ವಿಜಯವಾಣಿ

506k Followers

17% ಹೆಚ್ಚಳದ ನಂತರ ಸರ್ಕಾರಿ ನೌಕರರ ವೇತನವೆಷ್ಟು? ಇಲ್ಲಿದೆ ವೇತನ ವ್ಯತ್ಯಾಸದ ಪಟ್ಟಿ.

01 Mar 2023.2:23 PM

ಬೆಂಗಳೂರು: ಸರ್ಕಾರಿ ನೌಕರರ ಮುಷ್ಕರಕ್ಕೆ ಮಣಿದಿರುವ ರಾಜ್ಯ ಸರ್ಕಾರ, ಸದ್ಯ ಮೂಲ ವೇತನದ ಶೇಕಡ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ನಿರ್ಧರಿಸಿದೆ. ಈ ಆದೇಶ ಮುಂದಿನ ತಿಂಗಳು ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ವೇತನ ಹೆಚ್ಚಳದ ನೂತನ ಅದೇಶದಿಂದ ಸದ್ಯ ಸರ್ಕಾರದ ಬೊಕ್ಕಸಕ್ಕೆ 6,000 ಕೋಟಿ ರೂ.ಗಳನ್ನು ಹೆಚ್ಚುವರಿ ಹೊರೆ ಬೀಳುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಈ ಬಾರಿಯ ಬಜೆಟ್​ನಲ್ಲಿ ಸರ್ಕಾರಿ ನೌಕರರ ಹೆಚ್ಚುವರಿ ವೇತನಕ್ಕೆ 6 ಸಾವಿರ ಕೋಟಿ ರೂ. ಮೀಸಲಿಡಲಾಗಿತ್ತು. ಆದರೆ ನೂತನ ಆದೇಶದಿಂದ ಸರ್ಕಾರ ವಾರ್ಷಿಕ 10,800 ಕೋಟಿ ರೂ. ಮೀಸಲಿಡಬೇಕಾಗಿದೆ. ಇದು ಸರ್ಕಾರದ ಅಂದಾಜಿಗಿಂತ 4,800 ಕೋಟಿ ರೂ. ಹೆಚ್ಚುವರಿ ಹೊರೆಯಾಗಲಿದೆ ಎಂದು ಲೆಕ್ಕಾಚಾರ ಹಾಕಲಾಗಿದೆ. ಇನ್ನು ಮುಂದೆ ಪ್ರತಿ ತಿಂಗಳು ಸರ್ಕಾರಿ ನೌಕರರಿಗೆ ವೇತನ ನೀಡಲು 900 ಕೋಟಿ ರೂ. ಹೆಚ್ಚುವರಿಯಾಗಿ ಮೊತ್ತ ಬರಿಸಬೇಕಾಗಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Vijayvani

#Hashtags