Kannada News Now

1.8M Followers

ಹವಾಮಾನ ಇಲಾಖೆಯಿಂದ ವಿಶೇಷ ಸೂಚನೆ : ಇಂದಿನಿಂದ 3 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

29 Mar 2021.07:50 AM

ಬೆಂಗಳೂರು: ಇಂದಿನಿಂದ ಮಾರ್ಚ್ 31 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

`CD ಪ್ರಕರಣ' : ಇಂದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ `ಪೊಲೀಸ್ ನೋಟಿಸ್'

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಆ ಪರಿಣಾಮ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಮಾ.29ರಂದು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.

ಪಾಟೀಲ ಮಾಹಿತಿ ನೀಡಿದ್ದಾರೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags