Kannada News Now

1.8M Followers

BIGG NEWS : ಮಾ.1 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸರ್ಕಾರಿ ನೌಕರರ ಕರೆ

21 Feb 2023.9:15 PM

ಬೆಂಗಳೂರು : ಬಿಜೆಪಿ ಸರ್ಕಾರಕ್ಕೆ ಸರ್ಕಾರಿ ನೌಕರರ ಏಳನೇ ಪರಿಷ್ಕ್ರೃತ ವೇತನ ಹಾಗೂ ಹಳೆ ಪಿಂಚಣಿ ಯೋಜನೆಗಾಗಿನ ಪಟ್ಟು ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಜಾರಿಗಾಗಿ ನೌಕರರ ಪಟ್ಟು ಹಿಡಿದಿದ್ದು, ಫೆ.22 ರಿಂದ ಫೆ.28 ರವರೆಗೆ ಸರ್ಕಾರಕ್ಕೆ 7 ದಿನಗಳ ಗಡುವು ನೀಡಿದ್ದಾರೆ.

ಒಂದೇ ವೇಳೆ ಯೋಜನೆ ಜಾರಿಗೆ ತರದಿದ್ದರೆ ಮಾರ್ಚ್ 1 ರಿಂದ ಕರ್ತವ್ಯಕ್ಕೆ ಗೈರಾಗಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ನೌಕರರು ನಿರ್ಧರಿಸಿದ್ದಾರೆ. ಇಂದು ನಡೆದ ನೌಕರರ ಸಂಘದ ತುರ್ತು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.ಏಳನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು 40% ಫಿಟ್ಮೆಂಟ್ನ್ನು ದಿನಾಂಕ 1.07.2022 ರಿಂದ ಜಾರಿಗೆ ತರುವುದು, ರಾಜಸ್ತಾನ, ಛತ್ತೀಸಗಢ, ಜಾರ್ಖಂಡ್, ಪಂಜಾಬ್ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಎನ್ಪಿಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ತಂದಿರುವಂತೆಯೇ ಕರ್ನಾಟಕ ರಾಜ್ಯದಲ್ಲಿಯೂ ಮಾಡಬೇಕು ಎಂದು ಬೇಡಿಕೆಯಿಟ್ಟಿದೆ.

ಬಿಜೆಪಿ ಸರ್ಕಾರಕ್ಕೆ ಸರ್ಕಾರಿ ನೌಕರರ ಏಳನೇ ಪರಿಷ್ಕ್ರೃತ ವೇತನ ಹಾಗೂ ಹಳೆ ಪಿಂಚಣಿ ಯೋಜನೆಗಾಗಿನ ಪಟ್ಟು ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಸರ್ಕಾರಿ ನೌಕರರು ತಮ್ಮ ಪಟ್ಟು ಬಿಗಿಪಡಿಸಲು ಮುಂದಾಗಿದ್ದು, ಬೊಮ್ಮಾಯಿ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.

ರಾಜ್ಯದ ಸರ್ಕಾರಿ ನೌಕರರು ಬಜೆಟ್ ನಲ್ಲಿ ಸಿಎಂ ಬೊಮ್ಮಾಯಿ ಬಂಪರ್ ನೀಡುವ ನಿರೀಕ್ಷೆಯಲ್ಲಿದ್ದರು. 7ನೇ ವೇತನ ಆಯೋಗದ ಬಗ್ಗೆ ಸಿಎಂ ಪ್ರಸ್ತಾಪಿಸುತ್ತಾರೆ ಅಂತ ಅಂದುಕೊಂಡಿದ್ದರು. ಆದರೆ ಸಿಎಂ ಬೊಮ್ಮಾಯಿ ಬಜೆಟ್ನಲ್ಲಿ ಈ ಬಗ್ಗೆ ಪ್ರಸ್ತಾಪವನ್ನೇ ಮಾಡಿಲ್ಲ.ಇದರಿಂದ ಸರ್ಕಾರಿ ನೌಕರರು ಇನ್ನಷ್ಟು ಅಸಮಾಧಾನಗೊಂಡಿದ್ದಾರೆ.

BREAKING NEWS : ರೋಹಿಣಿ, ರೂಪಾ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್ : ಮತ್ತೊಂದು 'ವಾಟ್ಸಾಪ್ ಚಾಟ್' ಲಿಸ್ಟ್ ಫೋಟೋ ವೈರಲ್


Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags