ವಿಜಯವಾಣಿ

503k Followers

VIDEO: ಬಾಲಕಿಯನ್ನು ಚುಡಾಯಿಸಿದ ಯುವಕನ ತಲೆ ಬೋಳಿಸಿ ತಕ್ಕ ಶಾಸ್ತಿ ಮಾಡಿದ ಸಾರ್ವಜನಿಕರು!

02 Dec 2022.4:37 PM

ಕಾನ್ಪುರ: ರಿಕ್ಷಾ ಚಾಲಕನೊಬ್ಬ ಸಾರ್ವಜನಿಕ ಸ್ಥಳದಲ್ಲಿ ಬಾಲಕಿಗೆ ಕಿರುಕುಳ ನೀಡಿ ಸಿಕ್ಕಿ ಬಿದ್ದಿದ್ದಾನೆ. ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಯುವಕನನ್ನು ಬಂಧಿಸಿ, ಕಿಟಕಿಗೆ ಕಟ್ಟಿ ಹಾಕಿದ್ದಾರೆ. ನಂತರ ಥಳಿಸಿ ತಲೆ ಬೋಳಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಜನರೆಲ್ಲಾ ಒಟ್ಟಾಗಿ ಯುವಕನನ್ನು ಕಟ್ಟಿ ಹಾಕಿದ್ದಾರೆ. ನಂತರ ಪರಿಚಯ ಹೇಳೆಂದು ಪ್ರಶ್ನಿಸಿ, ಯುವಕನನ್ನು ಥಳಿಸಿದ್ದಾರೆ. ಈ ವೇಳೆ ಮಹಿಳೆಯೊಬ್ಬಳು ಯುವಕನ ಮೇಲೆ ಹಿಂಸಾಚಾರ ಮಾಡಬೇಡಿ ಎಂದು ಮನವಿ ಮಾಡುತ್ತಿರುವುದು ವೈರಲ್ ಆಗಿರುವ ವಿಡಿಯೋದಲ್ಲಿ ಕಾಣಬಹುದು.

ಸಾರ್ವಜನಿಕರು ಯುವಕನನ್ನು ಕಟ್ಟಿ ಹಾಕಿ ಥಳಿಸುತ್ತಿರುವ ವಿಚಾರ ಗೊತ್ತಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ಹದಗೊಳಿಸಿದ್ದಾರೆ. ನಂತರ ಯುವಕನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಅನೇಕ ಜನರು ಕಮೆಂಟ್ ಮಾಡುತ್ತಿದ್ದಾರೆ. ಇಂತಹ ಘಟನೆ ನಡೆದಾಗ ಮೊದಲು ಪೊಲೀಸರಿಗೆ ಮಾಹಿತಿ ತಿಳಿಸಬೇಕು. ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಕಮೆಂಟ್ ಮಾಡಿದ್ದಾರೆ. (ಏಜೆನ್ಸೀಸ್)

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Vijayvani

#Hashtags