Kannada News Now

1.8M Followers

ಸೇವಾನಿರತ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ಶೇ.40ರಷ್ಟು ಮುಂಬಡ್ತಿಗೆ ಆರ್ಥಿಕ ಇಲಾಖೆ ಸಹಮತಿ

11 Jan 2023.6:50 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳ ನೇಮಕಾತಿ ನಿಯಮಗಳನ್ನು ಮಾರ್ಪಡಿಸಲಾಗಿದೆ. ಹೀಗಾಗಿ ಶೇ.60ರಷ್ಟು ನೇರನೇಮಕಾತಿ ಹಾಗೂ ಶೇ.40ರಷ್ಟು ಸೇವಾನಿರತರಿಗೆ ಮುಂಬಡ್ತಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ಸೇವಾನಿರತ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ.

ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಮಾಹಿತಿ ನೀಡಿದ್ದು, ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು ( ಸಾರ್ವಜನಿಕ ಶಿಕ್ಷಣ ಇಲಾಖೆ) ( ನೇಮಕಾತಿ) ನಿಯಮಗಳಲ್ಲಿ 6 ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕರ ವೃಂದದ ನೇಮಕಾತಿ ನಿಯಮವನ್ನು ಮಾರ್ಪಡಿಸಿ, ಶೇ.60ರಷ್ಟು ಹುದ್ದೆಗಳನ್ನು ನೇರ ನೇಮಕಾತಿಯಿಂದ ಭರ್ತಿಗೆ ಅವಕಾಶ ನೀಡಲಾಗಿದೆ ಎಂದಿದ್ದಾರೆ.

ಇನ್ನೂ ಶೇ.40ರಷ್ಟು ಹುದ್ದೆಗಳನ್ನು ಸೇವಾನಿರತ ಪ್ರಾಥಮಿಕ ಶಿಕ್ಷಕರ ವೃಂದದಿಂದ ಮುಂಬಡ್ತಿಯ ಮೂಲಕ ಭರ್ತಿ ಮಾಡಲು ಅವಕಾಶವಾಗುವಂತೆ ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡುವ ಪ್ರಸ್ತಾವನೆಗೆ ಆರ್ಥಿಕ ಇಲಾಖೆಯು ಸಹಮತಿ ನೀಡಿರೋದಾಗಿ ತಿಳಿಸಿದ್ದಾರೆ.

BIGG NEWS : ಪ್ರಧಾನಿ ಮೋದಿ ನಾಳೆ ರಾಜ್ಯಕ್ಕೆ ಎಂಟ್ರಿ : ಸಿಎಂ ಬೊಮ್ಮಾಯಿ ಭೇಟಿಯಾಗಿ ಚರ್ಚೆ ನಡೆಸಿದ ಕಟೀಲ್

BREAKING NEWS : ಶ್ರೀನಗರದಲ್ಲಿ ಭಾರತ್ ಜೊಡೊ ಯಾತ್ರೆ ಸಮಾರೋಪ ಸಮಾರಂಭ : 24 ಪಕ್ಷಗಳಿಗೆ ಕಾಂಗ್ರೆಸ್ ಆಹ್ವಾನ | Bharath Jodo Yatra


Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags