News18 ಕನ್ನಡ

401k Followers

Karnataka Assembly Election 2023: ರಾಜ್ಯ ವಿಧಾನಸಭಾ ಚುನಾವಣೆಗೆ ಕೌಂಟ್‌ಡೌನ್‌; ತಕ್ಷಣದಿಂದ ಸಿದ್ಧರಾಗುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ

24 Mar 2023.09:07 AM

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Election 2023) ಕೌಂಟ್‌ಡೌನ್ ಶುರುವಾಗಿದೆ. ಚುನಾವಣೆ ಘೋಷಣೆಗೂ ಮುನ್ನವೇ ಕಳೆದ ಎರಡು ಮೂರು ತಿಂಗಳಿಂದ ಜನಪ್ರತಿನಿಧಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ದಿನ ಹತ್ತಿರ ಬರುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಎದೆಯಲ್ಲೂ ತಲ್ಲಣ ಶುರುವಾಗಿದ್ದು, ಈ ಮಧ್ಯೆ ರಾಜ್ಯ ಚುನಾವಣಾ ಆಯೋಗವು (Karnataka Election Commission) ರಾಜಕಾರಣಿಗಳಿಗೆ ಮತ್ತಷ್ಟು ಟೆನ್ಶನ್ ನೀಡಿದೆ.ಹೌದು.. ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಬೆರಳೆಣಿಕೆಯ ದಿನಗಳು ಮಾತ್ರ ಬಾಕಿಯಿದ್ದು, ಯಾವ ಕ್ಷಣದಲ್ಲಾದರೂ ನೀತಿ ಸಂಹಿತೆ ಘೋಷಣೆ ಆಗಬಹುದು ಎಂದು ರಾಜ್ಯ ಚುನಾವಣಾ ಆಯೋಗ ಹೇಳಿದೆ. ಈ ಬಗ್ಗೆ ಜಿಲ್ಲಾ ಚುನಾವಣಾ ಅಧಿಕಾರಿಗಳು, ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರದ ಮೂಲಕ ನೋಟಿಫಿಕೇಶನ್ ಕಳಿಸಿರುವ ರಾಜ್ಯ ಚುನಾವಣಾ ಆಯೋಗ, ಈಗಿನಿಂದ ಯಾವುದೇ ಕ್ಷಣದಲ್ಲೂ ಚುನಾವಣಾ ಘೋಷಣೆ ಆಗುವ ಸಾಧ್ಯತೆ ಇದ್ದು, ತಕ್ಷಣ ಎಲ್ಲದಕ್ಕೂ ಸಿದ್ಧರಾಗಿ ಇರುವಂತೆ ಸೂಚನೆ ನೀಡಿದೆ.

Chitradurga: ಚುನಾವಣೆಯಲ್ಲಿ ಅಕ್ರಮ ಮದ್ಯ ಸಾಗಣೆ ತಡೆಗೆ ಆಂಧ್ರದ ಅಧಿಕಾರಗಳ ಸಹಕಾರ ಕೋರಿದ ಚಿತ್ರದುರ್ಗ ಡಿಸಿ!

ಚುನಾವಣಾ ಆಯೋಗದ ಆದೇಶದಲ್ಲಿ ಏನಿದೆ?

ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ 'ಕರ್ನಾಟಕ ರಾಜ್ಯ ವಿಧಾನಸಭೆಗೆ ಏಪ್ರಿಲ್ ಮತ್ತು ಮೇ ತಿಂಗಳ ನಡುವೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಕೇಂದ್ರ ಚುನಾವಣಾ ಆಯೋಗದಿಂದ ಈಗಿನಿಂದ ಯಾವ ಕ್ಷಣದಲ್ಲಾದರೂ ಚುನಾವಣೆ ಘೋಷಣೆ ಆಗಬಹುದು. ಹೀಗಾಗಿ ಕೆಲವು ಮಾಡಲೇಬೇಕಾದ ಚುನಾವಣಾ ಪೂರ್ವ ಸಿದ್ಧತೆಯನ್ನು ಕಡ್ಡಾಯವಾಗಿ ಚುನಾವಣೆ ಘೋಷಣೆಗೆ ಮುನ್ನವೇ ಮಾಡಿ ಮುಗಿಸಬೇಕು' ಎಂದು ಸೂಚಿಸಲಾಗಿದೆ.

ಅಲ್ಲದೇ, ಇದರೊಂದಿಗೆ ಚುನಾವಣಾ ನೀತಿ ಸಂಹಿತೆಯ ಮಾದರಿ ಜಾರಿ ಸ್ವರೂಪವನ್ನು ಲಗತ್ತಿಸಲಾಗಿದ್ದು, ಚುನಾವಣೆ ಘೋಷಣೆಯಾದ ತತ್‌ಕ್ಷಣದಿಂದ ಜಿಲ್ಲಾ ಚುನಾವಣಾ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಇನ್ನು ಮಾರ್ಚ್‌ 27 ಅಥವಾ 28ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದ್ದು, ಈಗಾಗಲೇ ಒಂದು ಹಂತದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಚುನಾವಣಾ ಪೂರ್ವ ತಯಾರಿಗಳನ್ನು ಮಾಡಲಾಗ್ತಿದೆ.

Janardhana Reddy: ಚುನಾವಣೆ ಸಂದರ್ಭದಲ್ಲೇ ಗಣಿಧಣಿಗೆ ಸಂಕಷ್ಟ! ವಿದೇಶಗಳಲ್ಲಿ ರೆಡ್ಡಿ ಹಣದ ಮೂಲದ ಮಾಹಿತಿ ನೀಡಲು ಕೋರ್ಟ್ ಆದೇಶ
Disclaimer

Disclaimer

This story is auto-aggregated by a computer program and has not been created or edited by Dailyhunt Publisher: News18 Kannada

#Hashtags