TV9 ಕನ್ನಡ

371k Followers

HD Deve Gowda: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಹಾಗೂ ಚನ್ನಮ್ಮಗೆ ಕೊರೊನಾ ಸೋಂಕು

31 Mar 2021.12:25 PM

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚನ್ನಮ್ಮರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಾಸಿಟಿವ್ ರಿಪೋರ್ಟ್ ಬಳಿಕ ಇಬ್ಬರನ್ನೂ ಕೊರೊನಾ ಚಿಕಿತ್ಸೆಗೆ ಒಳಪಡಿಸಲಾಗಿದೆ.

ಈ ಹಿಂದೆ ಹೆಚ್​ಡಿ ರೇವಣ್ಣರಿಗೂ ಕೊರೊನಾ ಪಾಸಿಟಿವ್ ಆಗಿತ್ತು. ಸದ್ಯ ಸೋಂಕಿನಿಂದ ರೇವಣ್ಣ ಚೇತರಿಸಿಕೊಂಡಿದ್ದಾರೆ. ಆದ್ರೆ ಈಗ 87 ವರ್ಷದ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚನ್ನಮ್ಮರಿಗೂ ಕೊರೊನಾ ಸೋಂಕು ತಗುಲಿದೆ. ಕಳೆದ ಒಂದು ವಾರದಿಂದ ಗೌಡರಿಗೆ ಕೆಮ್ಮು ಕಾಣಿಸಿಕೊಂಡಿತ್ತು. ಕೆಮ್ಮು ಹೆಚ್ಚಾದ ಹಿನ್ನೆಲೆಯಲ್ಲಿ ಆರ್​ಟಿಪಿಸಿಆರ್ ಟೆಸ್ಟ್ ಮಾಡಿಸಲಾಗಿತ್ತು. ಈ ಟೆಸ್ಟ್​ನಲ್ಲಿ ಕೊರೊನಾ ವರದಿ ನೆಗೆಟಿವ್ ಬಂದಿತ್ತು. ಬಳಿಕ ಸಿಟಿ ಸ್ಕ್ಯಾನ್ ಮಾಡಲಾಗಿದೆ. ಈ ವೇಳೆ ದೇವೇಗೌಡರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ.

ಹೆಚ್​ಡಿಡಿ ಕುಟುಂಬದಲ್ಲಿ ಆತಂಕ ಹೆಚ್ಚಾಗಿದ್ದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಕೊರೊನಾ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ದೇವೇಗೌಡ ದಂಪತಿ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ. ಮಣಿಪಾಲ್ ಆಸ್ಪತ್ರೆ ವೈದ್ಯರಿಂದ ದಂಪತಿಗೆ ಕೊರೊನಾ ಚಿಕಿತ್ಸೆ ಮುಂದುವರೆದಿದೆ.

ನನಗೂ ಹಾಗೂ ನನ್ನ ಹೆಂಡತಿ ಚನ್ನಮ್ಮಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಇತ್ತೀಚೆಗೆ ನಮ್ಮ ಸಂಪರ್ಕಕ್ಕೆ ಬಂದವರು ಆದಷ್ಟು ಬೇಗ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ. ಪಕ್ಷದ ಕಾರ್ಯಕರ್ತರು ಹಾಗೂ ಹಿತೈಷಿಗಳು ಯಾರೂ ಆತಂಕ ಪಡೆಬೇಡಿ ಎಂದು ಹೆಚ್.ಡಿ.ದೇವೇಗೌಡ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ವಿನಂತಿಸಿಕೊಂಡಿದ್ದಾರೆ.

ಇನ್ನು ಮಾಜಿ ಪ್ರಧಾನಿ ದೇವೇಗೌಡರಿಗೆ ಕೊರೊನಾ ಸೋಂಕು‌ ತಗುಲಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಟ್ವೀಟ್ ಮೂಲಕ ಬೇಗ ಚೇತರಿಸಿಕೊಳ್ಳುವಂತೆ ಹಾರೈಸಿದ್ದಾರೆ. ಹಿರಿಯ ರಾಜಕಾರಣಿಗಳು ಹಾಗೂ ಮಾಜಿ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ದೇವೇಗೌಡರು ಮತ್ತು ಅವರ ಶ್ರೀಮತಿ ಚನ್ನಮ್ಮನವರು ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಲಿ, ಶೀಘ್ರದಲ್ಲಿ ಚೇತರಿಸಿಕೊಂಡು ಎಂದಿನಂತೆ ತಮ್ಮ ಕೆಲಸಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: TV9 Digital Live| ಕೊವಿಡ್​ ನಿಯಂತ್ರಣ ಮಾಡಲು ಸರ್ಕಾರ ತಂದ ಹೊಸ ಮಾರ್ಗಸೂಚಿ ಸಹಕಾರಿಯಾಗಬಹುದೇ?

The post HD Deve Gowda: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಹಾಗೂ ಚನ್ನಮ್ಮಗೆ ಕೊರೊನಾ ಸೋಂಕು appeared first on TV9 Kannada.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: TV9 Kannada

#Hashtags