾಯತ್​​(Chikkamagaluru Zilla Panchayat)ನಲ್ಲಿ ಖಾಲಿ ಇರುವ 2 ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟ್)(Technical Assistant) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ. ಹೀಗಾಗಿ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ. ಚಿಕ್ಕಮಗಳೂರು ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಚಿಕ್ಕಮಗಳೂರು ಜಿಲ್ಲಾ ಪಂಚಾಯತ್
ಹುದ್ದೆಟೆಕ್ನಿಕಲ್ ಅಸಿಸ್ಟೆಂಟ್
ಒಟ್ಟು ಹುದ್ದೆ2
ವಿದ್ಯಾರ್ಹತೆಬಿಎಸ್ಸಿ/ ಎಂಎಸ್ಸಿ
ವೇತನಮಾಸಿಕ ₹ 24,000
ಸ್ಥಳಚಿಕ್ಕಮಗಳೂರು
ಅರ್ಜಿ ಸಲ್ಲಿಕೆ ಬಗೆಆನ್​ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ09/11/2022
ಅರ್ಜಿ ಸಲ್ಲಿಸಲು ಕೊನೆ ದಿನ19/11/2022


ಅರ್ಹತಾ ಮಾನದಂಡಗಳೇನು?

ವಿದ್ಯಾರ್ಹತೆ:
ಚಿಕ್ಕಮಗಳೂರು ಜಿಲ್ಲಾ ಪಂಚಾಯತ್​ ನೇಮಕಾತಿ ಅಧಿಸೂಚನೆ ಪ್ರಕಾರ, ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ ಫಾರೆಸ್ಟ್ರಿ ವಿಭಾಗದಲ್ಲಿ ಬಿಎಸ್ಸಿ/ಎಂಎಸ್ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಚಿಕ್ಕಮಗಳೂರು ಜಿಲ್ಲಾ ಪಂಚಾಯತ್​ ನೇಮಕಾತಿ ಅಧಿಸೂಚನೆ ಪ್ರಕಾರ, ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು.

BELನಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ 55,000 ಸಂಬಳ- ಎಂಜಿನಿಯರಿಂಗ್ ಆಗಿದ್ರೆ ಅರ್ಜಿ ಹಾಕಿ

ವಯೋಮಿತಿ ಸಡಿಲಿಕೆ:
ಚಿಕ್ಕಮಗಳೂರು ಜಿಲ್ಲಾ ಪಂಚಾಯತ್​ ನೇಮಕಾತಿ ಅಧಿಸೂಚನೆ ಪ್ರಕಾರ, ಟೆಕ್ನಿಕಲ್ ಅಸಿಸ್ಟೆಂಟ್ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ವಿದ್ಯಾರ್ಹತೆ
ಅನುಭವ
ದಾಖಲಾತಿ ಪರಿಶೀಲನೆ

ಹುದ್ದೆಯ ಕುರಿತಾದ ಅಧಿಕೃತ ನೋಟಿಫಿಕೇಶನ್ ಇಲ್ಲಿದೆ.

Technical-Assistant-Forest-Posts-Advt-Details-Chikkamagaluru-Zilla-Panchayat

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/11/2022
ಅರ್ಜಿ ಸಲ್ಲಿಸಲು ಕೊನೆ ದಿನ : 19/11/2022

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-26595899 ಅಥವಾ ಮೊಬೈಲ್ ನಂಬರ್ 9480690550 ಗೆ ಕರೆ ಮಾಡಬಹುದು.
Disclaimer

Disclaimer

This story is auto-aggregated by a computer program and has not been created or edited by Dailyhunt Publisher: News18 Kannada

#Hashtags