Kannada News Now

1.8M Followers

ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಸಿಹಿಸುದ್ದಿ

05 Apr 2021.05:59 AM

ಬೆಂಗಳೂರು : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ರಾಜ್ಯದ ಸಾರಿಗೆ ನೌಕರರಿಗೆ ಇಂದು ಸಿಹಿಸುದ್ದಿ ಸಿಗುವ ಸಾಧ್ಯತೆ ಇದೆ. ಇಂದು ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನವನ್ನು ರಾಜ್ಯ ಸರ್ಕಾರ ಏರಿಕೆ ಮಾಡುವ ಸಾಧ್ಯತೆಯಿದೆ.

ರಾಜ್ಯದ 1 ರಿಂದ 9 ನೇ ತರಗತಿಗೆ ಪರೀಕ್ಷೆ ಇಲ್ಲದೆ ಪಾಸ್? ಇಂದು ಸಚಿವ ಸುರೇಶ್ ಕುಮಾರ್ ಮಹತ್ವದ ಸಭೆ

ರಾಜ್ಯ ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ಇಂದು ಡಿಸಿಎಂ ಲಕ್ಷ್ಮಣ ಸವದಿ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಅಧಿಕಾರಿಗಳ ಜೊತೆಗೆ ಚರ್ಚಿಸಿ ಇಂದು ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ.

`ಫೇಸ್ ಬುಕ್' ಬಳಕೆದಾರರಿಗೆ ಬಿಗ್ ಶಾಕ್ : 50 ಕೋಟಿ ಖಾತೆದಾರರ ಮಾಹಿತಿ ಸೋರಿಕೆ!

ಸಾರಿಗೆ ನೌಕರರು ಏಪ್ರಿಲ್ 7 ರಿಂದ ಆರನೇ ವೇತನ ಆಯೋಗಕ್ಕೆ ಸರಿಸಮಾನದ ವೇತನ ಜಾರಿಗೆ ಏಪ್ರಿಲ್ 7 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಭರದ ಸಿದ್ಧತೆ ನಡೆಸುತ್ತಿರುವ ನಡುವೆಯೇ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡುವ ಭರವಸೆ ನೀಡಿದ್ದಾರೆ.

ವೇತನ ಹೆಚ್ಚಳ ಸಂಬಂಧ ಇಂದು ಸರ್ಕಾರ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದು, ಈ ತೀರ್ಮಾನದ ಬಳಿಕ ಸಾರಿಗೆ ನೌಕರರ ಮುಷ್ಕರದ ಬಗ್ಗೆ ಸ್ಪಷ್ಟತೆ ಸಿಗಲಿದೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags