Oneindia

1.1M Followers

ಕರ್ನಾಟಕದಲ್ಲಿ ಒಂದೇ ದಿನ 522 ಮಂದಿಗೆ ಕೊರೊನಾ ಪಾಸಿಟಿವ್

01 Feb 2021.2:48 PM

ಬೆಂಗಳೂರು, ಜನವರಿ.31: ಕೊರೊನಾವೈರಸ್ ಸೋಂಕಿನಿಂದ ತತ್ತರಿಸಿದ ಕರ್ನಾಟಕದಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿದೆ. ರಾಜ್ಯದ 19 ಜಿಲ್ಲೆಗಳಲ್ಲಿ ಒಂದಂಕಿಯ ಕೊವಿಡ್-19 ಪ್ರಕರಣ ಪತ್ತೆಯಾಗಿರುವ ಬಗ್ಗೆ ತಿಳಿದು ಬಂದಿದೆ.

ಕಳೆದ 24 ಗಂಟೆಗಳಲ್ಲಿ 522 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 939387ಕ್ಕೆ ಏರಿಕೆಯಾಗಿದೆ. ಕಳೆದೊಂದು ದಿನದಲ್ಲಿ ಕೊರೊನಾವೈರಸ್ ನಿಂದ ಇಬ್ಬರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 12217ಕ್ಕೆ ಏರಿಕೆ ಆಗಿದೆ.

ಕೊರೊನಾ ಲಸಿಕೆ ಪಡೆದ 10 ಮಂದಿ ಸಾವು,ವ್ಯತಿರಿಕ್ತ ಪರಿಣಾಮಗಳ ಬಗ್ಗೆ ಅಧ್ಯಯನ

Union Budget : ನಮ್ಮ ರಾಜ್ಯದಲ್ಲಿ ಸಾಕಷ್ಟು ಬದಲಾವಣೆ ಆಗತ್ತೆ | R Ashok | Oneindia Kannada

ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ಒಟ್ಟು 939387 ಸೋಂಕಿತ ಪ್ರಕರಣಗಳ ಪೈಕಿ 921122 ಸೋಂಕಿತರು ಗುಣಮುಖರಾಗಿದ್ದಾರೆ.

ಒಂದು ದಿನದಲ್ಲೇ 465 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ ರಾಜ್ಯದಲ್ಲಿ 6029 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

ರಾಜ್ಯದ 19 ಜಿಲ್ಲೆಗಳಲ್ಲಿ ಒಂದಂಕಿ ಕೊವಿಡ್-19 ಪ್ರಕರಣ:

ರಾಜ್ಯದಲ್ಲಿ ಒಟ್ಟು 522 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಅಷ್ಟಾಗಿಯೂ ರಾಜ್ಯ 19 ಜಿಲ್ಲೆಗಳಲ್ಲಿ ಹೊಸ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದಂಕಿಗಿಂತ ಹೆಚ್ಚಾಗಿಲ್ಲ. ಈ ಪೈಕಿ ಬಾಗಲಕೋಟೆ 1, ಬಳ್ಳಾರಿ 5, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 10, ಬೆಂಗಳೂರು 242, ಬೀದರ್ 3, ಚಾಮರಾಜನಗರ 2, ಚಿಕ್ಕಬಳ್ಳಾಪುರ 17, ಚಿಕ್ಕಮಗಳೂರು 10, ಚಿತ್ರದುರ್ಗ 14, ದಕ್ಷಿಣ ಕನ್ನಡ 33, ದಾವಣಗೆರೆ 8, ಧಾರವಾಡ 7, ಗದಗ 5, ಹಾಸನ 13, ಹಾವೇರಿ 0, ಕಲಬುರಗಿ 18, ಕೊಡಗು 7, ಕೋಲಾರ 4, ಕೊಪ್ಪಳ 0, ಮಂಡ್ಯ 3, ಮೈಸೂರು 53, ರಾಯಚೂರು 2, ರಾಮನಗರ 1, ಶಿವಮೊಗ್ಗ 1, ತುಮಕೂರು 23, ಉಡುಪಿ 9, ಉತ್ತರ ಕನ್ನಡ 17, ವಿಜಯಪುರ 4, ಯಾದಗಿರಿ 1 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

source: oneindia.com

Disclaimer

Disclaimer

This story is auto-aggregated by a computer program and has not been created or edited by Dailyhunt Publisher: OneIndia Kannada

#Hashtags