Kannada News Now

1.8M Followers

'ವಿದ್ಯಾರ್ಥಿವೇತನ" ಸ್ಥಗಿತ: ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ಆಯುಕ್ತರಿಂದ ಸಿಹಿ ಸುದ್ದಿ

19 Dec 2022.5:33 PM

ಬೆಂಗಳೂರು: 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ' ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುತ್ತಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ 1 ರಿಂದ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುತ್ತಿದೆ.

ಸದರಿ ಕಾರ್ಯಕ್ರಮವು ಸಂಪೂರ್ಣ ರಾಜ್ಯ ವಲಯ ಕಾರ್ಯಕ್ರಮವಾಗಿದ್ದು, ರಾಜ್ಯವಲಯದಲ್ಲಿ ಬಿಡುಗಡೆಯಾಗುವ ಅನುದಾನದಲ್ಲಿ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುತ್ತಿದೆ.

1ರಿಂದ 5ನೇ ತರಗತಿಯಲ್ಲಿರುವ ಬಾಲಕರಿಗೆ ರೂ. 1000/- ಬಾಲಕಿಯರಿಗೆ 1000/-, 6 ಮತ್ತು 7ನೇ ತರಗತಿಯಲ್ಲಿರುವ ಬಾಲಕರಿಗೆ ರೂ. 1150/- ಬಾಲಕಿಯರಿಗೆ ರೂ, 1250/- ಮತ್ತು 8ನೇ ತರಗತಿಯಲ್ಲಿರುವ ಬಾಲಕರಿಗೆ ರೂ 1250/- ಬಾಲಕಿಯರಿಗೆ ರೂ. 1350/- ಮಂಜೂರು ಮಾಡಲಾಗುತ್ತಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ 9 ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುತ್ತಿದೆ. ಸದರಿ ಕಾರ್ಯಕ್ರಮವು ಸಂಪೂರ್ಣ ಕೇಂದ್ರವಲಯ ಕಾರ್ಯಕ್ರಮವಾಗಿದ್ದು, ಕೇಂದ್ರ ಸರ್ಕಾರ ಶೇಕಡ: 60 ರಷ್ಟು ಹಾಗೂ ರಾಜ್ಯ ಸರ್ಕಾರವು ಶೇಕಡ 40ರ ಅನುಪಾತದಲ್ಲಿ ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದೆ. ಸದರಿ ಅನುದಾನದಲ್ಲಿ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುತ್ತಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ 9 ಮತ್ತು 10ನೇ ತರಗತಿ ಕಾರ್ಯಕ್ರಮವು ಸಂಪೂರ್ಣ ಕೇಂದ್ರ ಪುರಸ್ಕøತ ಕಾರ್ಯಕ್ರಮವಾಗಿದ್ದು, ಕಾಲಕಾಲಕ್ಕೆ ಕೇಂದ್ರ ಸರ್ಕಾರದಿಂದ ಹೊರಡಿಸಲಾಗುವ ಮಾರ್ಗಸೂಚಿಗಳನ್ವಯ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ 9 ಮತ್ತು 10ನೇ ತರಗತಿ, ಮಾರ್ಗಸೂಚಿ ಮಾರ್ಚ್ 2022 (2021-22 ರಿಂದ 2025-26 ರ ವರೆಗೆ) ರಲ್ಲಿ ವಿದ್ಯಾರ್ಥಿವೇತನ ದರಗಳನ್ನು 9 ಮತ್ತು 10ನೇ ತರಗತಿಯಲ್ಲಿನ ವಿದ್ಯಾರ್ಥಿಗಳಿಗೆ ಆಚಿಥಿ scholar ರೂ. 3500/- Hosteller ರೂ. 7000/-

2022-23ನೇ ಸಾಲಿನಲ್ಲಿ ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ Online ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ, ಮುಂದುವರೆದು, ಈ ಹಿಂದಿನ ಸಾಲುಗಳಲ್ಲಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಮಂಜೂರಾದ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯ SATS ದತ್ತಾಂಶದ ಅನುಗುಣವಾಗಿ ಪ್ರಸಕ್ತ ಸಾಲಿನಲ್ಲಿ Renewal ಆಗಿದ್ದು, ಸದರಿ ಅರ್ಜಿಗಳ ಮಂಜೂರಾತಿ ಪ್ರಕ್ರಿಯೆ ಈಗಾಗಲೇ ತಾಲ್ಲೂಕು ಮಟ್ಟದಲ್ಲಿ ಜಾರಿಯಲ್ಲಿರುತ್ತದೆ.

ಕಳೆದ ಮೂರು ವರ್ಷಗಳಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ (9 ಮತ್ತು 10ನೇ ತರಗತಿ) ಕಾರ್ಯಕ್ರಮ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ ಅನುದಾನದ 2019-20ನೇ ಸಾಲಿಗೆ ರೂ. 24.76 ಕೋಟಿ, 2020-21ನೇ ಸಾಲಿಗೆ ರೂ 62.30 ಕೋಟಿ ಮತ್ತು 2021-22ನೇ ಸಾಲಿಗೆ ರೂ. 76.58 ಕೋಟಿ.

ಮುಂದುವರೆದು, 2022-23ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ(1 ರಿಂದ 8ನೇ ತರಗತಿ) - ರಾಜ್ಯ ವಲಯ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಬಿಡುಗಡೆಯಾದ ಅನುದಾನ ರೂ. 11,356.62 ಲಕ್ಷ.

2022-23ನೇ ಸಾಲಿಗೆ ಸಂಬಂಧಿಸಿದಂತೆ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ತಂತ್ರಾಂಶದಲ್ಲಿ ಅರ್ಜಿ ಸ್ವೀಕೃತಿ ಪ್ರಕ್ರಿಯೆ ಹಾಗೂ ಅನುಮೋದನೆ ಪ್ರಕ್ರಿಯೆ ಜಾರಿಯಲ್ಲಿರುತ್ತದೆ.

ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅನುಷ್ಠಾನ ಮಾಡಲಾಗುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಕಾರ್ಯಕ್ರಮ ಕೇಂದ್ರ ಸರ್ಕಾರದಿಂದ ಸ್ಥಗಿತವಾಗಿರುವುದಿಲ್ಲ ಎಂಬ ಅಂಶವನ್ನು ಆಯುಕ್ತರು ಸಮಾಜ ಕಲ್ಯಾಣ ಇಲಾಖೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags