Kannada News Now

1.8M Followers

ವಿದ್ಯಾರ್ಥಿ ವೇತನ : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

02 Apr 2021.9:23 PM

ಕೊಪ್ಪ : ಅಲ್ಪಸಂಖ್ಯಾತ ( ಮುಸ್ಲಿಂ, ಕ್ರಿಶ್ಚಿಯನ್, ಸಿಖ್ಖರು , ಜೈನರು, ಬೌದ್ದ, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ 2020-21 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಮುಂದುವರೆದು ಎನ್ ಎಸ್ ಪಿ ಸ್ಕಾಲರ್ ಶಿಪ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಮತ್ತೆ ಎಸ್ ಎಸ್ ಪಿ ಸ್ಕಾಲರ್ ಶಿಪ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಸೂ ಚಿಸಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಆದೇಶ ಹೊರಡಿಸಿತ್ತು.

ವಿದ್ಯಾರ್ಥಿಗಳಿಗೆ ಏಪ್ರಿಲ್ 30 ರೊಳಗಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿದ್ದು,.

ಅರ್ಜಿ ಸಲ್ಲಿಸಿದ ಪ್ರತಿಯನ್ನು ಕಾಲೇಜು ಕಛೇರಿಗೆ ಸಲ್ಲಿಸಲು ಸೂಚಿಸಲಾಗಿದೆ.

(Post-matric, Pre matric and Merit-cum-means Scholarship) ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಎನ್ ಎಸ್ ಪಿ ಸ್ಕಾಲರ್ ಶಿಪ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ SSP ( state scholarship portal ) ನಲ್ಲಿ ಅರ್ಜಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಅರ್ಹ ವಿದ್ಯಾರ್ಥಿಗಳು ಧೃಡೀಕೃತ ದಾಖಲೆಗಳೊಂದಿಗೆ https://ssp.postmatric.karnataka.gov.in/ portal ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು ಆಯಾ ತಾಲೂಕಿನ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಶಾಲಾ/ಕಾಲೇಜು ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.







Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags