Kannada News Now

1.8M Followers

BREAKING NEWS: 10 ದಿನಗಳಲ್ಲಿ ಜಿಲ್ಲಾ, ತಾಲೂಕು ಪಂಚಾಯ್ತಿ ಕ್ಷೇತ್ರ ಪುನರ್ವಿಂಗಡಣೆ ಅಧಿಸೂಚನೆ: ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ

14 Feb 2023.4:53 PM

ಬೆಂಗಳೂರು: ರಾಜ್ಯದಲ್ಲಿ ಬಾಕಿ ಇರುವಂತ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ( ZP, TP Election ) ಸಂಬಂಧ ಕ್ಷೇತ್ರ ಪುನರ್ ವಿಂಗಡಣನೆಯ ಅಧಿಸೂಚನೆ ಹೊರಡಿಸುವುದು ಬಾಕಿ ಇತ್ತು. ಈ ಅಧಿಸೂಚನೆಯನ್ನು 10 ದಿನಗಳಲ್ಲಿ ಹೊರಡಿಸಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರವು ಹೈಕೋರ್ಟ್ ಗೆ ( Karnataka High Court ) ಮಾಹಿತಿ ನೀಡಿದೆ.

ಇಂದು ರಾಜ್ಯ ಚುನಾವಣಾ ಆಯೋಗ ಜಿಲ್ಲಾ, ತಾಲೂಕು ಪಂಚಾಯ್ತಿ ಕ್ಷೇತ್ರ ವಿಂಗಡಣೆ ಕುರಿತು ಸಲ್ಲಿಸಿದ್ದಂತ ಪಿಐಎಲ್ ಅರ್ಜಿಯ ವಿಚಾರಣೆ ನಡೆಸಿತು. ಈ ವೇಳೆ ಹೈಕೋರ್ಟ್ ನ್ಯಾಯಪೀಠಕ್ಕೆ ಸರ್ಕಾರದ ಪರವಾಗಿ ಎಜಿ ಪ್ರಭುಲಿಂಗ್ ನಾವದಗಿ ಅವರು 10 ದಿನಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ ಹೊರಡಿಸಲಾಗುವುದು ಎಂದರು ಮಾಹಿತಿ ನೀಡಿದರು.

ರಾಜ್ಯ ಸರ್ಕಾರಕ್ಕೆ ( Karnataka Government ) ಜನವರಿ 30ರಂದು ಕ್ಷೇತ್ರ ಪುನರ್ ವಿಂಗಡಣೆ ಕುರಿತಾದ ಸಮಿತಿಯ ವರದಿಯನ್ನು ನೀಡಲಾಗಿದೆ. ಆ ವರದಿಯನ್ನು ಆಧರಿಸಿ ಕ್ಷೇತ್ರ ಪುನರ್ ವಿಂಗಡಣೆಯ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ. ಸಾರ್ವಜನಿಕರ ಆಕ್ಷೇಪಣೆಗಳನ್ನು ಪರಿಗಣಿಸಲಾಗುತ್ತದೆ ಎಂದು ತಿಳಿಸಿದರು.

ಈ ಮಾಹಿತಿಯನ್ನು ಪಡೆದಂತ ಹೈಕೋರ್ಟ್ ನ್ಯಾಯಪೀಠವು ಜಿಲ್ಲಾ, ತಾಲೂಕು ಪಂಚಾಯ್ತಿ ಚುನಾವಣೆ ಸಂಬಂಧ ನೀಡಿದಂತ ಹೇಳಿಕೆ ದಾಖಲಿಸಿಕೊಂಡು, 2 ವಾರ ಅರ್ಜಿಯ ವಿಚಾರಣೆಯನ್ನು ಮುಂದೂಡಿಕೆ ಮಾಡಿತು.

Job Alert : ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ; 'ಭಾರತೀಯ ಕ್ರೀಡಾ ಪ್ರಾಧಿಕಾರ'ದಲ್ಲಿ ಬಂಪರ್ ನೇಮಕಾತಿ, ತಿಂಗಳಿಗೆ 2 ಲಕ್ಷ ವೇತನ | SAI Recruitment

BIG NEWS: 'ಆಶಾ ಕಾರ್ಯಕರ್ತೆ'ಯರಿಗೆ ಗುಡ್ ನ್ಯೂಸ್: 'ಗೌರವಧನ' ಹೆಚ್ಚಿಸಲು ಕ್ರಮ, ಬಜೆಟ್‌ನಲ್ಲೇ ಘೋಷಿಸಲು ಪ್ರಯತ್ನ - ಸಚಿವ ಸುಧಾಕರ್ ಘೋಷಣೆ


Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags