ಕನ್ನಡದುನಿಯಾ

1.6M Followers

BIG NEWS: ಏರುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ - ಒಂದೇ ದಿನ 271 ಜನ ಬಲಿ

30 Mar 2021.10:02 AM

ನವದೆಹಲಿ: ದೇಶಾದ್ಯಂತ ಕೊರೊನಾ ಆರ್ಭಟ ಹೆಚ್ಚುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 56,211 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,20,95,855ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 271 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,62,114 ಕ್ಕೆ ಏರಿಕೆಯಾಗಿದೆ.

ಕೊರೋನಾ ಎರಡನೇ ಅಲೆ ಆತಂಕ: ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಿದ ರಾಮನಗರ ಡಿಸಿ

ಇನ್ನು ದೇಶದಲ್ಲಿ 5,40,720 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,13,93,021 ಸೋಂಕಿತರು ಗುಣಮುಖರಾಗಿದ್ದಾರೆ.

ಕಳೆದ 24 ಗಂಟೆಯಲ್ಲಿ 37,028 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ ದೇಶದಲ್ಲಿ 7,85,864 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 24,26,50,025 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 6,05,30,435 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Dunia

#Hashtags