Kannada News Now

1.8M Followers

BIG BREAKING : ರಾಜ್ಯದ 'ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರು, ಸದಸ್ಯರ ನಾಮನಿರ್ದೇಶನ' : ಹೀಗಿದೆ ಪಟ್ಟಿ

10 Nov 2020.1:06 PM

ಬೆಂಗಳೂರು : 2020-21ನೇ ಸಾಲಿನ ಕರ್ನಾಟಕ ವಿಧಾನಮಂಡಲದ, ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳಿಗೆ, ಅಧ್ಯಕ್ಷರು, ಸದಸ್ಯರುಗಳನ್ನು ನಾಮನಿರ್ದೇಶನ ಮಾಡಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು, ರಾಜ್ಯದಲ್ಲಿ 2020-21ನೇ ಸಾಲಿನ ಕರ್ನಾಟಕ ವಿಧಾನಮಂಡಲದ, ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳಿಗೆ ಸದಸ್ಯರುಗಳನ್ನು ನಾಮ ನಿರ್ದೇಶನ ಮಾಡಿ, ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ವಿಧಾನ ಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಅಧ್ಯಕ್ಷರನ್ನಾಗಿ ರಾಮಲಿಂಗಾರೆಡ್ಡಿಯವರನ್ನು ನಾಮನಿರ್ದೇಶನ ಮಾಡಿದ್ದರೇ, ಸಾರ್ವಜನಿಕ ಉದ್ದಿಮೆಗಳ ಸಮಿತಿಗೆ ಅರವಿಂದ ಲಿಂಬಾವಳಿ ಅವರನ್ನು ನೇಮಕ ಮಾಡಿದ್ದಾರೆ.

ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರನ್ನಾಗಿ ಎಸ್ ಅಂಗಾರ ಅವರನ್ನು ನೇಮಕ ಮಾಡಲಾಗಿದೆ.

ಇನ್ನೂ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ದಿನಕರ್ ಕೇಶವ ಶೆಟ್ಟಿ ಅವರನ್ನು ಅಧ್ಯಕ್ಷರನ್ನಾಗಿ, ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷರನ್ನಾಗಿ ಎಸ್ ಕುಮಾರ್ ಬಂಗಾರಪ್ಪ ಅವರನ್ನು, ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿಗೆ ಸಾರಾ ಮಹೇಶ್ ಅವರನ್ನು ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆಯನ್ನಾಗಿ ಕೆ.ಪೂರ್ಣಿಮಾ ಅವರನ್ನು ನಾಮ ನಿರ್ದೇಶನ ಮಾಡಿದ್ದರೇ, ಗ್ರಂಥಾಲಯ ಸಮಿತಿಗೆ ವಿಧಾನ ಪರಿಷತ್ತಿನ ಸಭಾಪತಿಯವರನ್ನು ಅಧ್ಯಕ್ಷರನ್ನಾಗಿ, ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿಗೆ ಜಿ.ಸೋಮಶೇಖರ ರೆಡ್ಡಿ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

ಇನ್ನೂ ವಿಧಾನಸಭೆಯ ಸಮಿತಿಗಳಾದಂತ ಅಂದಾಜುಗಳ ಸಮಿತಿಗೆ ಅಭಯ್ ಪಾಟೀಲ್, ಸರ್ಕಾರಿ ಭರವಸೆಗಳ ಸಮಿತಿಗೆ ಕೆ.ರಘುಪತಿ ಭಟ್, ಹಕ್ಕು ಬಾಧ್ಯತೆಗಳ ಸಮಿತಿಗೆ ಬಸನಗೌಡ ಆರ್ ಪಾಟೀಲ್ ಯತ್ನಾಳ್, ಖಾಸಗಿ ಸದಸ್ಯರುಗಳ ವಿಧೇಯಕ ಹಾಗೂ ನಿರ್ಣಯಗಳ ಸಮಿತಿ, ಅರ್ಜಿಗಳ ಸಮಿತಿ ಮತ್ತು ವಸತಿ ಸೌಕರ್ಯ ಸಮಿತಿಗೆ ಆನಂದ್ ಆಲಿಯಾಸ್ ವಿಶ್ವನಾಥ್ ಚಂದ್ರಶೇಖರ ಮಾಮನಿ ಅವರನ್ನು ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.

ಹೀಗಿದೆ.. ನಾಮ ನಿರ್ದೇಶನಗೊಂಡ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರು, ಸದಸ್ಯರುಗಳ ಪಟ್ಟಿ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags