Kannada News Now

1.8M Followers

ವರ್ಗಾವಣೆ ನಿರೀಕ್ಷೆಯಲ್ಲಿರುವ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿ

06 Apr 2021.07:47 AM

ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಜಪಾನ್ ನಲ್ಲಿ ಹರಡುತ್ತಿದೆ 'ಈಕ್ ' ಹೆಸರಿನ ರೂಪಾಂತರ ಕೊರೋನಾ ವೈರಸ್

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗುವುದು. ಸಾವಿರಾರು ಶಿಕ್ಷಕರು ವರ್ಗಾವಣೆ ನಿರೀಕ್ಷೆಯಲ್ಲಿದ್ದಾರೆ. ಶಿಕ್ಷಕರಿಗೆ ನೀಡಿದ ಭರವಸೆಯಂತೆ ವರ್ಗಾವಣೆಗೆ ಅವಕಾಶ ಮಾಡಿಕೊಡಲು ಸುಗ್ರೀವಾಜ್ಞೆ ಹೊರಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಕೊರೊನಾ ಹೆಚ್ಚಳ : ಬಿ.ಎಸ್ ಯಡಿಯೂರಪ್ಪ ಸೇರಿ 11 ರಾಜ್ಯಗಳ ಸಿಎಂಗಳ ಜೊತೆಗೆ ಇಂದು ಕೇಂದ್ರ ಸಚಿವ ಹರ್ಷವರ್ಧನ್ ಮಹತ್ವದ ಸಭೆ

ಕೆಎಟಿ ಆದೇಶದಿಂದ ಕೋರಿಕೆ ಮತ್ತು ಪರಸ್ಪರ ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಿರುವ 75 ಸಾವಿರಕ್ಕೂ ಹೆಚ್ಚು ಶಿಕ್ಷಕರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣೆ ಕಾಯ್ದೆಗೆ ಸಂಬಂಧಿಸಿದಂತೆ ಮಾರ್ಪಾಡು ಮಾಡಿ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಹೇಳಲಾಗುತ್ತಿದೆ.







Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags