Kannada News Now

1.8M Followers

BIGGNEWS: ಇನ್ಮುಂದೆ ರೈಲುಗಳಲ್ಲಿ ರಾತ್ರಿ ಪ್ರಯಾಣದ ವೇಳೆ ಮೊಬೈಲ್, ಲ್ಯಾಪ್​ಟಾಪ್​ ಚಾರ್ಜ್​ ಮಾಡೋದು 'ಬ್ಯಾನ್'‌

31 Mar 2021.05:03 AM

ನವದೆಹಲಿ: ಅಗ್ನಿ ಅಪಘಾತಗಳನ್ನು ತಡೆಗಟ್ಟಲು ರಾತ್ರಿಯಲ್ಲಿ ಚಾರ್ಜಿಂಗ್ ಪಾಯಿಂಟ್‌ಗಳ ಬಳಕೆಯನ್ನು ಭಾರತೀಯ ರೈಲ್ವೆ ನಿರ್ಬಂಧಿಸಿವುದಕ್ಕೆ ಮುಂದಾಗಿದ್ದು, ಇದರಿಂದ ರೈಲ್ವೆ ಪ್ರಯಾಣಿಕರಿಗೆ ಈಗ ರಾತ್ರಿ ಸಮಯದಲ್ಲಿ ರೈಲು ಬೋಗಿಗಳಲ್ಲಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ಬಳಸಲು ಸಾಧ್ಯವಾಗುವುದಿಲ್ಲ. ಮಾರ್ಚ್ 13 ರಂದು ದೆಹಲಿ-ಡೆಹ್ರಾಡೂನ್ ಶತಾಬ್ದಿ ಎಕ್ಸ್‌ಪ್ರೆಸ್ ಬೆಂಕಿ ಕಾಣಿಸಿಕೊಂಡ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ರೈಲುಗಳಲ್ಲಿ ಅಗ್ನಿ ಅವಘಢಗಳು ಸಂಭವಿಸದಂತೆ ತಪ್ಪಿಸಲು, ರೈಲ್ವೆ ಪ್ರಯಾಣಿಕರು ರಾತ್ರಿ ಸಮಯದ ವೇಳೆ ಚಾರ್ಜಿಂಗ್ ಪಾಯಿಂಟ್ ಬಳಕೆಯನ್ನು ನಿರ್ಬಂಧಿಸಲು ಮಾತ್ರವಲ್ಲದೆ ಧೂಮಪಾನಿಗಳ ಮೇಲೆ ನಿಗವಿಡಲು ನಿರ್ಧರಿಸಲಾಗಿದೆ. ಮೊಬೈಲ್ ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಚಾರ್ಜ್ ಮಾಡಲು ಬಳಸುವ ಬೋರ್ಡ್‌ಗಳನ್ನು ರಾತ್ರಿ 11 ರಿಂದ ಬೆಳಿಗ್ಗೆ 5 ರವರೆಗೆ ಸ್ವಿಚ್ ಆಫ್ ಮಾಡಲಾಗುತ್ತದೆ.

ಪ್ರಸ್ತುತ, ರೈಲುಗಳ ಒಳಗೆ ಧೂಮಪಾನಿಗಳಿಗೆ ರೈಲ್ವೆ ಕಾಯ್ದೆಯ ಸೆಕ್ಷನ್ 167 ರ ಅಡಿಯಲ್ಲಿ ಶಿಕ್ಷೆ ವಿಧಿಸಲಾಗುತ್ತದೆ. ಧೂಮಪಾನ ಮಾಡುವ ಪ್ರಯಾಣಿಕರಿಗೆ 100 ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಇದಲ್ಲದೇ ರೈಲುಗಳಲ್ಲಿ ಸ್ಪೋಟಕ ವಸ್ತುಗಳನ್ನು ಸಾಗಿಸುವುದು ರೈಲ್ವೆ ಕಾಯ್ದೆಯ ಸೆಕ್ಷನ್ 164 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಮತ್ತು ಅಪರಾಧಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1,000 ರೂ ಅಥವಾ ಎರಡನ್ನೂ ದಂಡ ವಿಧಿಸಬಹುದು ಮತ್ತು ಸೆಕ್ಷನ್ 165 ರ ಅಡಿಯಲ್ಲಿ 500 ರೂ.ಗಳ ದಂಡವನ್ನು ಅನ್ವಯಿಸಬಹುದಾಗಿದೆ. ಸುರಕ್ಷತೆಯು ರೈಲ್ವೆ ಕಾರ್ಯಾಚರಣೆಗಳ ಕೇಂದ್ರಬಿಂದುವಾಗಿದೆ ರೈಲುಗಳ ಚಾಲನೆಯಲ್ಲಿನ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೂಲಂಕಷವಾಗಿ ಪರಿಶೀಲಿಸುವುದು ಮತ್ತು ಮರುಪರಿಶೀಲಿಸುವುದು ಸಂಬಂಧಪಟ್ಟ ಎಲ್ಲರೂ ಮಾಡಬ ಬೇಕಾಗಿದೆ 'ಎಂದು ಸಚಿವರು ಸುರಕ್ಷತಾ ಕ್ರಮಗಳು ಕುರಿತು ಪರಿಶೀಲನಾ ಸಭೆಯಲ್ಲಿ ಹೇಳಿದರು ಎಂದು ರೈಲ್ವೆ ಸಚಿವಾಲಯ ಬಿಡುಗಡೆ ಮಾಡಿದೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags