Kannada News Now

1.8M Followers

`BPL' ಕಾರ್ಡ್ ಹೊಂದಿರುವ ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

04 Jul 2020.05:42 AM

ಬೆಂಗಳೂರು : ಕೆಲವು ಸರ್ಕಾರಿ, ಸರ್ಕಾರಿ ನಿಗಮ, ಮಂಡಳಿ, ಪ್ರಾಧಿಕಾರ ವಿಶ್ವವಿದ್ಯಾಲಯ, ಸಂಸ್ಥೆಯ ಅಧಿಕಾರಿ, ನೌಕರರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರು ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ವಿತರಿಸುವ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಂಡು, ಸರ್ಕಾರದಿಂದ ವಿತರಿಸುವ ಪಡಿತರ ಮತ್ತು ಇನ್ನಿತರ ಸರ್ಕಾರಿ ಸೇವೆಗಳನ್ನು ಪಡೆದುಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಹೀಗಾಗಿ ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹಿಂದುರರುಗಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಬಿ.ಪಿ.ಎಲ್ ಪಡಿತರ ಚೀಟಿಗಳನ್ನು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ನೀಡುವ ಸೌಲಭ್ಯವಾಗಿದ್ದು, ಇದನ್ನು ಒಬ್ಬ ಸರ್ಕಾರಿ ನೌಕರನಾಗಿ ಉಪಯೋಗಿಸಿಕೊಳ್ಳುವುದು ಅಕ್ಷಮ್ಯ ಅಪರಾಧ.

ಒಬ್ಬ ಸರ್ಕಾರಿ ಅಧಿಕಾರಿ/ನೌಕರ ಸರ್ಕಾರದಿಂದ ವೇತನ ಭತ್ಯೆಗಳನ್ನು ಪಡೆಯುತ್ತಿರುವುದರಿಂದ ಯಾವ ರೀತಿಯಲ್ಲೂ ಬಡತನ ರೇಖೆಗಿಂತ ಕೆಳಗೆ ಬರುವುದಿಲ್ಲ ಆದ್ದರಿಂದ ಒಂದುವೇಳೆ ಯಾವುದೇ ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ ಸಂಸ್ಥೆಯ ಅಧಿಕಾರಿ, ನೌಕರ ಅಥವಾ ಆತನ/ಆಕೆಯ ಅವಲಂಬಿತ ಕುಟುಂಬ ಸದಸ್ಯ ಈಗಾಗಲೇ ಬಿ.ಪಿ.ಎಲ್ ಪಡಿತರ ಚೀಟಿಯನ್ನು ಹೊಂದಿದ್ದರೆ, ಈ ಸುತ್ತೋಲೆ ಹೊರಡಿಸಿದ ಒಂದು ತಿಂಗಳೊಳಗಾಗಿ ಅದನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ಕೂಡಲೇ ಹಿಂದಿರುಗಿಸಿ ಅಮಾನ್ಯ/ರದ್ದುಪಡಿಸಿಕೊಳ್ಳತಕ್ಕದ್ದು ಎಂದು ಆದೇಶಿಸಿರುತ್ತಾರೆ. ಒಂದು ವೇಳೆ, ಒಂದು ತಿಂಗಳ ನಂತರವೂ ಸದರಿ ಅಧಿಕಾರಿ, ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರು ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ಬಗ್ಗೆ ಮಾಹಿತಿ, ದೂರುಗಳು ಸ್ವೀಕೃತವಾದರೆ, ಅಂತಹ ಅಧಿಕಾರಿ, ನೌಕರರ ವಿರುದ್ಧ ಶಿಸ್ತು ಕ್ರಮ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಹಾಗೂ ಅವರಿಂದ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಸಹ ಕ್ರಮ ಕೈಗೊಳ್ಳಲಾಗುವುದೆಂದು ಸೂಚಿಸಿರುತ್ತಾರೆ.

ಆದ್ದರಿಂದ ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ ಸಂಸ್ಥೆಯ ಅಧಿಕಾರಿ, ನೌಕರ ಅಥವಾ ಆತನ/ಆಕೆಯ ಅವಲಂಬಿತ ಕುಟುಂಬ ಸದಸ್ಯ ಈಗಾಗಲೇ ಬಿ.ಪಿ.ಎಲ್ ಪಡಿತರ ಚೀಟಿಯನ್ನು ಹೊಂದಿದ್ದರೆ ಕೂಡಲೇ ದಿನಾಂಕ:10.07.2020 ರೊಳಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ಹಿಂದಿರುಗಿಸಿ ರದ್ದುಪಡಿಸಿಕೊಸಿಕೊಳ್ಳಲು ಕೋರಿದೆ. ತಪ್ಪಿದ್ದಲ್ಲಿ ಅಂತಹ ಅಧಿಕಾರಿ/ನೌಕರರ ವಿರುದ್ಧ ಕಾನೂನಾತ್ಮಕ ಶಿಸ್ತು ಕ್ರಮ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಹಾಗೂ ಅವರಿಂದ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಕ್ರಮ ಕೈಗೊಳ್ಳಲಾಗುವುದೆಂದು ರಾಜ್ಯ ಸರ್ಕಾರ ಎಚ್ಚರಿಕೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags