Kannada News Now

1.8M Followers

BIG NEWS: 'ರಾಜ್ಯ ಸರ್ಕಾರಿ ನೌಕರ'ರಿಗೆ ಗುಡ್ ನ್ಯೂಸ್: 'ಗಳಿಕೆ ರಜೆ ನಗರೀಕರಣ'ಕ್ಕೆ ಅವಕಾಶ | Karnataka Government Employees

20 Dec 2022.12:56 PM

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗಳಿಕೆ ರಜೆ ನಗದೀಕರಣ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

BIGG NEWS : ಸಂಸತ್ತಿನಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಟಾಪಟಿ ; ಖರ್ಗೆ 'ಇಲಿ', 'ನಾಯಿ' ಹೇಳಿಕೆಗೆ ತೀವ್ರ ವಿರೋಧ, ಕ್ಷಮೆಗೆ ಪಟ್ಟು

ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118(2)(i) ರಲ್ಲಿ ಸರ್ಕಾರಿ ನೌಕರರು ಪ್ರತಿ ಕ್ಯಾಲೆಂಡರ್ ವರ್ಷದಲ್ಲಿ (ಆಯಾ ವರ್ಷದ ಜನವರಿ 1 ರಿಂದ ಪ್ರಾರಂಭಗೊಂಡಂತೆ ಡಿಸೆಂಬರ್ 31 ರವರೆಗೆ) 15 ದಿನಗಳಿಗೆ ಮೀರದಂತೆ ಗಳಿಕೆ ರಜೆಯನ್ನು ಅಧ್ಯರ್ಪಿಸಲು ಮತ್ತು ರಜೆ ವೇತನಕ್ಕೆ ನಗದೀಕರಣ ಸೌಲಭ್ಯವನ್ನು ಪಡೆಯಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ.

2022 ನೇ ಸಾಲಿನ ಬ್ಲಾಕ್‌ ಅವಧಿಗೆ ಸರ್ಕಾರಿ ಅಧಿಕಾರಿ ನೌಕರರು ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಸದರಿ ಬ್ಲಾಕ್ ಅವಧಿಯು ದಿನಾಂಕ:31/12/2022 ರಂದು ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರವು 2023 ನೇ ಸಾಲಿನ ಬ್ಲಾಕ್ ಅವಧಿಯಲ್ಲಿ 15 ದಿನ ಗಳಿಕೆ ರಜೆಯನ್ನು ಅಧರ್ಪಿಸಿ ರಜೆ ವೇತನಕ್ಕೆ ಸಮಾನವಾಗಿ ನಗದೀಕರಣ ಪಡೆಯುವ ಅವಕಾಶವನ್ನು ಕಲ್ಪಿಸಲು ಹಾಗೂ ಈ ಸೌಲಭ್ಯವನ್ನು ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಎಲ್ಲಾ ಸಂಸ್ಥೆಗಳ ಉದ್ಯಮಗಳ ನೌಕರರಿಗೂ ಸಂಬಂಧಿತ ಸಂಸ್ಥೆ ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ನಿಯತಗೊಳಿಸಲು ಅವಕಾಶವನ್ನು ಕಲ್ಪಿಸಲು ಉದ್ದೇಶಿಸಿದೆ.

BIGG NEWS: ಮತ್ತೆ ಭುಗಿಲೆದ್ದ ಜಾಮಿಯಾ ಮಸೀದಿ ವಿವಾದ; ಜಾಮಿಯಾದಲ್ಲಿನ ಅಕ್ರಮ ಮದರಸಾ ತೆರವಿಗೆ ಹಿಂದೂ ಜಾಗರಣ ವೇದಿಕೆ ಗಡುವು

ಸರ್ಕಾರವು 2023 ನೇ ಸಾಲಿನ ಬ್ಲಾಕ್‌ ಅವಧಿಯಲ್ಲಿ ರಾಜ್ಯ ಸರ್ಕಾರಿ ನೌಕರರು ಗರಿಷ್ಟ 15 ದಿನಗಳಿಗೆ ಮೀರದ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜಾ ವೇತನಕ್ಕೆ ಸಮನಾದ ನಗದೀಕರಣ ಸೌಲಭ್ಯ ಪಡೆಯುವ ಯೋಜನೆಯನ್ನು ಜಾರಿಗೊಳಿಸಿ ಆದೇಶಿಸಿದೆ.

ಎಲ್ಲಾ ವೃಂದದ ಅರ್ಹ ಅಧಿಕಾರಿ/ನೌಕರರು ಒಂದು ತಿಂಗಳ ಮುಂಚಿತ ನೋಟಿಸ್‌ ನೀಡಿ 01/01/2023 ರಿಂದ 31/12/2023 ರವರೆಗಿನ ಅವಧಿಯಲ್ಲಿ ಅವರ ಇಚ್ಛೆಯಂತೆ ಯಾವುದೇ ತಿಂಗಳಿನಲ್ಲಿ ಗಳಿಕೆ ರಜೆ ನಗದೀಕರಣದ ಪ್ರಯೋಜನ ಪಡೆಯಲು ಅರ್ಹರಾಗಿರುತ್ತಾರೆ.

ಗೆಜೆಟೆಡ್ ಅಧಿಕಾರಿಗಳ ಸಂಬಂಧದಲ್ಲಿ 2023 ನೇ ಸಾಲಿನ ಗಳಿಕೆ ರಜೆ ನಗದೀಕರಣ ಸೌಲಭ ಮಂಜೂರಾತಿ ಉದ್ದೇಶಕ್ಕಾಗಿ ಮಾತ್ರ ಹೆಚ್.ಆರ್.ಎಂ.ಎಸ್ ನಲ್ಲಿ ಲಭ್ಯವಿರುವ ಅಧಿಕಾರಿಗಳ ಗಳಿಕೆ ರಜೆ ಲೆಕ್ಕಾಚಾರದ ಆಧಾರದ ಮೇಲೆ ನಗದೀಕರಣವನ್ನು ಮಂಜೂರು ಮಾಡಲು ಸಕ್ಷಮ ರಜೆ ಮಂಜೂರಾತಿ ಪ್ರಾಧಿಕಾರಿಗಳು ಕ್ರಮವಹಿಸತಕ್ಕದ್ದು ಮತ್ತು ಮಹಾಲೇಖಪಾಲರು ಲೆಕ್ಕಾಚಾರದ ಬಗ್ಗೆ ಯಾವುದೇ ವ್ಯತ್ಯಾಸವನ್ನು ತಿಳಿಸಿದಲ್ಲಿ ಅದನ್ನು ಸರಿಪಡಿಸುವ ಮತ್ತು ಅದರನ್ವಯದ ಆರ್ಥಿಕ ಸೌಲಭ್ಯಗಳಿಗೆ ಮಾತ್ರ ಅರ್ಹವಾಗುವ ಷರತ್ತಿಗೊಳಪಡಿಸಿ ಮಂಜೂರು ಮಾಡತಕ್ಕದ್ದು ಎಂದು ತಿಳಿಸಿದೆ.


Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags