Suvarna News

1.4M Followers

ಶಿವಮೊಗ್ಗ ದೇಶದ ಕ್ರೀಡಾ ಹಬ್‌ ಆಗಲಿದೆ: ಕಿರಣ್‌ ರಿಜಿಜು ವಿಶ್ವಾಸ

21 Feb 2021.3:20 PM

ಶಿವಮೊಗ್ಗ(ಫೆ.21): ಮುಂಬರುವ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತ ಹೆಚ್ಚಿನ ಪದಕಗಳನ್ನು ಗೆಲ್ಲಲಿದೆ, ಕ್ರೀಡಾಪಟುಗಳಿಗೆ ಅಗತ್ಯವಾಗಿ ಬೇಕಾಗುವಂತಹ ಮೂಲಭೂತ ಸೌಕರ್ಯಗಳನ್ನು ಸರ್ಕಾರ ಒದಗಿಸಲಿದೆ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್‌ ರಿಜಿಜು ಹೇಳಿದ್ದಾರೆ.

ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು 2028ರಲ್ಲಿ ಲಾಸ್ ಏಂಜಲೀಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ ಕ್ರೀಡಾಕೂಟದ ವೇಳೆಗೆ ಭಾರತ ಪದಕ ಪಟ್ಟಿಯಲ್ಲಿ ಟಾಪ್‌ 10 ಒಳಗೆ ಇರಬೇಕು ಎನ್ನುವುದು ನನ್ನ ಗುರಿಯಾಗಿದೆ. ದೇಶದಲ್ಲಿ ಶೇ.30ಕ್ಕೂ ಅಧಿಕ ಮಂದಿ ಯುವ ಜನತೆ ಇದೆ. ಆದರೆ ಒಲಿಂಪಿಕ್ಸ್‌ನಲ್ಲಿ ಮಾತ್ರ ನಮಗೆ ನಿರೀಕ್ಷಿತ ಪದಕಗಳು ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮುಂಬರುವ ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತ ಹೆಚ್ಚಿನ ಪದಕ ಗೆಲ್ಲುವ ವಿಶ್ವಾಸವಿದೆ. ಅದೇ ರೀತಿ ಒಲಿಂಪಿಕ್ಸ್‌ನಲ್ಲಿ ಕರ್ನಾಟಕದವರು ಪದಕಗಳನ್ನು ಗೆಲ್ಲಬೇಕು, ಅದಕ್ಕಾಗಿಯೇ ಕರ್ನಾಟಕದಲ್ಲಿ ಹೆಚ್ಚಿನ ವಿಶ್ವದರ್ಜೆಯ ಕ್ರೀಡಾಂಗಣಗಳನ್ನು ನಿರ್ಮಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಶಿವಮೊಗ್ಗ ದೇಶದ ಕ್ರೀಡಾ ಹಬ್‌ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ರಿಜಿಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕ್ರೀಡಾ ಕ್ಷೇತ್ರದಲ್ಲಿ ಸಮಗ್ರ ಬದಲಾವಣೆಗೆ ಒತ್ತು : ಕೇಂದ್ರ ಕ್ರೀಡಾ ಸಚಿವ ರಿಜಿಜು
ನಗರದ ಹೃದಯ ಭಾಗದಲ್ಲಿರುವ ಸಹ್ಯಾದ್ರಿ ಕಾಲೇಜಿನಲ್ಲಿ ಸುಮಾರು ನಾಲ್ಕೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಆಗಲಿರುವ ಒಳಾಂಗಣ ಕ್ರೀಡಾಂಗಣಕ್ಕೆ ಕೇಂದ್ರ ಸಚಿವ ಕಿರಣ್‌ ರಿಜಿಜು ಶಂಕುಸ್ಥಾಪನೆ ನೆರವೇರಿಸಿದರು. ರಿಜಿಜು ಜತೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ರಾಜ್ಯ ಕ್ರೀಡಾ ಸಚಿವ ಸಚಿವ ನಾರಾಯಣ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ಸಾಥ್ ನೀಡಿದರು.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Asianet News Kannada

#Hashtags