News18 ಕನ್ನಡ

399k Followers

Gold Price Today: ಚಿನ್ನದ ಬೆಲೆ ಕೊಂಚ ಕುಸಿತ; ಬರೋಬ್ಬರಿ 1,800 ರೂ. ಇಳಿಕೆ ಕಂಡ ಬೆಳ್ಳಿ ದರ

30 Mar 2021.10:28 AM

Gold Rate Today | ಮೂರ್ನಾಲ್ಕು ದಿನಗಳಿಂದ ಹೆಚ್ಚಾಗಿದ್ದ ಚಿನ್ನದ ಬೆಲೆ ಮತ್ತೆ ಕಡಿಮೆಯಾಗಿದೆ. ಇನ್ನೇನು ಮದುವೆಯ ಸೀಸನ್ ಶುರುವಾಗುವ ಸಮಯ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 2 ದಿನಗಳ ಹಿಂದೆ 45,830 ರೂ. ಇದ್ದುದು ಇಂದು 45,110 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 42,010 ರೂ. ಇದ್ದುದು ಇಂದು 41,350 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದ್ದು, ನಿನ್ನೆ 65,700 ರೂ. ಇದ್ದ ಬೆಳ್ಳಿ ಬೆಲೆ ಇಂದು 63,900ಕ್ಕೆ ಕುಸಿದಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಕೊಂಚ ಕಡಿಮೆಯಾಗಿದ್ದು, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 2 ದಿನಗಳ ಹಿಂದೆ 43,910 ರೂ. ಇದ್ದುದು 42,970 ರೂ.ಗೆ ಕುಸಿದಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 44,920 ರೂ. ಇದ್ದುದು ಇಂದು 43,970 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 45,110 ರೂ. ಆಗಿದೆ. ಹಾಗೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 41,350 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 48,000 ರೂ. ದಾಟಿದೆ.

ಭಾರತದಲ್ಲಿ ಬೆಳ್ಳಿ ಬೆಲೆ ಮತ್ತೆ ಇಳಿಕೆಯಾಗಿದ್ದು, ನಿನ್ನೆ 65,700 ರೂ. ಇದ್ದ ಬೆಳ್ಳಿ ಬೆಲೆ ಇಂದು 1 ಕೆಜಿಗೆ 63,900 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 65,500 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 69,000 ರೂ. ದಾಟಿದೆ.

ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ.
Disclaimer

Disclaimer

This story is auto-aggregated by a computer program and has not been created or edited by Dailyhunt Publisher: News18 Kannada

#Hashtags