Kannada News Now

1.8M Followers

BIGG BREAKING : 'ಪೋಷಕರ ಗೊಂದಲ'ಕ್ಕೆ ತೆರೆ ಎಳೆದ ಸಿಎಂ ಯಡಿಯೂರಪ್ಪ :ರಾಜ್ಯದಲ್ಲಿ ಜ.1ರಿಂದಲೇ 'ಶಾಲಾ-ಕಾಲೇಜು' ಆರಂಭ

28 Dec 2020.10:56 AM

ಬೆಂಗಳೂರು : ನಿಗದಿಯಂತೆ ರಾಜ್ಯದಲ್ಲಿ ಜನವರಿ 1ರಿಂದಲೇ ಶಾಲಾ-ಕಾಲೇಜು ಆರಂಭಿಸಲಾಗುತ್ತಿದೆ. ಈ ಬಗ್ಗೆ ಯಾವುದೇ ಬದಲಾವಣೆ ಇಲ್ಲ. ಯಾವುದೇ ಗೊಂದಲಕ್ಕೂ ಪೋಷಕರು ಒಳಗಾಗಬಾರದು. ಈಗಾಗಲೇ ನಿರ್ಧರಿಸಿದಂತೆ ಜನವರಿ 1ರಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಿಸಲಾಗುತ್ತದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜನವರಿ 1ರಿಂದಲೇ ನಿಗದಿಯಂತೆ ಶಾಲಾ-ಕಾಲೇಜು ಆರಂಭಿಸಲಾಗುತ್ತಿದೆ. ಶಾಲೆ ಆರಂಭಿಸುವ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಶಾಲಾ ಆರಂಭದ ಬಗ್ಗೆ ಈಗಾಗಲೇ ನಿರ್ಧಾರ ಮಾಡಲಾಗಿದೆ. ಅದರಂತೆಯೇ ಜನವರಿ 1ರಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಿಸಲಾಗುತ್ತದೆ.

ಆದ್ರೂ ಮತ್ತೊಮ್ಮೆ ಚರ್ಚೆ ಮಾಡಲಾಗುತ್ತದೆ ಎಂದು ಸ್ಪಷ್ಟ ಪಡಿಸುವ ಮೂಲಕ, ಪೋಷಕರ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

  ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್‌ಗೆ ಸೇರಿಕೊಳ್ಳಿ https://bit.ly/3aR8rtL



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags