ವಿಜಯವಾಣಿ

505k Followers

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ.; ಸ್ಥಾಪನೆಗೆ ಆದೇಶ ಹೊರಡಿಸಿದ ಸರ್ಕಾರ

23 Nov 2020.5:26 PM

ಬೆಂಗಳೂರು: ರಾಜ್ಯದಲ್ಲಿ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಸಂಬಂಧ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದ್ದು, ನಿಗಮಕ್ಕೆ 500 ಕೋಟಿ ರೂಪಾಯಿ ಅನುದಾನ ಒದಗಿಸುವುದಾಗಿಯೂ ಆದೇಶದಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಮತ್ತು ಹೆಚ್ಚಿನ ಸಂಖ್ಯೆಯಲ್ಲಿರುವ ವೀರಶೈವ ಲಿಂಗಾಯತ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನು ಕಂಪನಿ ಕಾಯ್ದೆ 2013ರ ಸೆಕ್ಷನ್​-7ರನ್ವಯ ಸ್ಥಾಪಿಸುವಂತೆ ಸರ್ಕಾರ ಆದೇಶಿಸಿದೆ.

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಪ್ರಕ್ರಿಯೆ ಆರಂಭದಿಂದ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನು ಭರ್ತಿ ಮಾಡುವವರೆಗಿನ ಜವಾಬ್ದಾರಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಿಗೆ ಸರ್ಕಾರ ವಹಿಸಿದೆ.

ಮಾತ್ರವಲ್ಲ ನಿಗಮ ಸ್ಥಾಪನೆಗೆ ತಗಲುವ ಪ್ರಾರಂಭಿಕ ವೆಚ್ಚವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದಲೇ ಭರಿಸಿ, ಬಳಿಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದಿಂದ ಭರಿಸಿಕೊಳ್ಳುವಂತೆ ಆಯುಕ್ತರಿಗೆ ಸರ್ಕಾರ ಸೂಚಿಸಿದೆ.

ಈ ಗುಂಪೇನಾದರೂ ರಸ್ತೆಯಲ್ಲಿ ಸಿಕ್ಕಿದರೆ ಮುಗಿಯಿತು ಕಥೆ..!

ಬಿಕಿನಿಯಲ್ಲಿ ಮಗಳು, ಫೋಟೋ ಕ್ಲಿಕ್ಕಿಸಿದ ಅಪ್ಪ; ವಿಟಮಿನ್-ಡಿಗಾಗಿ ಮೈಯೊಡ್ಡಿದ ನಟಿ…

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Vijayvani

#Hashtags