ನ್ಯೂಸ್ ಕರ್ನಾಟಕ ಕನ್ನಡ

241k Followers

ಎಸ್‌ಸಿಡಿಸಿಸಿ ಬ್ಯಾಂಕಿಗೆ ದಾಖಲೆಯ 33.65 ಕೋಟಿ ರೂ ಲಾಭ ಗಳಿಕೆ ; ಡಾ ಎಂ ಎನ್‌ ರಾಜೇಂದ್ರ ಕುಮಾರ್‌

03 Apr 2021.5:00 PM

ಮಂಗಳೂರು ; ಅಭಿವೃದ್ಧಿಯ ಮುಂಚೂಣಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಎಸ್‍ಸಿಡಿಸಿಸಿ ಬ್ಯಾಂಕ್) ಮಾರ್ಚ್‌ 31 ಕ್ಕೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ ಒಟ್ಟು 33.65 ಕೋಟಿ ರೂಪಾಯಿಗಳ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅದ್ಯಕ್ಷ ಡಾ ಎಂ ಎನ್‌ ರಾಜೇಂದ್ರ ಕುಮಾರ್‌ ಅವರು ತಿಳಿಸಿದರು. ಪತ್ರಿಕಾ ಗೋಷ್ಟಿಯಲ್ಲಿ ಈ ಮಾಹಿತಿ ನೀಡಿದ ಅವರು 107 ವರ್ಷಗಳ ಬ್ಯಾಂಕಿನ ಇತಿಹಾಸದಲ್ಲೇ ಇದು ಸರ್ವ ಕಾಲಿಕ ದಾಖಲೆ ಆಗಿದೆ ಎಂದರು.
ಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಸ್‍ಸಿಡಿಸಿಸಿ ಬ್ಯಾಂಕ್ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಒಟ್ಟು 105 ಶಾಖೆಗಳನ್ನು ಹೊಂದಿದ್ದು, ಕಳೆದ ಹಣಕಾಸು ವರ್ಷದಲ್ಲಿ 10100.30ಕೋಟಿ ರೂಪಾಯಿಗಳ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಈ ಬಾರಿ ಶೇ.19.30 ಏರಿಕೆಯನ್ನು ಕಂಡಿದೆ. 2021-22ನೇ ಸಾಲಿಗೆ ರೂ.11000.00ಕೋಟಿ ವ್ಯವಹಾರದಗುರಿಯನ್ನು ಬ್ಯಾಂಕ್ ಹೊಂದಿದೆ ಎಂದು ಹೇಳಿದರು. ಬ್ಯಾಂಕು ಒಟ್ಟು 4948.34 ಕೋಟಿ ರೂಪಾಯಿಗಳ ಠೇವಣಿಯನ್ನೂ ಸಂಗ್ರಹಿಸಿದ್ದು ಇದು ಕಳೆದ ವರ್ಷಕ್ಕಿಂತ ಶೇಕಡಾ 17.65 ರಷ್ಟು ಏರಿಕೆ ಎಂದು ಹೇಳಿದರು.
ಕೊರೋನ ಆರ್ಥಿಕ ಹಿನ್ನಡೆಯಲ್ಲಿಯೂ ಬ್ಯಾಂ .3712.67ಕೋಟಿ ರೂ ಮುಂಗಡ ನೀಡಿದೆ. ಕೃಷಿ ಹಾಗೂ ಕೃಷಿ ಅಭಿವೃದ್ಧಿಗೆಅಲ್ಪಾವಧಿ ಸಾಲವಾಗಿ ರೂ.1596.04ಕೋಟಿ ರೂಪಾಯಿ, ಮಧ್ಯಮಾವಧಿ ಸಾಲ ರೂ.129.34ಕೋಟಿ ರೂಪಾಯಿ, ಹೀಗೆ ಕೃಷಿ ಕ್ಷೇತ್ರಕ್ಕೆಒಟ್ಟುರೂ.1725.38ಕೋಟಿರೂಪಾಯಿ ಸಾಲ ನೀಡಲಾಗಿದೆ. ಕೃಷಿ ಹಾಗೂ ಕೃಷಿಯೇತರ ಸಾಲಗಳ ಹೊರಬಾಕಿರೂ.5151.96 ಕೋಟಿಯಾಗಿದೆ ಎಂದೂ ಅವರು ಹೇಳಿದರು.
ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲಾ ಕೃಷಿ ಸಾಲಗಳು ಶೇಕಡಾ 100ರ ಮರುಪಾವತಿಯನ್ನು ಕಂಡು ದಾಖಲೆ ನಿರ್ಮಿಸಿ ಸಾಧನೆಗೈದಿದೆ.

ಇಂತಹ ಸಾಧನೆಯನ್ನು ಕಳೆದ 26ವರ್ಷಗಳಿಂದ ಸತತವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ ಎಂದ ಅವರು ಬ್ಯಾಂಕ್‍ಗೆ ಒಟ್ಟು 1013 ಸಂಘಗಳು ಸದಸ್ಯರಾಗಿವೆ. ಇವುಗಳ ಪಾಲು ಬಂಡವಾಳ ರೂ.263.43ಕೋಟಿ ಆಗಿರುತ್ತದೆ. ಇದು ಕಳೆದ ವರ್ಷಕ್ಕಿಂತ ಶೇ.27.24 ಏರಿಕೆಯಾಗಿದೆ. ದುಡಿಯುವ ಬಂಡವಾಳ ರೂ.7212.71 ಕೋಟಿ ಆಗಿದ್ದು, ಇದು ಕಳೆದ ವರ್ಷಕ್ಕಿಂತ ಶೇಕಡ 18.04 ರಷ್ಟು ಏರಿಕೆ ದಾಖಲಿಸಿದೆ ಎಂದು ಹೇಳಿದರು.
ಮುಂದುವರೆದ ಅವರು ಬ್ಯಾಂಕಿಗೆ 19 ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ, 17 ಬಾರಿ ನಬಾರ್ಡ್ ಪ್ರಶಸ್ತಿ ಸತತವಾಗಿ ದೊರೆತಿದ್ದು ಸತತ 2 ವರ್ಷಗಳಿಂದ "ಎಫ್‍ಸಿಬಿಎ" ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದೆ ಎಂದ ಅವರು ಬ್ಯಾಂಕಿನ ಸರ್ವಾಂಗೀಣ ಸಾಧನೆಗಾಗಿ ಈ ವರ್ಷ ಪ್ರತಿಷ್ಠಿತ "ಬ್ಯಾಂಕೊ ಬ್ಲೂ ರಿಬ್ಬನ್ ಪ್ರಶಸ್ತಿ " ಲಭಿಸಿದೆ. ಎಂದರಲ್ಲದೆ ಸ್ವ ಸಹಾಯ ಗುಂಪುಗಳ ಸಮರ್ಪಕ ಅನುಷ್ಠಾನದಲ್ಲಿ ಬ್ಯಾಂಕ್‍ಗೆ ರಾಜ್ಯದಲ್ಲೇ ಪ್ರಥಮ ಸ್ಥಾನ. ಬ್ಯಾಂಕ್ ಒಟ್ಟು 32700ಗುಂಪುಗಳನ್ನು ಹೊಂದಿದೆ. ಜಿಲ್ಲೆಯಲ್ಲಿ ಒಟ್ಟು 132832 ರೈತರಿಗೆ ಮಂಗಳಾ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ವಿತರಿಸಲಾಗಿದೆ. 87620ಕಿಸಾನ್ ಕ್ರೆಡಿಟ್ ಕಾರ್ಡುದಾರರಿಗೆ ವೈಯುಕ್ತಿಕ ಅಪಘಾತ ವಿಮಾ ಸೌಲಭ್ಯವನ್ನು ಒದಗಿಸಲಾಗಿದೆ.
ಬ್ಯಾಂಕು ಇಂಟರ್ ಬ್ಯಾಂಕ್ ಮೊಬೈಲ್ ಪೇಮೆಂಟ್ ಸಿಸ್ಟಮ್ ಯೋಜನೆ ಯನ್ನು ಕಾರ್ಯಗತಗೊಳಿಸಲು ಚಿಂತನೆ ನಡೆಸಿದೆ. ಇಂಟರ್‍ನೆಟ್ ಬ್ಯಾಂಕಿಂಗ್‍ಸೇವೆ ಶೀಘ್ರದಲ್ಲಿ ಆರಂಭಗೊಳ್ಳಲಿದೆ. ಬ್ಯಾಂಕ್ ಮುಂದಿನ ಅವಧಿಯಲ್ಲಿ 10 ಹೊಸ ಶಾಖೆಗಳನ್ನು ತೆರೆಯುವಯೋಜನೆಯನ್ನು ಹಮ್ಮಿಕೊಂಡಿದೆ. ಪ್ರತೀ ತಾಲೂಕಿನ ಬ್ಯಾಂಕಿನ ಮುಖ್ಯ ಶಾಖೆಗಳಲ್ಲಿ "ಎ.ಟಿ.ಎಂ." ಅಳವಡಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದೂ ಅವರು ಹೇಳಿದರು.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: News Kannada

#Hashtags