ಕನ್ನಡದುನಿಯಾ

1.6M Followers

SHOCKING: ರಾಜ್ಯದಲ್ಲಿಂದು ಕೊರೊನಾ ಸ್ಪೋಟ - ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು.? ಇಲ್ಲಿದೆ ಪಟ್ಟಿ

30 Mar 2021.8:18 PM

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 2975 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,92,779 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಒಂದೇ ದಿನ 21 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 12,541 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 1262 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 9,54,678 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ 25,541 ಸಕ್ರಿಯ ಪ್ರಕರಣಗಳು ಇದ್ದು, 240 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಒಂದೇ ದಿನ 1984 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇಂದು 11 ಜನ ಸೋಂಕಿತರು ಮೃತಪಟ್ಟಿದ್ದು, 17,582 ಸಕ್ರಿಯ ಪ್ರಕರಣಗಳು ಇವೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Dunia

#Hashtags