Kannada News Now

1.8M Followers

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ : 2020-21 ನೇ ಸಾಲಿನ ಎಲ್ಲಾ ನೇರ ನೇಮಕಾತಿ ಹುದ್ದೆಗಳ ಭರ್ತಿಗೆ ಬ್ರೇಕ್!

13 Sep 2020.05:57 AM

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸರ್ಕಾರದ ವೆಚ್ಚದಲ್ಲಿ ಮಿತವ್ಯಯ ಪಾಲಿಸುವ ಸಂಬಂಧ ರಾಜ್ಯ ಸರ್ಕಾರ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ತಡೆಹಿಡಿಯಲಾಗಿದೆ.

ಈ ಕುರಿತಂತೆ ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿರುವ ಆರ್ಥಿಕ ಇಲಾಖೆಯ ವಿಶೇಷಾಧಿಕಾರಿ ಮುರಳೀಧರ.ಸಿ ಅವರು, ಕೋವಿಡ್-19ನಿಂದಾಗಿ ಉಂಟಾಗಿರುವ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ 2020-21ನೇ ಸಾಲಿನಲ್ಲಿ ಯಾವುದೇ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ತಡೆ ಹಿಡಿಯಲಾಗಿದೆ.

ಅನುಕಂಪದ ಆಧಾರದ ನೇಮಕಾತಿ ಪ್ರಕರಣಗಳಲ್ಲಿ 2020-21ನೇ ಸಾಲಿನಲ್ಲಿ ಅರ್ಜಿಗಳನ್ನು ಸ್ವೀಕರಿಸಲು ಆರ್ಥಿಕ ಇಲಾಖೆಯು ಸಹಮತಿಸಿದ್ದು, ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಮುಂದಿನ ಆರ್ಥಿಕ ವರ್ಷದಲ್ಲಿ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.

ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ ನೀಡಿದೆ.

-ವಸಂತ ಬಿ ಈಶ್ವರಗೆರೆ

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags