Kannada News Now

1.8M Followers

1-9ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ಕುರಿತಂತೆ ʼಶಿಕ್ಷಣ ಸಚಿವʼರಿಂದ ಮುಖ್ಯ ಮಾಹಿತಿ..!

28 Mar 2021.8:47 PM

ಬೆಂಗಳೂರು: ಒಂದರಿಂದ ಒಂಬತ್ತನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಾತನಾಡಿದ್ದು, ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಿಸುವ ಯಾವುದೇ ನಿರ್ಧಾರವನ್ನ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, 'ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಸಿದ್ಧತೆ ನಡೆಸುತ್ತಿದ್ದು, ಸದ್ಯ ಪರೀಕ್ಷೆ ಇಲ್ಲದೆಯೇ ಪಾಸ್ ಮಾಡುವ ಯಾವುದೇ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ನಾವು ಆ ಬಗ್ಗೆ ತೀರ್ಮಾನಿಸಿಲ್ಲ. ಅದ್ರಂತೆ, ಈ ಕುರಿತು ಆರೋಗ್ಯ ಸಚಿವರೊಂದಿಗೆ ಮಾತುಕತೆ ನಡೆಸಿ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರಗಳನ್ನ ತೆಗೆದುಕೊಳ್ಳುತ್ತೇವೆ' ಎಂದರು.

ನರೇಂದ್ರ ಮೋದಿಯವರು ತಮಿಳುನಾಡು ಮುಖ್ಯಮಂತ್ರಿಯನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ಅಂದ್ಹಾಗೆ, ಕೆಲವು ಸುದ್ದಿ ಮಾಧ್ಯಮ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಎಸ್.

ಸುಧಾಕರ್ ಅವ್ರು ವಿದ್ಯಾರ್ಥಿಗಳನ್ನ ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಲು ತೀರ್ಮಾನಿಸಿದ್ದಾರೆ ಎಂದು ವರದಿ ಮಾಡಿದ್ದವು.

ಪ್ರಧಾನಿ ಮೋದಿ ಇಂದಿನ `ಮನ್ ಕೀ ಬಾತ್' ರೇಡಿಯೋ ಕಾರ್ಯಕ್ರಮದ ಮುಖ್ಯಾಂಶಗಳು



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags