Vistara News

42k Followers

Students Fell Sick | ಶಿವಮೊಗ್ಗದ ಮೊರಾರ್ಜಿ ಶಾಲೆಯಲ್ಲಿ ಊಟದ ಬಳಿಕ ವಾಂತಿ, 50 ವಿದ್ಯಾರ್ಥಿನಿಯರು ಅಸ್ವಸ್ಥ

16 Jan 2023.9:17 PM

ಶಿವಮೊಗ್ಗ: ಶಿವಮೊಗ್ಗದ ಹನಸವಾಡಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಾಂತಿಯಿಂದ ಅಸ್ವಸ್ಥಗೊಂಡ 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿನಿಯರು ಅಸ್ವಸ್ಥರಾಗಲು (Students Fell Sick) ಕಾರಣವೇನು ಎಂಬುವುದು ತಿಳಿದುಬಂದಿಲ್ಲ.

ಸೋಮವಾರ ಮಧ್ಯಾಹ್ನ ವಸತಿ ಶಾಲೆಯಲ್ಲಿ ಊಟ ಸೇವನೆ ಬಳಿಕ ಬಾಲಕಿಯರು ಅಸ್ವಸ್ಥರಾಗಿದ್ದಾರೆ. ಹೀಗಾಗಿ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಧಾವಿಸಿ ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಶಾಲೆಯ ಶಿಕ್ಷಕರು ಮೆಗ್ಗಾನ್​ನಲ್ಲಿ ಮೊಕ್ಕಾಂ ಹೂಡಿದ್ದು, ವಿದ್ಯಾರ್ಥಿನಿಯರ ತಪಾಸಣೆಗೆ ನೆರವಾಗುತ್ತಿದ್ದಾರೆ. ವಸತಿ ಶಾಲೆಯಲ್ಲಿ 250ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿದ್ದು, ಅಸ್ವಸ್ಥಗೊಳ್ಳುವವರ ಸಂಖ್ಯೆ ಏರುತ್ತಲೇ ಇದೆ.

ಸಿಮ್ಸ್ ನಿರ್ದೇಶಕ ವಿರೂಪಾಕ್ಷಪ್ಪ ಮಾತನಾಡಿ, ಮೊರಾರ್ಜಿ ಶಾಲೆಯ ಮಕ್ಕಳು ಮಧ್ಯಾಹ್ನ ಚಪಾತಿ, ಪಲ್ಯ, ಅನ್ನ ಸಾಂಬಾರ್‌ ಸೇವಿಸಿದ್ದರು. ಅದಾದ ನಂತರ ಒಬ್ಬಬ್ಬರಾಗಿ ಅಸ್ವಸ್ಥರಾಗಿದ್ದಾರೆ. ಸಂಜೆ 5ರ ನಂತರ ಶಿಕ್ಷಕರು ಮಕ್ಕಳನ್ನು ಕರೆತಂದಿದ್ದಾರೆ. ಈವರೆಗೆ 50 ಮಕ್ಕಳು ದಾಖಲಾಗಿದ್ದಾರೆ ಇನ್ನೂ 10-20 ಮಕ್ಕಳು ದಾಖಲಾಗುವ ಸಾಧ್ಯತೆ ಇದೆ. ಮಕ್ಕಳನ್ನು ಕರೆತರಲು ಆಂಬ್ಯುಲೆನ್ಸ್ ಕಳುಹಿಸಲಾಗಿದೆ ಎಂದು ತಿಳಿಸಿದರು.

ಕೆಲವರಿಗೆ ಹೊಟ್ಟೆ ನೋವು, ಇನ್ನು ಕೆಲವರಿಗೆ ವಾಂತಿ ಆಗಿದೆ. ಇನ್ನಷ್ಟು ಮಕ್ಕಳು ಸುಸ್ತಾಗಿ ತಲೆತಿರುಗಿ ಬಿದ್ದಿದ್ದಾರೆ. ಮತ್ತಷ್ಟು ಮಕ್ಕಳು ಹೆದರಿ ಆಸ್ಪತ್ರೆಗೆ ಬಂದಿದ್ದಾರೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಎಲ್ಲ ಮಕ್ಕಳಿಗೆ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಆತಂಕ ಪಡುವ ಅಗತ್ಯ ಇಲ್ಲ
ಗ್ರಾಮಾಂತರ ಶಾಸಕ ಅಶೋಕ ನಾಯಕ ಮಾತನಾಡಿ, ಮೊರಾರ್ಜಿ ಶಾಲೆಯ 80ರಷ್ಟು ಮಕ್ಕಳು ಅಸ್ವಸ್ಥರಾಗಿದ್ದಾರೆ. ಇನ್ನೂ 15 ಮಕ್ಕಳಿಗೆ ಶಾಲೆಯಲ್ಲಿ ಉಪಚರಿಸಲಾಗುತ್ತಿದೆ. ಮೇಲ್ನೋಟಕ್ಕೆ ನೀರಿನಿಂದ ತೊಂದರೆ ಆಗಿರುವ ಸಾಧ್ಯತೆ ಇದೆ. ಮಧ್ಯಾಹ್ನ ಮಕ್ಕಳು ಸೇವಿಸಿದ ಆಹಾರ, ನೀರಿನ ಸ್ಯಾಂಪಲ್ ಪಡೆಯಲಾಗಿದೆ.‌ ಲ್ಯಾಬ್‌ನಲ್ಲಿ ಟೆಸ್ಟ್‌ ಮಾಡಿದ ಬಳಿಕ ನಾಳೆ ಕಾರಣ ಗೊತ್ತಾಗುತ್ತದೆ. ಎಲ್ಲ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ತಿಳಿಸಿದ್ದಾರೆ.

| Drunk Postman | ಈ ಗ್ರಾಮದಲ್ಲಿ ಯಾರ ಮನೆಗೂ ಬಾರದು ಪೋಸ್ಟ್; ಮದ್ಯವ್ಯಸನಿ ಪೋಸ್ಟ್ ಮ್ಯಾನ್‌ನಿಂದ ಗ್ರಾಮಸ್ಥರು ಹೈರಾಣ

ಕಾರವಾರ: ಶಾಲಾ ಮಕ್ಕಳಿಗೆ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮೆಡಿಕಲ್ ಶಾಪ್‌ನಲ್ಲಿ (Medical Shop) ಕಾಂಡೋಮ್‌ ಕೊಡುವಂತಿಲ್ಲ ಹಾಗೂ ವೈನ್ ಶಾಪ್‌ನಲ್ಲಿ ತಂಬಾಕು ಉತ್ಪನ್ನಗಳ ಸಹಿತ ಮಾದಕ ವಸ್ತುಗಳನ್ನು ಮಾರಾಟ ಮಾಡಬಾರದು ಎಂದು ಈಗಾಗಲೇ ಎಲ್ಲ ಜಿಲ್ಲಾಧಿಕಾರಿಗಳು, ಅಬಕಾರಿ ಆಯುಕ್ತರಿಂದ ಸುತ್ತೋಲೆ ಹೊರಡಿಸಲಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಹೇಳಿದರು.

ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಬೆಂಗಳೂರಿನಲ್ಲಿ ಮಕ್ಕಳ ಶಾಲಾ ಬ್ಯಾಗ್‌ಗಳಲ್ಲಿ ವಯಸ್ಕರು ಬಳಸುವ ವಸ್ತುಗಳು ಪತ್ತೆಯಾಗಿದ್ದವು. ಈ ಘಟನೆಯ ಬಳಿಕ ಸಮಾಜ, ಮಕ್ಕಳನ್ನು ನಿಯಂತ್ರಿಸುವುದು ಹೇಗೆ ಎಂಬುದು ಪ್ರಶ್ನೆಯಾಗಿದೆ. ಇದು ಸಮಾಜವೇ ತಲೆತಗ್ಗಿಸುವ ವಿಚಾರವಾಗಿದೆ. ಆದರೆ, ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಇಂಥ ಅನಗತ್ಯ ವಸ್ತುಗಳನ್ನು ನೀಡಬಾರದು ಎಂಬುದು ಕಾನೂನಿನಲ್ಲೇ ಇದೆ. ಈ ನಿಟ್ಟಿನಲ್ಲಿ ಸುತ್ತೋಲೆಯನ್ನು ಹೊರಡಿಸಲಾಗಿದೆ.

| Rahul And Athiya | ದೀಪಗಳಿಂದ ಅಲಂಕರಿಸಿದ ಕೆ.ಎಲ್‌ ರಾಹುಲ್ ನಿವಾಸ: ಮದುವೆ ತಯಾರಿ ಬಲು ಜೋರು?

ಉತ್ತರ ಕನ್ನಡದಲ್ಲಿ ಬುಡಕಟ್ಟು ಸಮುದಾಯಗಳಿರುವುದರಿಂದ ಇಲ್ಲಿ ಬಾಲ್ಯ ವಿವಾಹ ಪ್ರಕರಣಗಳಿವೆ. ಆದರೆ ಇದು ಚೈಲ್ಡ್ ಮ್ಯಾರೇಜ್ ಅಲ್ಲ, ಜೈಲ್ ಮ್ಯಾರೇಜ್. ಮಕ್ಕಳಲ್ಲಿ ಜಾಗೃತಿ ಇಲ್ಲದಿರುವುದರಿಂದ ಇಂಥ ಘಟನೆಗಳಾಗುತ್ತಿದ್ದು, ಹಳ್ಳಿಗಳಲ್ಲಿ ಹೆಚ್ಚಾಗಿ ಜಾಗೃತಿ ಮೂಡಿಸಬೇಕಿದೆ. ಯಾರಿಗಾದರೂ ಜೈಲಿಗೆ ಹಾಕಿಸಬೇಕೆಂದರೆ 18 ವರ್ಷದೊಳಗಿನವರಿಗೆ ಮದುವೆ ಮಾಡಿಸಬೇಕು ಎಂದರು.

ಕಾನೂನು ಅರಿವು ಮತ್ತು ಜಾಗೃತಿ ಮೂಡಿಸಲು ಗ್ರಾಮ ಮಟ್ಟದ ಮಕ್ಕಳ ಸಂರಕ್ಷಣಾ ಸಮಿತಿ, ಗ್ರಾಮ ಪಂಚಾಯಿತಿ ಮಟ್ಟದ ಸಮಿತಿ ಬಲಗೊಳಿಸಲು ತೀರ್ಮಾನಿಸಿದ್ದೇವೆ. ಗ್ರಾಮ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಶಾಲಾ ಶಿಕ್ಷಕರು, ಅಂಗನವಾಡಿ ಶಿಕ್ಷಕರು, ಸ್ವಸಹಾಯ ಸಂಘದವರ ಸಹಯೋಗದಲ್ಲಿ ಈ ಸಮಿತಿಯನ್ನು ರಚಿಸಲಾಗುತ್ತಿದೆ. ಇದನ್ನು ಮೇಲುಸ್ತಾವರಿ ಮಾಡಲು ಗ್ರಾಮ ಪಂಚಾಯಿತಿ ಪಿಡಿಒ, ಕಾರ್ಯದರ್ಶಿ, ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರ ಸಮಿತಿ ಇರಲಿದೆ ಎಂದರು.

ರಾಜ್ಯದಲ್ಲಿ ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ 195 ಸುಮೋಟೊ ಪ್ರಕರಣ ದಾಖಲಾಗಿದೆ. ಸರಾಸರಿ ಪ್ರತಿ ಜಿಲ್ಲೆಯಲ್ಲಿ 50 ರಿಂದ 100 ಪ್ರಕರಣಗಳಿವೆ. ಆದರೆ, ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿ, ಉತ್ತರ ಕನ್ನಡದಲ್ಲಿ ಕಡಿಮೆ ಇದ್ದು, ಉತ್ತರ ಕರ್ನಾಟಕದ ಭಾಗಗಳಲ್ಲಿ ಹಾಗೂ ಬುಡಕಟ್ಟು ಜನಾಂಗಗಳಿರುವಲ್ಲಿ ಹೆಚ್ಚಿವೆ. ಜಿಲ್ಲೆಯಲ್ಲಿ ಇಂಥ 26 ಮದುವೆಗಳನ್ನು ತಡೆಯಲಾಗಿದ್ದು, ಹಳಿಯಾಳದಲ್ಲಿ 19 ಬಾಲ್ಯ ವಿವಾಹವನ್ು ತಡೆಯಲಾಗಿದೆ ಎಂದರು.

| ದಾವಣಗೆರೆ, ಹೊಸಪೇಟೆ, ಶಿವಮೊಗ್ಗ, ಬೀದರ್, ಗದಗ-ಬೆಟಗೇರಿಯಲ್ಲೂ Jio True 5G ಸೇವೆ ಶುರು

ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನವರ ಮೇಲೆ 45 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. 26 ಜಿಲ್ಲೆಗಳಲ್ಲಿ ಈಗಾಗಲೇ ಪ್ರವಾಸ ಮಾಡಿದ್ದು, ಈವರೆಗೆ ನನಗೆ ಸಿಕ್ಕ ಮಾಹಿತಿಯಂತೆ ರಾಜ್ಯದಲ್ಲಿ 2400ಕ್ಕೂ ಹೆಚ್ಚು ಅಪ್ರಾಪ್ತ ವಯಸ್ಸಿನವರ ಮೇಲಿನ ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಉತ್ತರ ಕರ್ನಾಟಕ ಭಾಗದಲ್ಲಿ ಇದರ ಪ್ರಮಾಣ ಹೆಚ್ಚಿದ್ದು, ನಿರಂತರವಾಗಿ ಮಕ್ಕಳ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಇವೆ ಎಂದು ಕಳವಳ ವ್ಯಕ್ತಪಡಿಸಿದರು.

ಮಕ್ಕಳ ಸಹಾಯವಾಣಿ 1098 ಈವರೆಗೆ ಕಾರ್ಯನಿರ್ವಹಿಸುತ್ತಿತ್ತು. ಆದರೆ, ರಾಷ್ಟ್ರಮಟ್ಟದಲ್ಲಿ ನಿಯಮಾವಳಿ ರಚನೆಯಾಗುತ್ತಿದ್ದು, 112 ಸಂಖ್ಯೆಯ ಜತೆಗೆ ಈ ಸಹಾಯವಾಣಿಯನ್ನು ಸಂಯೋಜಿಸಲು ಚರ್ಚೆ ನಡೆದಿದೆ. ಅದಕ್ಕೆ ಹಿರಿಯ ನಾಗರಿಕರು, ಸಮಾಜ ಸೇವಕರನ್ನು ನೇಮಕ ಮಾಡಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಏಪ್ರಿಲ್ ನಂತರ ಇದು ಚಾಲ್ತಿಗೆ ಬರುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು.

| Mild Earthquake : ಸೇಡಂ ತಾಲೂಕಿನ ಕೆಲವು ಕಡೆ ಲಘು ಭೂಕಂಪನ; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ದಾವಣಗೆರೆ: ಲಾರಿಗೆ ಬೈಕ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸ್ಥಳದಲ್ಲೇ (Road accident) ಮೃತಪಟ್ಟಿದ್ದಾರೆ. ದಾವಣಗೆರೆ ಹೊರಭಾಗದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದ ಈ ಘಟನೆಯಲ್ಲಿ ಮೃತಪಟ್ಟವರನ್ನು ನರೇಗಾ ಎಂಜಿನಿಯರ್‌ ಮಿಥುನ್(34) ಎಂದು ಗುರುತಿಸಲಾಗಿದೆ.

ಮೃತ ಮಿಥುನ್ ದಾವಣಗೆರೆ ತಾಲೂಕಿನ ಹೊಸ ನಾಯಕನ ಹಳ್ಳಿ ನಿವಾಸಿಯಾಗಿದ್ದು, ಜಗಳೂರು ತಾಲೂಕಿನಲ್ಲಿ ನರೇಗಾದಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಅವರು ರಾತ್ರಿ ಸ್ನೇಹಿತನ ಮದುವೆ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದರು. ಈ ಸಂದರ್ಭದಲ್ಲಿ ಲಾರಿಯ ಹಿಂಬದಿಗೆ ಅವರ ಬೈಕ್‌ ಡಿಕ್ಕಿ ಹೊಡೆದಿದೆ. ಓವರ್‌ಟೇಕ್‌ ಮಾಡುವ ಹಂತದಲ್ಲೋ, ಅಥವಾ ನಿಯಂತ್ರಣ ತಪ್ಪಿಯೋ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ.

ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ರಭಸಕ್ಕೆ ಅವರು ಹಾರಿಬಿದ್ದಿದ್ದು ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ತೀವ್ರ ರಕ್ತಸ್ರಾವವಾಗಿ ಮಿಥುನ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಕುರಿತು ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

| ರಾಜ ಮಾರ್ಗ ಅಂಕಣ | ಪಂಡಿತ್‌ ಬಿರ್ಜು ಮಹಾರಾಜ್‌: ಕಥಕ್‌ ನೃತ್ಯ ಪ್ರಕಾರಕ್ಕೆ ತಾರಾಮೌಲ್ಯ ತಂದುಕೊಟ್ಟ ಮಹಾ ಗುರು

ಬಾಗಲಕೋಟೆ: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬಂದಿರುವ ಕಾರಣದಿಂದ ಪ್ರಧಾನಿ ಮೋದಿಯವರಿಗೆ ಸಂಪ್ರದಾಯದಂತೆ ಕರ್ನಾಟಕ ನೆನಪಾಗಿದೆ. ಹೀಗಾಗಿ ಮೇಲಿಂದ ಮೇಲೆ ರಾಜ್ಯಕ್ಕೆ ಸೈಕಲ್ ತುಳಿಯುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮೋದಿಯವರು ರಾಜ್ಯದ ಕಡೆ ಮುಖ ಮಾಡುವ ವೇಳೆಗೆ ಬಿಜೆಪಿಯ ಸುಳ್ಳಿನ ಕಾರ್ಖಾನೆಯ ಕಾರ್ಮಿಕರು ಸುಳ್ಳುಗಳ ಉತ್ಪಾದನೆಯಲ್ಲಿ ಬಿರುಸಾಗಿದ್ದಾರೆ‌. ದೇಶದ ಆರ್ಥಿಕತೆ ಕುಸಿದಿರುವುದು, ಹಣದುಬ್ಬರ ಸೇರಿದಂತೆ ಪ್ರಧಾನಿ ಮೋದಿ ಅವರು ಆಡಳಿತಾತ್ಮಕವಾಗಿ ದೇಶವನ್ನು ಸೋಲಿಸಿದ್ದಾರೆ. ದೇಶದ ಜನ ಎರಡು ಬಾರಿ ಕೊಟ್ಟ ಬಹುಮತಕ್ಕೆ ಅನ್ಯಾಯ, ಅವಮಾನ ಮಾಡಿರುವ ಕೇಂದ್ರ ಸರ್ಕಾರ ತಮಗೆ ಮತ ಹಾಕಿದವರ ಬದುಕನ್ನೂ ಹೈರಾಣ ಮಾಡಿಟ್ಟು ಕೇವಲ ಸುಳ್ಳಿನ ಕಾರ್ಖಾನೆಯಲ್ಲಿ ಉತ್ಪಾದಿಸುವ ಸುಳ್ಳಿನ ಆಧಾರದಲ್ಲಿ ತನ್ನ ಸಂಪ್ರದಾಯದಂತೆ ಜನರನ್ನು ಬಕ್ರಾ ಮಾಡಲು ಮುಂದಾಗಿದೆ ಎಂದರು.

ದೇಶದ ವಿದೇಶಿ ಸಾಲ 2013-14ರಲ್ಲಿ 409.4 ಬಿಲಿಯನ್ ಡಾಲರುಗಳಷ್ಟಿತ್ತು. 2014ರ ಮೇನಲ್ಲಿ ರೂಪಾಯಿ ಮೌಲ್ಯ ಡಾಲರ್ ಎದುರು 58 ರೂಪಾಯಿಗಳಷ್ಟಿತ್ತು. ಹಾಗಾಗಿ ಅಂದು 23.74 ಲಕ್ಷ ಕೋಟಿಗಳಷ್ಟು ವಿದೇಶಿ ಸಾಲ ಇತ್ತು.

2022ರ ಜೂನ್‌ನಲ್ಲಿ ಆರ್‌ಬಿಐ ಪ್ರಕಟಿಸಿರುವಂತೆ ಭಾರತದ ವಿದೇಶಿ ಸಾಲ 619 ಬಿಲಿಯನ್ ಡಾಲರುಗೆ ಏರಿದೆ. ಈಗ ರೂಪಾಯಿಯ ಬೆಲೆ 82 ರೂ. ಆಗಿದೆ. ಆದ್ದರಿಂದ ಈಗ ವಿದೇಶಿ ಸಾಲ 50.76 ಲಕ್ಷ ಕೋಟಿಗೆ ಏರಿಕೆಯಾಗಿದೆ. ಕಳೆದ 8 ವರ್ಷಗಳಲ್ಲಿ ಮೋದಿ ಸರ್ಕಾರ ಹೊರ ದೇಶಗಳಲ್ಲಿ ಮಾಡಿದ ಸಾಲ 27 ಲಕ್ಷ ಕೋಟಿ ರೂಪಾಯಿಗಳು. ಆದರೆ, ಸುಳ್ಳಿನ ಕಾರ್ಖಾನೆಯಲ್ಲಿ, 'ಮೋದಿಯವರು ದೇಶದ ಸಾಲ ತೀರಿಸಿದ್ದಾರೆ' ಎಂದು ಭಜನೆ ಮಾಡುತ್ತಿದ್ದಾರೆ. ಸತ್ಯ ಏನೆಂದರೆ ಮೋದಿಯವರು ಸಾಲ ತೀರಿಸಿಲ್ಲ ಬದಲಾಗಿ ಹಿಮಾಲಯದಂತೆ ಬೆಳೆಸಿದ್ದಾರೆ ಎಂದರು.

10 ವರ್ಷಗಳಲ್ಲಿ ಮನಮೋಹನ್ ಸಿಂಗರು 2 ಕೋಟಿ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಿದ್ದರು. ಅದರಲ್ಲಿ 1.9 ಕೋಟಿ ಮನೆಗಳಿಗೆ ಉಚಿತ ಸಂಪರ್ಕ ಕೊಟ್ಟಿದ್ದರು. ಭಾರತದ ಚರಿತ್ರೆಯಲ್ಲೇ ಮೊಸರು, ಮಜ್ಜಿಗೆ, ಹಾಲು, ಲಸ್ಸಿ, ಗೋಧಿ, ಬಾರ್ಲಿ, ಬೆಲ್ಲ, ಜೇನು ತುಪ್ಪ, ಮಕ್ಕಳ ಪೆನ್ನು, ಪುಸ್ತಕ, ಪೆನ್ಸಿಲ್ಲುಗಳಿಗೆ ತೆರಿಗೆ ಹಾಕಿದ ಉದಾಹರಣೆಗಳಿಲ್ಲ. ಆದರೆ ಮೋದಿ ಸರ್ಕಾರ ಇವಕ್ಕೆಲ್ಲಾ 5% ರಿಂದ 18% ತೆರಿಗೆ ಹಾಕಿದೆ. ಮತ್ತೊಂದು ಕಡೆ
ಅಂಬಾನಿ ಅದಾನಿ ಮುಂತಾದ ಕಾರ್ಪೊರೇಟ್ ಬಂಡವಾಳಿಗರ ಮೇಲಿನ ತೆರಿಗೆಯನ್ನು ಮೋದಿ ಇಳಿಸಿದ್ದಾರೆ. ಮನಮೋಹನಸಿಂಗರು ಶೇ.30 ರಷ್ಟು ತೆರಿಗೆಯನ್ನು ದೊಡ್ಡ ದೊಡ್ಡ ಬಂಡವಾಳಿಗರ ಮೇಲೆ ಹಾಕುತ್ತಿದ್ದರು. ಮೋದಿಯವರು ಅದನ್ನು ಶೇ.22 ಕ್ಕೆ ಇಳಿಸಿದರು.

ಮೋದಿಯವರ ಆಡಳಿತದ ಬಗ್ಗೆ ಶ್ರೀಮಂತ ಕಾರ್ಪೊರೇಟ್‌ಗಳು ಸೆಲೆಬ್ರೇಟ್ ಮಾಡಬೇಕೆ ಹೊರತು ಬಡ, ಹಿಂದುಳಿದ, ದಲಿತ, ಮಹಿಳಾ ಸಮುದಾಯಗಳ ಯುವಕ ಯುವತಿಯರು ಸಂಭ್ರಮಿಸುವುದರಲ್ಲಿ ಅರ್ಥವೇ ಇಲ್ಲ. ಬೆಂಕಿಯಲ್ಲಿ ಬಿದ್ದವರಿಗೆ ಸ್ವರ್ಗದಲ್ಲಿದ್ದೇವೆ ಎಂಬ ಭ್ರಮೆಯನ್ನು ವಾಟ್ಸಾಪ್ ವಿಶ್ವವಿದ್ಯಾಲಯ ಮತ್ತು ಇದೆ ಅಂಬಾನಿ, ಅದಾನಿಗಳು ನಡೆಸುತ್ತಿರುವ ಮೀಡಿಯಾಗಳು ಹುಟ್ಟಿಸುತ್ತಿವೆ. ಕನ್ನಡಿಗರು ಈ ಸುಳ್ಳು ಸುದ್ದಿಗಳನ್ನು ನಂಬಬಾರದು. ಯಾವುದನ್ನೆ ನಂಬಬೇಕಿದ್ದರೂ ಪರಿಶೀಲಿಸಿಯೆ ತೀರ್ಮಾನಿಸಬೇಕೆಂದು ವಿನಂತಿಸುತ್ತೇನೆ ಎಂದರು.

| Karnataka Election : ಸಿದ್ದರಾಮಯ್ಯ ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಾರೆ: ಡಿ.ಕೆ. ಶಿವಕುಮಾರ್‌ ಸ್ಪಷ್ಟನೆ

ಶಿವಮೊಗ್ಗ: ಭಾರತೀಯ ಜನತಾ ಪಾರ್ಟಿಯಿಂದ ಹಮ್ಮಿಕೊಂಡಿದ್ದ ಬೂತ್ ವಿಜಯ ಕಾರ್ಯಕ್ರಮ ಯಶಸ್ವಿಯಾಗಿದ್ದು, 2ನೇ ಹಂತದಲ್ಲಿ ಜ. 21 ರಿಂದ 29ರವರೆಗೆ ವಿಜಯ ಸಂಕಲ್ಪ ಅಭಿಯಾನವನ್ನು ಆಯೋಜಿಸಲಾಗಿದೆ, ವಿಜಯಪುರ ಜಿಲ್ಲೆಯಲ್ಲಿ ಸಿಂಧಗಿಯಲ್ಲಿ ಚಾಲನೆ ಸಿಗಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಣಿ ಕಾರ್ಯಕ್ರಮಗಳ ಮೂಲಕ ಜನಸಾಮಾನ್ಯರನ್ನು ತಲುಪಲಿದ್ದೇವೆ. ವಿಜಯಪುರದ ಸಿಂಧಗಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಸಿಎಂ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾ‌ರ್ ಭಾಗವಹಿಸಲಿದ್ದಾರೆ ಎಂದರು.

| Black Magic : ಕೊಡಗಿನ ದಟ್ಟಾರಣ್ಯದ ಮಧ್ಯೆ ವಾಮಾಚಾರ; ಬೆಟ್ಟತ್ತೂರು ಗ್ರಾಮದಲ್ಲಿ ಕೋಳಿ ಬಲಿ, ಗ್ರಾಮಸ್ಥರಲ್ಲಿ ಆತಂಕ

ಇದೊಂದು ಸರ್ವಸ್ಪರ್ಶಿ ಕಾರ್ಯಕ್ರಮವಾಗಿದ್ದು ಬಿಜೆಪಿಯನ್ನು ಗೆಲುವಿನ ಉತ್ತುಂಗಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಲಿದೆ. 2 ಕೋಟಿ ಮತದಾರರನ್ನು ಈ ವಿಜಯ ಸಂಕಲ್ಪ ಅಭಿಯಾನದ ಮೂಲಕ ನಮ್ಮ ಕಾರ್ಯಕರ್ತರು ತಲುಪುತ್ತಾರೆ. 10 ವಿಭಾಗಗಳಲ್ಲಿ, 39 ಸಂಘಟನಾತ್ಮಕ ಜಿಲ್ಲೆಗಳಲ್ಲಿ, 312 ಮಂಡಲಗಳಲ್ಲಿ ನಮ್ಮ ಕಾರ್ಯಕರ್ತರು ಬಿಜೆಪಿಯ ಸಾಧನೆಯನ್ನು ಮನೆ ಮನೆಗೆ ತಲುಪಿಸಲಿದ್ದಾರೆ. ಕೇಂದ್ರ- ರಾಜ್ಯ ಸರ್ಕಾರಗಳ ಸಾಧನೆಗಳ ಕುರಿತು ಕರಪತ್ರಗಳನ್ನು ಹಂಚಿಕೆ ಮಾಡಲಾಗುವುದು. 2 ಕೋಟಿಗಿಂತ ಹೆಚ್ಚು ಮತದಾರರ ಸಂಪರ್ಕ ಮಾಡಿ, ಅವರ ಮನೆಮನೆಗೆ ತೆರಳಿ ಕರಪತ್ರ ಹಂಚಲಿದ್ದೇವೆ. ಫಲಾನುಭವಿಗಳನ್ನು ಮಾತನಾಡಿಸಿ ಒಂದು ಕೋಟಿಗಿಂತ ಹೆಚ್ಚು ಕುಟುಂಬಗಳನ್ನು ಸಂಪರ್ಕಿಸಲಿದ್ದೇವೆ. ಬಿಜೆಪಿ ಸರ್ಕಾರಗಳ ಯೋಜನೆಗಳಿಂದ ಈ ಕುಟುಂಬಗಳ ಸಬಲೀಕರಣ ಆಗಿರುವ ಬಗ್ಗೆ ತಿಳಿಸಲಿದ್ದೇವೆ. ವಾಹನಗಳ ಮೇಲೆ ಸ್ಟಿಕರ್ ಹಾಕಿಸುವ ಕೆಲಸವೂ ನಡೆಯಲಿದೆ ಎಂದು ವಿವರಿಸಿದರು.

ಜನವರಿ 21 ರಿಂದ ಅಭಿಯಾನ ಆರಂಭ ಆಗಲಿದ್ದು, ಅದಕ್ಕಾಗಿ ಈಗಾಗಲೇ ವ್ಯವಸ್ಥಿತವಾಗಿ ಪೂರ್ವಭಾವಿ ಸಿದ್ಧತೆಗಳು ನಡೆದಿವೆ. ಜಿಲ್ಲಾ ಮತ್ತು ಮಂಡಲಗಳಲ್ಲಿ ಸಭೆಗಳನ್ನು ನಡೆಸಿ ಬಿಜೆಪಿಯು ಮುಂಬರುವ ಚುನಾವಣೆಯಲ್ಲಿ 150 ಸ್ಥಾನಗಳನ್ನು ಪಡೆಯುವ ಗುರಿಯನ್ನು ಹಾಕಿಕೊಂಡಿದೆ. ಅದಕ್ಕಾಗಿ ತಳಹಂತದಿಂದ ಪಕ್ಷವನ್ನು ಬಲಪಡಿಸುವುದು ಸೇರಿದಂತೆ ವಿವಿಧ ಕಾರ್ಯತಂತ್ರಗಳನ್ನು ಮಾಡಲಾಗುತ್ತಿದೆ. ನಮ್ಮ 'ಡಬಲ್ ಎಂಜಿನ್' ಸರ್ಕಾರಗಳ ಯೋಜನೆಗಳ ಫಲಾನುಭವಿಗಳ ಸಂಖ್ಯೆ ರಾಜ್ಯದಲ್ಲಿ ಒಂದು ಕೋಟಿಗೂ ಅಧಿಕ ಇದ್ದು, ಆ ಪಟ್ಟಿಯನ್ನು ತಯಾರಿಸಲಾಗಿದೆ ಎಂದು ತಿಳಿಸಿದರು.

ಇದಲ್ಲದೆ ಮನೆಮನೆಗೆ ಕರಪತ್ರ ಹಂಚುವುದು, ಗೋಡೆಗಳ ಮೇಲೆ ಬಿಜೆಪಿ ಸಾಧನೆ ಬಿಂಬಿಸುವ ಪೇಂಟಿಂಗ್ ಹಾಗೂ ಸದಸ್ಯತ್ವ ಅಭಿಯಾನ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಒಳಗೊಂಡ ಕರಪತ್ರಗಳನ್ನು ಸುಮಾರು ಒಂದು ಕೋಟಿ ಮನೆಗಳಿಗೆ ಹಂಚುವ ಗುರಿಯನ್ನು ಹಾಕಿಕೊಳ್ಳಲಾಗಿದೆ ಎಂದರು.

| Amala Paul | ಎರ್ನಾಕುಲಂನ ದೇಗುಲ ಪ್ರವೇಶಕ್ಕೆ ನಿರ್ಬಂಧ! ಬೇಸರ ವ್ಯಕ್ತಪಡಿಸಿದ ಹೆಬ್ಬುಲಿ ನಟಿ ಅಮಲಾ ಪೌಲ್

ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತಮ್ಮ ಮನೆ, ದ್ವಿಚಕ್ರವಾಹನ ಹಾಗೂ ಕಾರುಗಳಿಗೆ ಅಂಟಿಸಿಕೊಳ್ಳಲು ಮೂರು ನಮೂನೆಯ ಸ್ಪಿಕರ್‌ಗಳನ್ನು ವಿತರಿಸಲಾಗುವುದು. ಸರ್ಕಾರದ ಸಾಧನೆ ಬಿಂಬಿಸಲು ಹಾಗೂ ಜನ ಕಲ್ಯಾಣದೆಡೆಗೆ ಬಿಜೆಪಿಯ ಬದ್ಧತೆ ಸಾರಲು ಪ್ರತಿ ಬೂತ್‌ನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಾಧನೆ ಸಾರುವ ಹಾಗೂ ಯೋಜನೆಗಳ ಮಾಹಿತಿ ನೀಡುವ ಗೋಡೆ ಪೇಂಟಿಂಗ್‌ಗಳನ್ನು ಮಾಡಿಸಲಾಗುತ್ತದೆ. ಈ ಅಭಿಯಾನದ ಅವಧಿಯಲ್ಲಿ ಒಂದು ಕೋಟಿ ಹೊಸ ಸದಸ್ಯರು ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದರು.

| ವೈದ್ಯ ದರ್ಪಣ ಅಂಕಣ | ನಮ್ಮ ಶರೀರವನ್ನು ನಿಯಂತ್ರಿಸುವವರು ಯಾರು?

ಸದಸ್ಯತ್ವ ಅಭಿಯಾನ ಸಂಪೂರ್ಣ ಆನ್‌ಲೈನ್‌ ಇರಲಿದ್ದು (ಮಿಸ್ಡ್‌ ಕಾಲ್), ನೋಂದಣಿಯಾದ ಸದಸ್ಯರ ಸಂಖ್ಯೆಯನ್ನು ವೆಬ್‌ಸೈಟ್‌ನಲ್ಲಿ ನೇರವಾಗಿ ನೋಡಬಹುದು. ನೋಂದಣಿ ಪ್ರಕ್ರಿಯೆ ಬಗೆಗೂ ಕಾರ್ಯಕರ್ತರಿಗೆ ಕಾರ್ಯಾಗಾರಗಳನ್ನು ನಡೆಸಲಾಗುತ್ತದೆ. ಈ ತಿಂಗಳ ಜನವರಿ 29ರಂದು 'ಮನ್ ಕೀ ಬಾತ್' ಕಾರ್ಯಕ್ರಮವು ಕರ್ನಾಟಕದ ಪಾಲಿಗೆ ಮತ್ತಷ್ಟು ವಿಶೇಷವಾಗಿರಲಿದೆ. ಶೇ. 90ರಷ್ಟು ಬೂತ್‌ ಮಟ್ಟದ ಕಾರ್ಯಕರ್ತರು ಮನ್ ಕೀ ಬಾತ್ ಆಲಿಸಿ ದಾಖಲೆ ಮಾಡಲಿದ್ದಾರೆ ಎಂದು ಟಿ.ಡಿ. ಮೇಘರಾಜ್ ಹೇಳಿದರು.

ಸೂಡಾ ಮಾಜಿ ಅಧ್ಯಕ್ಷ ಎಸ್.ದತ್ತಾತ್ರಿ, ಜಿಲ್ಲಾ ಉಪಾಧ್ಯಕ್ಷ ಮಧುಸೂದನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ.ಶ್ರೀನಾಥ್, ಶಿವರಾಜ್, ಶಿವಮೊಗ್ಗ ಗ್ರಾಮಾಂತರ ಅಧ್ಯಕ್ಷ ರತ್ನಾಕರ್, ಜಿಲ್ಲಾ ಮಾಧ್ಯಮ ಸಂಚಾಲಕ ಕೆ.ವಿ.ಅಣ್ಣಪ್ಪ ಮತ್ತಿತರರು ಇದ್ದರು.

| Swiggy | ತುರ್ತು ಸಂದರ್ಭದಲ್ಲಿ ಸ್ವಿಗ್ಗಿ ವಿತರಣಾ ಪ್ರತಿನಿಧಿಗಳಿಗೆ ಉಚಿತ ಆಂಬ್ಯುಲೆನ್ಸ್ ಸೇವೆ

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Vistara News

#Hashtags