Kannada News Now

1.8M Followers

ಕೊರೊನಾ ಸೋಂಕಿತ ಸರ್ಕಾರಿ ನೌಕರರಿಗೆ ವಿಶೇಷ ರಜೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

25 Sep 2020.06:42 AM

ಬೆಂಗಳೂರು : ಸರ್ಕಾರಿ ನೌಕರರಿಗೆ ಕೊರೊನಾ ಸೋಂಕು ದೃಢಪಟ್ಟರೆ ನೌಕರರಿಗೆ ಚಿಕಿತ್ಸೆ ಪಡೆಯಲು ವಿಶೇಷ ಸಾಂದರ್ಭಿಕ ರಜೆ ಸೌಲಭ್ಯ ಅನ್ವಯವಾಗಲಿದೆ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಕೊರೊನಾ ಸೋಂಕಿಗೆ ಒಳಗಾಗುವ ಸರ್ಕಾರಿ ನೌಕರರಿಗೆ ಮನೆಯಲ್ಲಿ ಪ್ರತ್ಯೇಕವಾಗಿರಲು ಅಥವಾ ಚಿಕಿತ್ಸೆ ಪಡೆಯಲು ವಿಶೇಷ ಸಾಂದರ್ಭಿಕ ರಜೆ ಸೌಲಭ್ಯ ಅನ್ವಯವಾಗಲಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಸರ್ಕಾರಿ ನೌಕರರು ವಾಸಿಸುವ ಸ್ಥಳವನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಸಿದಲ್ಲಿ ಅಥವಾ ಸರ್ಕಾರಿ ನೌಕರರ ಕುಟುಂಬದ ಯಾವುದೇ ಸದಸ್ಯರು ಕೊರೊನಾ ಸೋಂಕಿಗೆ ಒಳಗಾಗಿ ನೌಕರರು ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದರೆ ಅವರು ಕ್ವಾರಂಟೈನ್ ನಲ್ಲಿ ಇರಬೇಕಾಗಿತ್ತು ಎಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಉದ್ದೇಶಿಸಲಾಗಿತ್ತು.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags