myKhel ಕನ್ನಡ

98k Followers

ರೋಹಿತ್, ಕೊಹ್ಲಿಯನ್ನು ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ರಿಷಭ್ ಪಂತ್!

30 Mar 2021.7:13 PM

ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧ ನಡೆದ ಸರಣಿಯಿಂದಲೂ ಉತ್ತಮ ಪ್ರದರ್ಶನವನ್ನು ನೀಡುತ್ತಾ ಬಂದಿರುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಭ್ ಪಂತ್ ಸದ್ಯ ಟೀಮ್ ಇಂಡಿಯಾದ ಪ್ರಮುಖ ಆಟಗಾರರಲ್ಲಿ ಒಬ್ಬರಾಗಿ ಬಿಟ್ಟಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿಯೂ ಸಹ ರಿಷಭ್ ಪಂತ್ ಉತ್ತಮ ಆಟವನ್ನಾಡಿದರು. ಈ ಮೂಲಕ ಪಂತ್ 2021ರಲ್ಲಿ ಅತಿ ಹೆಚ್ಚು ಅಂತಾರಾಷ್ಟ್ರೀಯ ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ 40 ಎಸೆತಗಳಲ್ಲಿ 77 ರನ್ ಬಾರಿಸಿದ ಪಂತ್ ಮೂರನೇ ಏಕದಿನ ಪಂದ್ಯದಲ್ಲಿ 62 ಎಸೆತಗಳಿಗೆ 78 ರನ್ ಬಾರಿಸಿ ಮಿಂಚಿದ್ದರು. ಹಾಗೆಯೇ ಇಂಗ್ಲೆಂಡ್ ವಿರುದ್ಧದ ಮೊದಲನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 88 ಎಸೆತಗಳಿಗೆ 91 ರನ್‌ಗಳನ್ನು ಪಂತ್ ಬಾರಿಸಿದ್ದರು.

ಎರಡನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿಯೂ ಉತ್ತಮ ಪ್ರದರ್ಶನ ತೋರಿದ ಪಂತ್ 77 ಎಸೆತಗಳಿಗೆ 58 ರನ್ ಬಾರಿಸಿ ಮಿಂಚಿದ್ದರು. ಹಾಗೂ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ 118 ಎಸೆತಗಳಿಗೆ 101 ರನ್ ಬಾರಿಸಿದ ಪಂತ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

ಈ ರೀತಿ ಉತ್ತಮ ಪ್ರದರ್ಶನ ನೀಡುವುದರ ಮೂಲಕ ಪಂತ್ 2021ರಲ್ಲಿ 772 ಅಂತಾರಾಷ್ಟ್ರೀಯ ರನ್‌ಗಳನ್ನು ಗಳಿಸಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ತಂಡದ ಜೋ ರೂಟ್ 794 ರನ್ ಗಳಿಸಿ ಅಗ್ರಸ್ಥಾನದಲ್ಲಿದ್ದರೆ 655 ರನ್ ಬಾರಿಸಿದ ರೋಹಿತ್ ಶರ್ಮಾ ಮೂರನೇ ಸ್ಥಾನ ಮತ್ತು 532 ರನ್ ಗಳಿಸಿದ ಕೊಹ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Mykhel Kannada

#Hashtags