Kannada News Now

1.8M Followers

ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ 'ಸೇವೆ ಖಾಯಂ

06 Apr 2021.08:41 AM

ಕುಷ್ಟಗಿ : ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವಂತ ನೌಕರರ ಸೇವೆಯನ್ನು ಹೊಸ ಹುದ್ದೆಗಳನ್ನು ಸೃಷ್ಠಿಸುವ ಮೂಲಕ ಖಾಯಂಗೊಳಿಸಲಾಗುವುದು ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಈ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ಇಂದಿನಿಂದ ಏಪ್ರಿಲ್‌ 10ರವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ಹುದ್ದೆಗಳಿಗೆ ಸಂಬಂಧಿಸಿದ ಹುದ್ದೆಗಳು ಇಲ್ಲದ ಕಾರಣ, ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಯನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುತ್ತಿದೆ.

ಬಹಳ ವರ್ಷಗಳಿಂದ ಇಂತಹ ಗುತ್ತಿಗೆ ನೌಕರರಿಗೆ ಆರ್ಥಿಕ ಸಮಸ್ಯೆಯ ನಡುವೆಯೂ ಇಲಾಖೆಯಿಂದ ಸಂಬಳ ನೀಡುತ್ತ ಬರಲಾಗಿದೆ ಎಂದರು.

ಕೆಲ ಸಮಸ್ಯೆಗಳಿಂದಾಗಿ ತಡೆಹಿಡಿಯಲಾಗಿದ್ದ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸುವಂತೆ 2 ದಿನಗಳ ಹಿಂದಷ್ಟೇ ಇಲಾಖೆಯ ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಈ ಬಗ್ಗೆ ಕೆಲವೇ ದಿನಗಳಲ್ಲಿ ಸ್ಪಷ್ಟ ನಿರ್ಧಾರ ಹೊರಬೀಳಲಿದೆ. ಹೊಸ ಹುದ್ದೆಗಳು ಸೃಷ್ಠಿಯಾದರೂ ಸದ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ತೊಂದರೆಯಾಗುವುದಿಲ್ಲ. ನೇಮಕಾತಿ ಮೂಲಕ ಅವರನ್ನೇ ಕೆಲಸದಲ್ಲಿ ಮುಂದುವರೆಸುವ ಸಂಬಂಧ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದರು.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags