Hosadigantha

28k Followers

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ 310 ಹುದ್ದೆಗಳ ನೇಮಕಾತಿ..

09 Jan 2023.09:49 AM

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 310 ಪ್ರಾಂಶುಪಾಲರು ಗ್ರೇಡ್-‌1 ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಖಾಲಿ ಹುದ್ದೆಗಳ ವಿವರ :
ರಾಜ್ಯವ್ಯಾಪಿ ಮಿಕ್ಕುಳಿದ ವೃಂದ - 265 ಹುದ್ದೆಗಳು
ಕಲ್ಯಾಣ ಕರ್ನಾಟಕ ವೃಂದ - 45 ಹುದ್ದೆಗಳು
ಒಟ್ಟು 310 ಹುದ್ದೆಗಳು

ವಿದ್ಯಾರ್ಹತೆ ಮತ್ತು ವಯೋಮಿತಿ :
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಪ್ರಾಂಶುಪಾಲರು ಗ್ರೇಡ್-‌1 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ :
ಪ್ರಾಂಶುಪಾಲರು ಗ್ರೇಡ್-‌1 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :
ಪ್ರಾಂಶುಪಾಲರು ಗ್ರೇಡ್-‌1 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 5000/-ರೂ,
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1/ಅಂಗವಿಕಲ ಅಭ್ಯರ್ಥಿಗಳು 2500/-ರೂ ಅರ್ಜಿ ಶುಲ್ಕವನ್ನು ಇ-ಪೋಸ್ಟ್‌ ಆಫೀಸ್‌ ಮೂಲಕ ಜನವರಿ 17,2023ರೊಳಗೆ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ :
ಪ್ರಾಂಶುಪಾಲರು ಗ್ರೇಡ್-‌1 ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್‌ 16,2022 ರಿಂದ ಜನವರಿ 15,2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Hosadigantha

#Hashtags