ವಾರ್ತಾಭಾರತಿ

553k Followers

ಮಡಿಕೇರಿ | ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಮುಖ್ಯ ಶಿಕ್ಷಕನ ವಿರುದ್ಧ ಪೊಕ್ಸೊ ಪ್ರಕರಣ ದಾಖಲು

12 Jan 2023.1:51 PM

ಮನೋಹರ್ ನಾಯಕ್ - ಆರೋಪಿ ಮುಖ್ಯ ಶಿಕ್ಷಕ

ಡಿಕೇರಿ ಡಿ.12 : ಇಬ್ಬರು ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಶಾಲಾ ಮುಖ್ಯ ಶಿಕ್ಷಕನೊಬ್ಬನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮಡಿಕೇರಿ ತಾಲೂಕು ವ್ಯಾಪ್ತಿಯ ಪ್ರೌಢಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಅಲ್ಲಿನ ಮುಖ್ಯ ಶಿಕ್ಷಕ ಮನೋಹರ್ ನಾಯಕ್ ಎಂಬಾತ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಇಬ್ಬರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿಯ ಪೋಷಕರು ಪೊಲೀಸ್ ದೂರು ನೀಡಿದ್ದಾರೆ.

ಈ ಹಿನ್ನೆಲೆ ಮನೋಹರ್ ನಾಯಕ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಕೊಡಗು ಮಹಿಳಾ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ಮನೋಹರ್ ನಾಯಕ್‍ನನ್ನು ಅಮಾನತುಗೊಳಿಸಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Varthabharathi

#Hashtags