ಕನ್ನಡದುನಿಯಾ

1.6M Followers

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ನಿರುದ್ಯೋಗಿ ಯುವಕರು, ಯುವತಿಯರಿಗೆ ಸಾಲ ಸೌಲಭ್ಯ

18 Dec 2022.06:10 AM

ಪ್ರಸಕ್ತ(2022-23) ಸಾಲಿನ ಭಾರತ ಸರ್ಕಾರದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ(ಪಿ.ಎಂ.ಇ.ಜಿ.ಪಿ) ಕಾರ್ಯಕ್ರಮದಡಿಯಲ್ಲಿ ಉತ್ಪಾದನ/ ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಎಲ್ಲಾ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ವಉದ್ಯೋಗ ಮಾಡಿಕೊಳ್ಳುವವರಿಗೆ ಪಟ್ಟಣ, ನಗರ, ಗ್ರಾಮೀಣ ಪ್ರದೇಶದಲ್ಲಿ ಉದ್ದಿಮೆ ಘಟಕಗಳನ್ನು ಸ್ಥಾಪಿಸುವವರಿಗೆ ಬ್ಯಾಂಕಿನಿಂದ ಗರಿಷ್ಠ 50. ಲಕ್ಷ ರೂ.ವರೆಗೆ ಸಾಲವನ್ನು ನೀಡಿ ಗರಿಷ್ಟ ಶೇ.25 ರಿಂದ 35 ವರೆಗೆ ಸಹಾಯಧನವನ್ನು ನೀಡಲಾಗುವುದು. ಈ ವರ್ಷದಲ್ಲಿ ಹಸು, ಕುರಿ, ಮೇಕೆ, ಎಮ್ಮೆ, ಕೋಳಿ, ಬಾತು ಕೋಳಿ, ಟರ್ಕಿ ಕೋಳಿ, ಮೀನು ಸಾಕಾಣಿಕೆ ಹಾಗೂ ಹೋಟೆಲ್ ಮತ್ತು ಇತರೆ 250ಕ್ಕೂ ಅಧಿಕ ಉದ್ದಿಮೆಗಳಿಗೆ ಸಾಲ ಸಹಾಯಧನ ನೀಡಲಾಗುವುದು.

ಈ ಸೌಲಭ್ಯವನ್ನು ಪಡೆಯಲು ಆನ್‍ಲೈನ್ ಮೂಲಕ www.kvic.org.in (pmegp online application)ರಲ್ಲಿ ಅರ್ಜಿ ಸಲ್ಲಿಸುವಾಗ AGENCY CODE KVIB) ಎಂದು ಅರ್ಜಿಯಲ್ಲಿ ಅಳವಡಿಸಿ ಅದರ 02 ಪ್ರತಿಯನ್ನು ದಾಖಲಾತಿಗಳೊಂದಿಗೆ ಕಚೇರಿಗೆ ಸಲ್ಲಿಸುವುದು.

ಮಡಿಕೇರಿ ಕಚೇರಿಗೆ ಭೇಟಿ ನೀಡಿದಲ್ಲಿ ಉಚಿತವಾಗಿ ಆನ್‍ಲೈನ್ ಅರ್ಜಿ ಹಾಕಿಕೊಡಲಾಗುವುದು. ಹೆಚ್ಚಿನ ವಿವರಗಳಿಗೆ ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕೈಗಾರಿಕ ಕೇಂದ್ರದ ಕಟ್ಟಡ, ಕೊಹಿನೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ದೂ.ಸಂ.08272-225946, 9480825630 ನ್ನು ಸಂಪರ್ಕಿಸಬಹುದು ಎಂದು ಹೇಳಲಾಗಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Dunia

#Hashtags