ಕನ್ನಡದುನಿಯಾ

1.6M Followers

BIG BREAKING: ಆದಾಯ ತೆರಿಗೆ ರಿಟರ್ನ್‌ ಸಲ್ಲಿಕೆ ಅವಧಿ ವಿಸ್ತರಣೆ

04 Jul 2020.12:23 PM

ದೇಶದಲ್ಲಿ ಕೊರೊನಾ ಮಹಾಮಾರಿ ವಕ್ಕರಿಸಿಕೊಂಡಿರುವ ಪರಿಣಾಮ ಸಾರ್ವಜನಿಕರು ಆರ್ಥಿಕವಾಗಿ ಕಂಗೆಟ್ಟು ಹೋಗಿದ್ದಾರೆ. ಕೊರೊನಾ ನಿಯಂತ್ರಣಕ್ಕಾಗಿ ದೇಶದಾದ್ಯಂತ ಲಾಕ್‌ ಡೌನ್‌ ಜಾರಿಗೊಳಿಸಿದ್ದ ಪರಿಣಾಮ ವಹಿವಾಟಿಲ್ಲದೆ ಜನತೆ ಪರಿತಪಿಸಿದ್ದರು.

ಈಗ ಲಾಕ್‌ ಡೌನ್‌ ಸಡಿಲಿಕೆ ಮಾಡಿ ವ್ಯಾಪಾರ - ವಹಿವಾಟಿಗೆ ಅನುವು ಮಾಡಿಕೊಟ್ಟಿದ್ದರೂ ಆರ್ಥಿಕ ಚಟುವಟಿಕೆ ಮಂದಗತಿಯಲ್ಲಿ ಸಾಗಿದೆ. ಇದರ ಮಧ್ಯೆ ಮುಗಿಲು ಮುಟ್ಟಿರುವ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯಿಂದಾಗಿ ದೈನಂದಿನ ವಸ್ತುಗಳ ಬೆಲೆಯೂ ಏರಿಕೆಯಾಗಿದೆ.

ಇದೀಗ ಆದಾಯ ತೆರಿಗೆ ಇಲಾಖೆ ಈ ಎಲ್ಲ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು, ತೆರಿಗೆದಾರರಿಗೆ ಕೊಂಚ ನೆಮ್ಮದಿಯ ಸುದ್ದಿ ನೀಡಿದೆ. 2019-20 ನೇ ಸಾಲಿನ ಆದಾಯ ತೆರಿಗೆ ರಿಟರ್ನ್‌ ಸಲ್ಲಿಸುವ ಅವಧಿಯನ್ನು ನವೆಂಬರ್‌ 30, 2020 ರ ವರೆಗೆ ವಿಸ್ತರಿಸಲಾಗಿದೆ.

Understanding & keeping in mind the times that we are in, we have further extended deadlines. Now, filing of ITR for FY 2019-20 is extended to 30th Nov, 2020. We do hope this helps you plan things better.#ITDateExtension #FacilitationDuringCovid #WeCare #IndiaFightsCorona pic.twitter.com/ZoGBpok3V7

- Income Tax India (@IncomeTaxIndia)

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Dunia

#Hashtags