Kannada News Now

1.8M Followers

BREAKING NEWS: '15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕ'ರ ನೇಮಕಾತಿ: 'ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು'ಗೊಳಿಸಿ, ಹೈಕೋರ್ಟ್ ಆದೇಶ | Teacher Recruitment

30 Jan 2023.4:53 PM

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ( School Education Department ) ಕರೆಯಲಾಗಿದ್ದಂತ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ( Karnataka Teacher Recruitment ) ಸಂಬಂಧಿಸಿದಂತೆ ಪ್ರವೇಶ ಪರೀಕ್ಷೆ, ದಾಖಲಾತಿ ಪರಿಶೀಲನೆ ಬಳಿಕ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು.

ಈ ಪಟ್ಟಿಯನ್ನು ಇದೀಗ ಕರ್ನಾಟಕ ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠವು ರದ್ದುಗೊಳಿಸಿದೆ.

ಈ ಸಂಬಂಧ ನೂರಾರೂ ಅಭ್ಯರ್ಥಿಗಳು ಹೈಕೋರ್ಟ್ ಗೆ ( Karnataka High Court ) ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡ ಏಕ ಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು.

ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರು ನ್ಯಾಯಾಲಯದ ಮುಂದೆ ವಾದಿಸಿ, ಪತಿಯ ಜಾತಿ, ಆದಾಯ ಪ್ರಮಾಣ ಪತ್ರವನ್ನು ( Cast and Income Certificate ) ಪರಿಗಣಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಕ್ಷಣ ಇಲಾಖೆ ( Education Department ) ಪ್ರಕಟಿಸಿದೆ. ಇದು ನಿಯಮ ಬಾಹಿರವಾಗಿದೆ. ಕಾನೂನು ಬಾಹಿರವಾಗಿರುವಂತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿದ್ದರು.

ಇನ್ನೂ ತಂದೆಯ ಜಾತಿ, ಆದಾಯ ಪ್ರಮಾಣ ಪತ್ರವನ್ನು ಪರಿಗಣಿಸುವಂತೆ ನ್ಯಾಯಪೀಠಕ್ಕೆ ಸೂಚಿಸುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆ ಪ್ರಕಟಿಸಿದ್ದಂತ 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ( Provisional Selection List of Primary School Teachers ) ರದ್ದುಗೊಳಿಸಿದೆ.

BIGG NEWS : ಬೆಂಗಳೂರಲ್ಲಿ ಮತ್ತೆ 4 ಅಡಿಯಷ್ಟು ಆಳ ಕುಸಿದ ರಸ್ತೆ : ಸಾರ್ವಜನಿಕರ ಆಕ್ರೋಶ

ಕೊಪ್ಪಳಕ್ಕೆ ಆಗಮಿಸಿದ ಜೆಡಿಎಸ್ ಪಂಚರತ್ನ ರಥಯಾತ್ರೆ |JDS Pancharatna yatra

BREAKING NEWS: ಫೆ.6ರಂದು ಬೆಂಗಳೂರಿಗೆ ಮೋದಿ ಆಗಮನ: ಗುಬ್ಬಿ, ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ


Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags