Kannada News Now

1.8M Followers

BIG BREAKING : 'ಉದ್ಯೋಗಾಕಾಂಕ್ಷಿ'ಗಳಿಗೆ ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ 'ಆಡಳಿತ ಇಲಾಖೆ'ಗಳ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್

30 Mar 2021.7:47 PM

ಬೆಂಗಳೂರು : ದಿನಾಂಕ 06-07-2020ರಂದು ರಾಜ್ಯದಲ್ಲಿ ಕೋವಿಡ್-19ನಿಂದ ಉಂಟಾದ ಪರಿಸ್ಥಿತಿಯನ್ನು ನಿಭಾಯಿಸಿ ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಸಂಪನ್ಮೂಲವನ್ನು ಕ್ರೂಢೀಕರಿಸಲು 2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಎಲ್ಲಾ ನೇರ ನೆಮಕಾತಿ ಹುದ್ದೆಗಳ ಭರ್ತಿಗೆ ತಡೆ ಹಿಡಿಯಲಾಗಿತ್ತು. ಇದೀಗ ಆಡಳಿತ ಇಲಾಖೆಗಳ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ(ಆ&ಸಂ) ಡಾ.ಏಕ್ ರೂಪ್ ಕೌರ್ ಸುತ್ತೋಲೆ ಹೊರಡಿಸಿದ್ದು, ಸುತ್ತೋಲೆ ಸಂಖ್ಯೆ : ಆಇ 03 ಬಿಇಎಂ 2020, ದಿನಾಂಕ 06-07-2020ರಲ್ಲಿ ರಾಜ್ಯದಲ್ಲಿ ಕೋವಿಡ್-19ನಿಂದ ಉಂಟಾದ ಪರಿಸ್ಥಿತಿಯನ್ನು ನಿಭಾಯಿಸಿ, ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಸಂಪನ್ಮೂಲವನ್ನು ಕ್ರೋಢೀಕರಿಸಲು 2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ತಡೆ ಹಿಡಿಯಲಾಗಿತ್ತು.

ಆಡಳಿತ ಇಲಾಖೆಗಳು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂಬಂಧ ದಿನಾಂಕ 06-07-2020ರ ಸುತ್ತೋಲೆಯಿಂದ ವಿನಾಯಿತಿಯನ್ನು ಕೋರಿ ಪ್ರಸ್ತಾವನೆಗಳನ್ನು ಸಲ್ಲಿಸಿದ್ದವು. ಅಂತಹ ಪ್ರಸ್ತಾವನೆಗಳ ಪೈಕಿ ಕೆಲವು ಪ್ರಸ್ತಾವನೆಗಳಿಗೆ ಮುಂದಿನ ಆರ್ಥಿಕ ವರ್ಷ ಅಂದರೆ 2021-22ನೇ ಸಾಲಿನಲ್ಲಿ ದಿನಾಂಕ 01-04-2021ರ ನಂತ್ರ ನೇಮಕಾತಿ ಆದೇಶ ನೀಡಲು ಸಹಮತಿ ನೀಡಲಾಗಿದೆ ಎಂದು ತಿಳಿಸಲಾಗಿತ್ತು.

ಈ ರೀತಿ ತಿಳಿಸಲಾದ ಪ್ರಸ್ತಾವನೆಗಳನ್ನು ದಿನಾಂಕ 01-04-2021ರ ನಂತ್ರ ಆರ್ಥಿಕ ಇಲಾಖೆಯ ಮರುಪರಿಶೀಲನೆಗೆ ಸಲ್ಲಿಸುವಂತೆ ಆಡಳಿತ ಇಲಾಖೆಗಳಿಗೆ ತಿಳಿಸಲಾಗಿದೆ. ಅಂದರೆ 2021-22ನೇ ಸಾಲಿನಲ್ಲಿ ಆರ್ಥಿಕ ಇಲಾಖೆಯ ಸಹಮತಿ ಪಡೆದೇ ನೇಮಕಾತಿ ಆದೇಶ ನೀಡಲು ಆಡಳಿತ ಇಲಾಖೆಗಳಿಗೆ ತಿಳಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ. ಈ ಮೂಲಕ ಆಡಳಿತ ಇಲಾಖೆಗಳ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ವರದಿ : ವಸಂತ ಬಿ ಈಶ್ವರಗೆರೆ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags