Kannada News Now

1.8M Followers

BIG BREAKING : ನಾಳೆಯಿಂದ 'ಪದವಿ ಪೂರ್ವ ಕಾಲೇಜಿನ ಎಲ್ಲಾ ಸಿಬ್ಬಂದಿ'ಗಳು ಕರ್ತವ್ಯಕ್ಕೆ ಹಾಜರಾಗಿ - ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ

12 Aug 2020.7:48 PM

ಬೆಂಗಳೂರು : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2020ರ ಹಿನ್ನಲೆಯಲ್ಲಿ, ಪದವಿ ಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೋವಿಡ್ ಕಾರ್ಯದಲ್ಲಿ ನಿಯೋಜಿತಗೊಂಡಿರುವ ಸಿಬ್ಬಂದಿಗಳು ಹೊರತಾಗಿ, ನಾಳೆಯಿಂದ ಕಾಲೇಜಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ.

ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಎಸ್ ಎಸ್ ಎಲ್ ಸಿ ಫಲಿತಾಂಶ ಈಗಾಗಲೇ ಪ್ರಕಟಗೊಂಡಿದೆ. ಪ್ರಥಮ ಪಿಯು ತರಗತಿಗಳನ್ನು ಪ್ರಾರಂಭಿಸುವುದಕ್ಕಿಂತ ಮುಂಚಿತವಾಗಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಯನ್ನು ಆರಂಭಿಸಬೇಕಿದೆ. ಜೊತೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಸುವ ಸಂಬಂಧ ಕಾಲೇಜುಗಳಲ್ಲಿ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿರುತ್ತದೆ.

ಈ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ರೀತಿಯ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಕೋವಿಡ್ ಕಾರ್ಯದಲ್ಲಿ ನಿಯೋಜಿತಗೊಂಡವರನ್ನು ಹೊರತು ಪಡಿಸಿ, ಉಳಿದೆಲ್ಲಾ ಸಿಬ್ಬಂದಿಗಳು ಎಲ್ಲಾ ಕಾರ್ಯ ನಿರತ ದಿನಗಳಲ್ಲಿ ಕಾಲೇಜುಗಳಿಗೆ ಆಗಮಿಸಬೇಕು ಎಂಬುದಾಗಿ ತಿಳಿಸಿದ್ದಾರೆ.

ಅಲ್ಲದೇ ಮುಂದುವರೆದು ಮೇಲ್ಕಂಡ ಎಲ್ಲಾ ಅಂಶಗಳ ಹಿನ್ನಲೆಯಲ್ಲಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸುವುದನ್ನು ಮಾತ್ರ ಬಿಟ್ಟು, ಉಳಿದೆಲ್ಲಾ ದಾಖಲಾತಿಯನ್ನೊಳಗೊಂಡಂತೆ ಪೂರಕವಾದ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲು ದಿನಾಂಕ 13-08-2020ರಿಂದ ಕಾಲೇಜಿಗೆ ಹಾಜರಾಗಲು ಸೂಚಿಸಿದೆ. ಕಾಲೇಜಿಗೆ ಹಾಜರಾಗುವ ಸಂದರ್ಭದಲ್ಲಿ ಕೋವಿಡ್-19ರ ಹಿನ್ನಲೆಯಲ್ಲಿ ಸಾಮಾಜಿಕ ಅಂತರವನ್ನೊಳಗೊಂಡಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಸೂಚಿಸಿದ್ದಾರೆ.

- ವಸಂತ ಬಿ ಈಶ್ವರಗೆರೆ

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags