Kannada News Now

1.8M Followers

'ರಾಜ್ಯ ಸರ್ಕಾರಿ ನೌಕರ'ರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಮಲ್ಲಿಕಾರ್ಜುನ: ಶೀಘ್ರವೇ 'OPS ಜಾರಿ'

04 Jun 2023.7:29 PM

ದಾವಣಗೆರೆ: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಹಳೆ ಪಿಂಚಣಿ ಯೋಜನೆ ಜಾರಿ ಮಾಡುವುದಾಗಿತ್ತು. ಇದನ್ನು ಜಾರಿ ಮಾಡುವುದಾಗಿಯೂ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲೂ ಘೋಷಿಸಿತ್ತು. ಈ ಬೆನ್ನಲ್ಲೇ ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ.

OPS ಜಾರಿಗೊಳಿಸುವುದಾಗಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ತಿಳಿಸಿದ್ದಾರೆ.

ನಗರದಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರ ಗೊಂದಲದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದಂತ ಅವರು, ಒಂದೊಂದು ಜಿಲ್ಲೆಗೂ ಇಬ್ಬರು, ಮೂವರು ಆಕಾಂಕ್ಷಿಗಳು ಇರುತ್ತಾರೆ. ಅದನ್ನೆಲ್ಲ ಸರಿಪಡಿಸಿ ಸಿಎಂ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡುತ್ತಾರೆ ಎಂದರು.

ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರವಾಗಿದೆ. ಈಗಾಗಲೇ ಚುನಾವಣಾ ಪೂರ್ವದಲ್ಲಿ ನಾವು ನೀಡಿದ್ದಂತ ಐದು ಗ್ಯಾರಂಟಿ ಭರವಸೆಗಳನ್ನು ಈಗ ಏಕಕಾಲದಲ್ಲೇ ಜಾರಿಗೊಳಿಸುವಂತ ನಿರ್ಧಾರವನ್ನು ಪ್ರಕಟಿಸಿದ್ದೇವೆ. ಜಾರಿಯೂ ಮಾಡಿದ್ದೇವೆ ಎಂದರು.

ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದ್ದವು. ಹೊಸ ಪಿಂಚಣಿ ರದ್ದುಗೊಳಿಸಿ, ಹಳೆ ಪಿಂಚಣಿ ಜಾರಿಗೊಳಿಸುವುದಾಗಿದೆ. ಸರ್ಕಾರಿ ನೌಕರರಿಗೆ ಕೊಟ್ಟ ಮಾತಿನಂತೆ NPS ರದ್ದುಗೊಳಿಸಿ, OPS ಜಾರಿಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ. ಶೀಘ್ರವೇ ಸಿಎಂ ಸಿದ್ಧರಾಮಯ್ಯ ಈ ಬಗ್ಗೆಯೂ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ನಡೆಯುತ್ತಿರುವಂತ ಅಕ್ರಮ ಮರಳು ಗಣಿಗಾರಿಕೆ ತಡೆಗೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಈ ಮೂಲಕ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಗಟ್ಟಲಾಗುತ್ತದೆ ಎಂದು ತಿಳಿಸಿದರು.

ಇನ್ಮುಂದೆ ಈ ನಾಟಕ ಮಾಡಿದರೆ ಸೂಲಿಬೆಲಿಗೆ ಜೈಲೇಗತಿ: ಸಚಿವ ಎಂ.ಬಿ ಪಾಟೀಲ್ ಖಡಕ್ ಎಚ್ಚರಿಕೆ

ಬಗರ್ ಹುಕುಂ ಸಮಸ್ಯೆ ಪರಿಹಾರ ನೀಡುವುದಕ್ಕೆ ಮೊದಲ ಆದ್ಯತೆ - ಸಚಿವ ಮಧು ಬಂಗಾರಪ್ಪ


Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags