ಹಾಸನ : ಶಿವಮೊಗ್ಗ ಹಾಗೂ ಚಿಕ್ಕಬಳ್ಳಾಪುರ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಜಿಲೆಟಿನ್ ಕಡ್ಡಿಗಳು ಸ್ಪೋಟಗೊಂಡ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಸ್ಪೋಟ ನಡೆದಿದೆ.
ಹಾಸನ ಜಿಲ್ಲೆಯ ಚಾಕೇನಹಳ್ಳಿಯಲ್ಲಿ ಮತ್ತೊಂದು ಜಿಲೆಟಿನ್ ಸ್ಪೋಟ ನಡೆದಿದ್ದು, ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ..
ಮೃತನನನ್ನು ಸಂಪತ್ (27) ಎಂದು ಗುರುತಿಸಲಾಗಿದ್ದು, ಗಾಯಾಳುಗಳಿಗೆ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಲ್ಲು ಗಣಿಗಾರಿಕೆಗಾಗಿ ಸ್ಪೋಟಕ ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಸ್ಪೋಟ ಸಂಭವಿಸಿದೆ, ಇಂದು ಸ್ಪೋಟಕ ವಿತರಣೆ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಫೋನಿನಲ್ಲಿ ಮಾತನಾಡುತ್ತ ಎರಡು ಬಾರಿ ಲಸಿಕೆ ಕೊಟ್ಟ ನರ್ಸ್
Disclaimer
This story is auto-aggregated by a computer program and has not been created or edited by Dailyhunt Publisher: Kannada News Now