Kannada News Now

1.8M Followers

BIGG BREAKING : ಮಂಗಳವಾರದಿಂದ ಬೆಂಗಳೂರಿನಲ್ಲಿ 7 ದಿನ ಸಂಪೂರ್ಣ 'ಲಾಕ್ ಡೌನ್' ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ

11 Jul 2020.8:05 PM

ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ, ಜುಲೈ 14ರ ಮಂಗಳವಾರದಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ, ಲಾಕ್ ಡೌನ್ ಮಾಡಲಾಗಿದೆ. ಈ ಮೂಲಕ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಹೌದು, ಮುಂದಿನ ಜುಲೈ 14 ( ಮಂಗಳವಾರ) ರಾತ್ರಿ 8 ಗಂಟೆಯಿಂದ ಜುಲೈ 23 ರವರೆಗೆ ಲಾಕ್ ಡೌನ್ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಜಿಲ್ಲೆ ಹಾಗೂ ಗ್ರಾಮಾಂತರ ಜಿಲ್ಲೆಯನ್ನು ಕೂಡ 7 ದಿನ ಬಂದ್ ಮಾಡಿ ಸಿಎಂ ಯಡಿಯೂರಪ್ಪ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಇಂದು ನಡೆದ ಸಿಎಂ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತಂತೆ ಟ್ವಿಟ್ ಮಾಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಇತ್ತೀಚಿಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸೋಂಕು ನಿಯಂತ್ರಣದ ದೃಷ್ಟಿಯಿಂದ, ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಬರುವ ಮಂಗಳವಾರ, ಜುಲೈ 14ರ ರಾತ್ರಿ 8:00 ರಿಂದ 7 ದಿನಗಳ ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದಿದ್ದಾರೆ.

Loading tweet...

ಇನ್ನೂ ಮುಂದುವರೆದು, ಈ ಅವಧಿಯಲ್ಲಿ ಅಗತ್ಯ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಲಿದ್ದು, ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗುವುದು. ಈಗಾಗಲೇ ನಿಗದಿಯಾಗಿರುವಂತೆ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ನಡೆಸಲಾಗುವುದು. ಲಾಕ್ ಡೌನ್ ಸಂದರ್ಭದಲ್ಲಿ ಜನರು ಯಾವುದೇ ಆತಂಕಕ್ಕೆ ಒಳಗಾಗದೇ ಸಹಕರಿಸಲು ಸಾರ್ವಜನಿಕರನ್ನು ಕೋರಿ ಕೊಂಡಿದ್ದಾರೆ.

Loading tweet...

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags